Tuesday, September 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#KadalekaiParishe 2022 | ಬೆಂಗಳೂರಿನ ಹಳ್ಳಿ ಸೊಗಡಿನ ಪಾರಂಪರಿಕ ಕಡಲೇಕಾಯಿ ಪರಿಷೆಗೆ ಭಾನುವಾರದಿಂದ ವಿದ್ಯುಕ್ತ ಚಾಲನೆ

ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪರಿಷೆ | ಹಸಿ ಕಡಲೇಕಾಯಿ ಸೇರಿಗೆ 30 ರೂ.| ಜಾತ್ರೆಗೆ ಬರುವವರು ಮನೆಯಿಂದ ಕೈಚೀಲ ತನ್ನಿ | ಕೆಂಪಾಂಬುಧಿ ಕೆರೆಯಲ್ಲಿ ನ.21ರ ಸಂಜೆ 6ಕ್ಕೆ ತೆಪ್ಪೋತ್ಸವ | ಕಹಳೆ ಬಂಡೆ ಉದ್ಯಾನವನದಲ್ಲಿ ಮೂರು ದಿನವೂ ಸಂಜೆ 6ರಿಂದ 7.30ರ ತನಕ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ

by Bengaluru Wire Desk
November 24, 2022
in Bengaluru Focus, Public interest
Reading Time: 2 mins read
0
ಕಡಲೇಕಾಯಿ ಪರಿಷೆ ಸಾಂದರ್ಭಿಕ ಚಿತ್ರ (ಕೃಪೆ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ)

ಕಡಲೇಕಾಯಿ ಪರಿಷೆ ಸಾಂದರ್ಭಿಕ ಚಿತ್ರ (ಕೃಪೆ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ)

ಬೆಂಗಳೂರು, ನ.20 www.bengaluruwire.com : ಸಿಲಿಕಾನ್ ಸಿಟಿಯ ಐತಿಹಾಸಿಕ ಜಾತ್ರೆ ಬಸವನಗುಡಿಯ ಕಡಲೆಕಾಯಿ ಪರಿಷೆಗೆ ಭಾನುವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೊಡ್ಡ ಗಣೇಶನಿಗೆ ಹಾಗೂ ದೊಡ್ಡ ಬಸವಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಿದರು. ಈ ಮೂಲಕ ಮೂರು ದಿನಗಳ ಹಳ್ಳಿ ಸೊಗಡಿನ ವಾತಾವರಣದ ಈ ಐತಿಹಾಸಿಕ ಜಾತ್ರೆಗೆ ಕಳೆಕಟ್ಟಿದೆ.

ಶನಿವಾರದಿಂದಲೇ ಕಾಲೇಜು ಯುವಕ, ಯುವತಿಯರು, ಹನುಮಂತನಗರ, ಎನ್.ಆರ್.ಕಾಲೋನಿ, ತ್ಯಾಗರಾಜನಗರ, ಬಸವನಗುಡಿ, ಸುಂಕೇನಹಳ್ಳಿ, ಗುಟ್ಟಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಜನರು ಬಸವನಗುಡಿ ದೊಡ್ಡಗಣಪತಿ ದೇವಸ್ಥಾನದ ರಸ್ತೆಯಲ್ಲಿ ಹಾಗೂ ಆಸುಪಾಸಿನ ರಸ್ತೆಯಲ್ಲಿ ಹಾಕಿರುವ ಕಡಲೇಕಾಯಿ ಅಂಗಡಿಗಳಿಗೆ ತೆರಳಿ ಕಡಲೇಕಾಯಿ ಖರೀದಿಸುತ್ತಿದ್ದರು. ಇಂದು ಭಾನುವಾರ ಕಾರಣ ಬೆಳಗ್ಗೆಯಿಂದಲೇ ಕಡಲೇಕಾಯಿ ಪರಿಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಕಡಲೇಕಾಯಿ ಪರಿಷೆಗೆ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಚಾಲನೆ ನೀಡಿದರು. ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್ ಗರುಡಾಚಾರ್, ಯು.ಬಿ.ವೆಂಕಟೇಶ್, ರವಿಸುಬ್ರಮಣ್ಯ ಹಾಗೂ ವಿಧನಾ ಪರಿಷತ್ ಸದಸ್ಯರಾದ ಶರವಣ, ಮಾಜಿ‌ ಮೇಯರ್ ಕಟ್ಟೆ ಸತ್ಯನಾರಾಯಣ ಪಾಲ್ಗೊಂಡಿದ್ದರು.

ಸಂಜೆಯ ಮೇಲಂತೂ ಪರಿಷೆಗೆ ಬರುವವರ ಸಂಖ್ಯೆ ಹೆಚ್ಚಾಗಿತ್ತು. ಬೆಂಗಳೂರಿನಲ್ಲಿ 500 ವರ್ಷಗಳ ಇತಿಹಾಸವಿರುವ ಪಾರಂಪರಿಕ ಹಿನ್ನಲೆಯಿರುವ ಕಡಲೇಕಾಯಿ ಪರಿಷೆಯಲ್ಲಿ ಈ ಬಾರಿ ಸಂಚಾರಕ್ಕೆ ತೊಂದರೆಯಾಗದಂತೆ ಪಾದಚಾರಿ ಮಾರ್ಗದಲ್ಲಿ 2 ಸಾವಿರ ತಾತ್ಕಾಲಿಕ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆ ಪೈಕಿ 500ಕ್ಕೂ ಹೆಚ್ಚು ಕಡಲೇಕಾಯಿ ಅಂಗಡಿಗಳನ್ನು ವ್ಯಾಪಾರಸ್ತರು ತೆರದಿದ್ದಾರೆ. ಕೋಲಾರ, ಚಿತ್ರದುರ್ಗ, ತಮಿಳುನಾಡು, ಆಂಧ್ರಪ್ರದೇಶ, ರಾಮನಗರ ಸೇರಿದಂತೆ ಹಲವು ಕಡೆಗಳಿಂದ ವಿಧ ವಿಧ ರೀತಿಯ ಕಡಲೆಕಾಯಿಗಳನ್ನು ತಂದು ರೈತರು ಅಂಗಡಿಗಳನ್ನು ಹಾಕಿದ್ದಾರೆ. ಪರಿಷೆ ನಡೆಯುವ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳು ಜಾತ್ರೆಯ ಸೊಬಗನ್ನು ಮತ್ತಷ್ಟು ಹೆಚ್ಚಿಸಿದೆ.

ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ಮಾರಾಟಕ್ಕಿಟ್ಟಿರುವ ಕಡಲೇಕಾಯಿ

ಹಸಿ ಕಡಲೇಕಾಯಿ ಸೇರಿಗೆ 30 ರೂ. :

ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿರುವ ಬಸವನಗುಡಿ ಮುಖ್ಯರಸ್ತೆ

ಹುರಿದಿರುವ ಕಡಲೆಕಾಯಿ ಬೆಲೆ ಸೇರಿಗೆ 30 ರೂ. ಇದ್ದರೆ, ಒಂದು ಲೀಟರ್ ಗೆ 60 ರೂ.ನಷ್ಟಿದೆ. ಅದೇ ರೀತಿ ಹಸಿ ಕಡಲೇಕಾಯಿ ಬೆಲೆ ಸೇರಿಗೆ 30 ರೂ. ಹಾಗೂ ಲೀಟರ್ ಗೆ 50 ರೂ. ದರದಲ್ಲಿ ಮಾರಾಟವಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಕಡಲೇಕಾಯಿ ದರ ಹೆಚ್ಚಳವಾಗಿದೆ ಎಂದು ಖರೀದಿದಾರರು ದೂರುತ್ತಿದ್ದರೆ, ಕಡಲೇಕಾಯಿ ಬೆಳೆ, ಸಾಗಣೆ, ಕೂಲಿ ವೆಚ್ಚ ಮತ್ತಿತರ ಕಾರಣಗಳಿಂದ ಬೆಲೆ ಏರಿಕೆಯಾಗಿದೆ ಎಂದು ವ್ಯಾಪಾರಸ್ಥರೊಬ್ಬರು ಬೆಂಗಳೂರು ವೈರ್ ಗೆ ಹೇಳಿದ್ದಾರೆ.

ಜಾತ್ರೆಗೆ ಬರುವವರು ಮನೆಯಿಂದ ಕೈಚೀಲ ತನ್ನಿ :

ಪ್ರತಿವರ್ಷದಂತೆ ಈ ವರ್ಷವೂ ಪ್ಲಾಸ್ಟಿಕ್ ಮುಕ್ತ ಪರಿಷೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಕಡಲೇಕಾಯಿ ಹಾಗೂ ಪರಿಷೆಯಲ್ಲಿ ಖರೀದಿಸುವ ವಸ್ತುಗಳನ್ನು ಮನೆಗೆ ಕೊಂಡೊಯ್ಯಲು ಚೀಲಗಳನ್ನು ತರುವಂತೆ ಬಿಬಿಎಂಪಿ ಮನವಿ ಮಾಡಿದೆ. ಈ ಬಾರಿಯ ಜಾತ್ರೆಯಲ್ಲಿ 3 ರಿಂದ 4 ಲಕ್ಷ ಜನರು ಭೇಟಿ ನೀಡುವ ಸಾಧ್ಯತೆಯಿದೆ. ಪರಿಷೆಗೆ ಭೇಟಿ ನೀಡುವವರ ಅನುಕೂಲಕ್ಕಾಗಿ ವಾಹನಗಳ ನಿಲುಗಡೆಗೆ ಎಪಿಎಸ್ ಕಾಲೇಜಿನ ಆಟದ ಮೈದಾನ, ಕೊಹಿನೂರು ಆಟದ ಮೈದಾನ ಹಾಗೂ ಆಶ್ರಮ ವೃತ್ತದಲ್ಲಿ ಜಾಗ ಕಲ್ಪಿಸಲಾಗಿದೆ. ದೊಡ್ಡ ಗಣಪತಿ ಹಾಗೂ ಬೃಹತ್ ನಂದಿ ವಿಗ್ರಹದ ದರ್ಶನಕ್ಕಾಗಿ ಅಲ್ಲಲ್ಲಿ ಎಲ್ಇಡಿ ಪರದೆಯನ್ನು ಹಾಕಲಾಗಿದೆ. ಭದ್ರತೆ ಹಾಗೂ ಮುಂಜಾಗ್ರತೆ ದೃಷ್ಟಿಯಿಂದ ಆಯಕಟ್ಟಿನ ಸ್ಥಳಗಳಲ್ಲಿ 30 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಭಕ್ತರಿಗೆ ಮಾರ್ಗದರ್ಶನ ಮಾಡಲು ಹೋಂ ಗಾರ್ಡ್ಸ್ ಮತ್ತು ಧ್ವನಿವರ್ಧಕಗಳ ಮೂಲಕ ಸಂದೇಶ ರವಾನಿಸಲು ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿತ್ತು.

ಕೆಂಪಾಂಬುಧಿ ಕೆರೆಯಲ್ಲಿ ನ.21ರ ಸಂಜೆ 6ಕ್ಕೆ ತೆಪ್ಪೋತ್ಸವ :

ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆಂಪಾಬುಧಿ ಕೆರೆಯಲ್ಲಿ ಕಡಲೇಕಾಯಿ ಪರಿಷೆಯ ಎರಡನೇ ದಿನವಾದ ಸೋಮವಾರ ಸಂಜೆ 6 ಗಂಟೆಗೆ ತೆಪ್ಪೋತ್ಸವ ನಡೆಸಲು ಬಿಬಿಎಂಪಿಯು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಜಾತ್ರೆಯ ನಡೆಯುವ ಪ್ರತಿದಿನ ಸಂಜೆ 6ರಿಂದ 7.30ರ ತನಕ ಕಹಳೆ ಬಂಡೆ ಉದ್ಯಾನವನದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದರೆ. ನರಸಿಂಹ ಸ್ವಾಮಿ ಉದ್ಯಾನವನದಲ್ಲಿ ಸೋಮವಾರ ಮತ್ತು ಮಂಗಳವಾರ ಸಂಜೆ 6ರಿಂದ 7.30ರ ತನಕ ಭರತನಾಟ್ಯ ಮತ್ತು ಸುಗಮ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

ಕಾನೂನು ಸುವ್ಯವಸ್ಥೆ ಕಾಪಾಡಲು 400 ಪೊಲೀಸ್ ಸಿಬ್ಬಂದಿ :

ಕಡಲೇಕಾಯಿ ಪರಿಷೆ ಸ್ಥಳದಲ್ಲಿ ಭಾನುವಾರ ಕಂಡು ಬಂದ ಜನಜಂಗುಳಿ ದೃಶ್ಯ

ಕಾನೂನು ಸುವ್ಯವಸ್ಥೆ ಕಾಪಾಡಲು 400 ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ವಾಹನ, ಆಂಬುಲೆನ್ಸ್, ಸಾರ್ವಜನಿಕರ ಅನುಕೂಲಕ್ಕಾಗಿ ಹಲವು ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಕಳೆದ ಎರಡು ವರ್ಷದಿಂದ ಕಳೆಗುಂದಿದ್ದ ಪರಿಷೆ :

ಬೆಣ್ಣೆಯಿಂದ ಅಲಂಕೃತಗೊಂಡಿರುವ ಶ್ರೀ ದೊಡ್ಡ ಗಣೇಶ

2020 ಹಾಗೂ 2021ರಲ್ಲಿ ಕೋವಿಡ್ ಸೋಂಕಿನಿಂದ ಹಾಗೂ ರಾಜ್ಯ ಸರ್ಕಾರದ ಹಲವು ಪರಿಷೆಗೆ ಸಾಕಷ್ಟು ನಿರ್ಬಂಧ ಹಾಗೂ ಷರತ್ತುಗಳನ್ನು ವಿಧಿಸಲಾಗಿತ್ತು. ಹೀಗಾಗಿ ಕಡಲೆಕಾಯಿ, ಆಟಿಕೆ, ಕರಕುಶಲ ವಸ್ತುಗಳು, ತಿಂಡಿ- ತಿನಿಸುಗಳ ವ್ಯಾಪಾರ ನಡೆದಿರಲಿಲ್ಲ. ಆದರೆ ಈ ಬಾರಿ ಕಡಲೇಕಾಯಿ ಪರಿಷೆ ಕೋವಿಡ್ ಸೋಂಕು ಬಹುತೇಕ ಇಲ್ಲದ ಕಾರಣ ಬಸವನಗುಡಿ ರಸ್ತೆ ಹಾಗೂ ಸುತ್ತಮುತ್ತಲ ಬೀದಿಗಳಲ್ಲಿ ಕಡೆಲೆಕಾಯಿ ಮಾರಾಟ, ಆಟಿಕೆ, ತಿಂಡಿ ತಿನಿಸು, ಬಟ್ಟೆ, ಮನೆಯ ಅಡುಗೆ ಸಾಮಾನುಗಳು, ಕರಕುಶಲ ವಸ್ತುಗಳು ಸೇರಿದಂತೆ ನಾನಾ ರೀತಿಯ ವ್ಯಾಪಾರ ಮಳಿಗೆಗಳು ತಲೆ ಎತ್ತಿದ್ದು, ಅದನ್ನು ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಪರಿಷೆಗೆ ಬರುವವರ ಓಡಾಟಕ್ಕಾಗಿ ಸುತ್ತಮುತ್ತಲ ಪ್ರದೇಶದಲ್ಲಿ ಕೆಲವು ದಿನಗಳ ಕಾಲ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.

ಕಡಲೆಕಾಯಿ ಪರಿಷೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್ ಗರುಡಾಚಾರ್, ರವಿಸುಬ್ರಮಣ್ಯ, ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ, ಬಿಬಿಎಂಪಿ‌ ಆಡಳಿತ ಅಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಪಾಲಿಕೆ ವಿಶೇಷ ಆಯುಕ್ತರಾದ ಜಯರಾಮ್ ರಾಯ್ ಪುರ್, ದಕ್ಷಿಣ ವಲಯದ ಜಂಟಿ ಆಯುಕ್ತರಾದ ಜಗದೀಶ್ ನಾಯಕ್ ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Defence News | ರಾಜ್ಯದಲ್ಲಿ ಪತ್ರಕರ್ತರು ಮತ್ತು ಭಾರತೀಯ ಸೇನೆ ನಡುವೆ ನಡೆದ ಪ್ರಪ್ರಥಮ ಕ್ರಿಕೆಟ್ ಪಂದ್ಯ : ಆರ್ಮಿ ಇಲವೆನ್ ಎದುರು ಗೆದ್ದ ಮಾಧ್ಯಮ ಇಲವೆನ್ ತಂಡ

Next Post

#PEPE #PRKAudio | ಹಲವು ತಿರುವುಗಳನ್ನು ಹೊಂದಿದ ವಿಭಿನ್ನ ಸಿನಿಮಾ ‘ಪೆಪೆ’ಚಿತ್ರೀಕರಣ ಮುಕ್ತಾಯ – ರೀಲ್ ಅಲ್ಲ ರಿಯಲ್ ಫೈಟಿಂಗ್ ಮಾಡಿದ ವಿನಯ್ ರಾಜಕುಮಾರ್

Next Post
'ಪೆಪೆ' ಸಿನಿಮಾದ ದೃಶ್ಯವೊಂದರ ಚಿತ್ರ

#PEPE #PRKAudio | ಹಲವು ತಿರುವುಗಳನ್ನು ಹೊಂದಿದ ವಿಭಿನ್ನ ಸಿನಿಮಾ ‘ಪೆಪೆ’ಚಿತ್ರೀಕರಣ ಮುಕ್ತಾಯ – ರೀಲ್ ಅಲ್ಲ ರಿಯಲ್ ಫೈಟಿಂಗ್ ಮಾಡಿದ ವಿನಯ್ ರಾಜಕುಮಾರ್

ಬಿಡಿಎ ಜೆಪಿನಗರದ ಆಲಹಳ್ಳಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಚಿತ್ರ

BDA NEWS | ಬಿಡಿಎ ನಕಲಿ ಎನ್ ಒಸಿ ಇಟ್ಟುಕೊಂಡು ಜಾಗ ಅತಿಕ್ರಮಣ ಮಾಡಿದರೆ ಕ್ರಿಮಿನಲ್ ಕೇಸ್ : ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಎಚ್ಚರಿಕೆ!!

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d