ಬೆಂಗಳೂರು, ನ.10 www.bengaluruwire.com :
ಪ್ರಧಾನಿ ನರೇಂದ್ರ ಮೋದಿ (Prime Minister Narendra Modi ) ನ.11 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಸಮೀಪದ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಕರ್ನಾಟಕದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆಗೊಳಿಸೋ ( Kempegowda statue) ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನ.11ರ ಬೆಳಿಗ್ಗೆ 10 ಗಂಟೆಗೆ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ವಿಧಾನಸೌಧಕ್ಕೆ ರಸ್ತೆ ಮಾರ್ಗದ ಮೂಲಕ ತೆರಳಿ ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿಮಹರ್ಷಿಯವರ ಪ್ರತಿಮೆ ಅನಾವರಣ ಮಾಡಲಿದ್ದಾರೆ.
ನಂತರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ (KSR Railway station) ದಲ್ಲಿ ವಂದೇ ಭಾರತ ರೈಲು ಹಾಗೂ ಕೆಆರ್ ಎಸ್ ನಿಲ್ದಾಣದಿಂದ ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಗೆ ಪ್ರಧಾನಿಯವರು ಚಾಲನೆ ನೀಡಲಿದ್ದಾರೆ. ನಂತರ ಹೆಬ್ಬಾಳದಲ್ಲಿರುವ ಏರ್ ಫೋರ್ಸ್ ಟ್ರೈನಿಂಗ್ ಕಮಾಂಡ್ ಸೆಂಟರ್ ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆಗಾಗಿ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ. ಅಲ್ಲಿನ ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 12:10ಕ್ಕೆ 108 ಅಡಿ ಎತ್ತರದ ಕಂಚಿನ ನಾಡಪ್ರಭು ಕೆಂಪೇಗೌಡ ಪ್ರತಿಮೆಯ ಸ್ಥಳಕ್ಕೆ ಆಗಮಿಸಿ ಆಳೆತ್ತರದ ಮೂರ್ತಿಯನ್ನು ಉದ್ಘಾಟಿಸಲಿದ್ದಾರೆ.
ಪ್ರತಿಮೆಯ ಪದತಲಕ್ಕೆ ಹೂವು ಮತ್ತು ಪವಿತ್ರ ನೀರನ್ನು ಚುಮುಕಿಸಿ ತಮ್ಮ ಭಕ್ತಿ ಪ್ರದರ್ಶಿಸಿ, ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಡಾ.ಅಶ್ವತ್ಥ ನಾರಾಯಣ ಅವರು ಸೇರಿದಂತೆ ಗಣ್ಯರೊಂದಿಗೆ ಪ್ರತಿಮೆ ಮುಂಭಾಗ ಫೊಟೊ ತೆಗೆಸಿಕೊಳ್ಳುವರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಅಮೃತ-2 ಅನ್ನು ಉದ್ಘಾಟನೆ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನ.11ರ ಕರ್ನಾಟಕ ಭೇಟಿಯ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ ಇಲ್ಲಿದೆ :