Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Election | ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಚಿಲುಮೆ’ ಚುನಾವಣಾ ಅಕ್ರಮ ಪ್ರಕರಣ : ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತಿಗೆ ಕೇಂದ್ರ ಚುನಾವಣಾ ಆಯೋಗ ಆದೇಶ – ECI ನಿರ್ದೇಶಗಳೇನು?

ಕೇಂದ್ರ ಚುನಾವಣಾ ಆಯೋಗ ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ಪರಿಶೀಲನೆ, ಚುನಾವಣಾ ಅಕ್ರಮ ಕುರಿತಂತೆ ಕೈಗೊಂಡ ಕ್ರಮಗಳೇನು? ಇಲ್ಲಿದೆ ಮಾಹಿತಿ

by Bengaluru Wire Desk
November 26, 2022
in Bengaluru Focus, News Wire
Reading Time: 1 min read
0
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.26 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಜಾಗೃತಿ ಮೂಡಿಸುವ ನೆಪದಲ್ಲಿ ಮನೆ ಮನೆಗೆ ತೆರಳಿ ಮತದಾರರ ಸಮೀಕ್ಷೆ ನಡೆಸಿ ನಿಯಮ ಉಲ್ಲಂಘಿಸಿದ ಚಿಲುಮೆ ಸಂಸ್ಥೆಯ ಅಕ್ರಮದಲ್ಲಿ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಖಾಸಗಿ ವ್ಯಕ್ತಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳು (BLO/BLCs) ಎಂಬ ಗುರುತಿನ ಚೀಟಿ ನೀಡಿರುವುದು  ತನಿಖಾ ವರದಿ ಖಚಿತವಾದ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಇಬ್ಬರು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದೆ.

ಇದಲ್ಲದೆ ಈ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆಗೆ ನಿರ್ದೇಶನ ನೀಡಿದೆ. ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತಿಗೆ ನಿರ್ದೇಶನ ನೀಡಿದೆ. ಬಿಬಿಎಂಪಿಯ ವಿಶೇಷ ಆಯುಕ್ತ ರಂಗಪ್ಪ ಅವರು, ಶಿವಾಜಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರು. ಹಾಗೂ ಶ್ರೀನಿವಾಸ್ ಮಹದೇವಪುರ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರು. ಈ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ, ಇಲಾಖೆ ವಿಚಾರಣೆ ವಿಚಾರಣೆ ಆರಂಭಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.

ಚಿಲುಮೆ ಸಂಸ್ಥೆಯು ಮತದಾರರ ಜಾಗೃತಿ ಅಭಿಯಾನವನ್ನು ದುರುಪಯೋಗಪಡಿಸಿಕೊಂಡು ಮತದಾರರ ಮಾಹಿತಿ ಕದ್ದಿದೆ ಹಾಗೂ ಮತಪಟ್ಟಿಗೆಗೆ ಅಕ್ರಮವಾಗಿ ಮತದಾರರ ಹೆಸರು ಸೇರ್ಪಡೆ ಹಾಗೂ ಪಟ್ಟಿಯಿಂದ ಹೆಸರು ತೆಗೆದುಹಾಕುವ ಕೆಲಸ ಮಾಡಿದೆ ಎಂಬ ಬಗ್ಗೆ ಮಾಧ್ಯಮಗಳ ವರದಿ, ರಾಜಕೀಯ ಪಕ್ಷಗಳು ಈ ಕುರಿತಂತೆ ಆಯೋಗಕ್ಕೆ ದೂರು ನೀಡಿದೆ. ಇದಲ್ಲದೆ ಕಾಡುಗೋಡಿ ಪೊಲೀಸ್ ಠಾಣೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣದ ಕುರಿತಂತೆ ತನಿಖೆ ನಡೆದು ಎಫ್ ಐಆರ್ ದಾಖಲಾಗಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಬಿಸ್ವಾಸ್ ಆಡಳಿತಾತ್ಮಕ ತನಿಖೆಗೆ ಆದೇಶಿಸಿದ್ದಾರೆ. ಆಯೋಗವು ಈ ಪ್ರಕರಣ ಕುರಿತಂತೆ ವರದಿ ಪಡೆದ ಬಳಿಕ ಈ ಕ್ರಮ ಕೈಗೊಂಡಿದೆ.

ಕೇಂದ್ರ ಚುನಾವಣಾ ಆಯೋಗದ ಕಚೇರಿ – ಸಾಂದರ್ಭಿಕ ಚಿತ್ರ

ಶಿವಾಜನಿಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಹಾಗೂ ಪಟ್ಟಿಯಿಂದ ಮತದಾರರ ಹೆಸರನ್ನು ಕೈಬಿಟ್ಟಿರುವ ಕುರಿತು ಶೇ.100ರಷ್ಟು ಪರಿಶೀಲನೆ ನಡೆಸಬೇಕು ಎಂದು ಆಯೋಗ ಹೇಳಿದೆ. ಈ ಕುರಿತಂತೆ ಮೂರು ಕ್ಷೇತ್ರಗಳಲ್ಲಿನ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆಗೆ ಬಿಬಿಎಂಪಿ ಅಧಿಕಾರ ವ್ಯಾಪ್ತಿಯಿಂದ ಹೊರಗಿರುವ ಮೂರು ಐಎಎಸ್ ಅಧಿಕಾರಿಗಳನ್ನು ಆಯೋಗ ನೇಮಕ ಮಾಡಿದೆ. ಚಿಕ್ಕಪೇಟೆ ಕ್ಷೇತ್ರಕ್ಕೆ ಡಾ.ಆರ್‌.ವಿಶಾಲ್‌, ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹಾಗೂ ಮಹದೇವಪುರ ಕ್ಷೇತ್ರಕ್ಕೆ ಅಜಯ್‌ ನಾಗಭೂಷಣ್‌ ಅವರನ್ನು ಆಯೋಗ ನೇಮಕ ಮಾಡಿದೆ.

3 ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಅವಧಿ ವಿಸ್ತರಣೆ:

ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಅಭಿಯಾನದ ಡಿಸೆಂಬರ್‌ 9ಕ್ಕೆ ಕೊನೆಗೊಳ್ಳಲಿದೆ. ಆದರೆ, ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ.24ರವರೆಗೂ ವಿಶೇಷ ಪರಿಷ್ಕರಣಾ ಅಭಿಯಾನ ನಡೆಸುವಂತೆ ಆಯೋಗ ಆದೇಶಿಸಿದೆ.

ಈ ಮೂರೂ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ಸೇರಿಸಿರುವ ಹೆಸರುಗಳು ಮತ್ತು ಕೈಬಿಡಲಾಗಿರುವ ಹೆಸರುಗಳ ಸಂಪೂರ್ಣ ವಿವರಗಳನ್ನು ನೋಂದಾಯಿತ ರಾಜಕೀಯ ಪಕ್ಷಗಳ ಜತೆ ಹಂಚಿಕೊಳ್ಳಲಾಗುವುದು. ಆ ಪಟ್ಟಿಯನ್ನು ಪರಿಶೀಲಿಸಿ ದೂರು ಮತ್ತು ಆಕ್ಷೇಪಣೆ ಸಲ್ಲಿಸಲು ಅವರಿಗೆ ಅವಕಾಶವಿರುತ್ತದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನೋಂದಾಯಿತ ರಾಜಕೀಯ ಪಕ್ಷಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಗೆ ವೀಕ್ಷಕರ ನೇಮಕ :

ಬಿಬಿಎಂಪಿ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೂ ವೀಕ್ಷಕರನ್ನಾಗಿ ಐಎಎಸ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಬಿಬಿಎಂಪಿ ಕೇಂದ್ರ ವಲಯಕ್ಕೆ ಉಜ್ವಲ್‌ ಘೋಷ್‌, ಉತ್ತರ ವಲಯಕ್ಕೆ ರಾಮಚಂದ್ರನ್‌ ಆರ್‌., ದಕ್ಷಿಣ ವಲಯಕ್ಕೆ ಪಿ.ರಾಜೇಂದ್ರ ಚೋಳನ್‌, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಡಾ.ಎನ್‌.ಮಂಜುಳಾ ಅವರನ್ನು ವೀಕ್ಷಕರಾಗಿ ಕೇಂದ್ರ ಚುನಾವಣಾ ಆಯೋಗ ನೇಮಿಸಿದೆ. ಇವರು ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ಕ್ಷೇತ್ರಗಳನ್ನು ಹೊರತುಪಡಿಸಿ ಆಯಾ ವಲಯದ ಎಲ್ಲ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ನಿಗಾವಹಿಸಬೇಕು ಎಂದು ತಿಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮಗಳ ಕುರಿತು ವಿಚಾರಣೆ ನಡೆಸುತ್ತಿರುವ ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್‌ ಅವರಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆಯ ಸಮಗ್ರ ಮೇಲುಸ್ತುವಾರಿಯ ಜವಾಬ್ದಾರಿಯನ್ನೂ ನೀಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಈ ಕೆಲಸಕ್ಕೆ ಅವರು ಮುಖ್ಯ ಚುನಾವಣಾಧಿಕಾರಿಯ ಒಪ್ಪಿಗೆಯೊಂದಿಗೆ ಯಾವುದೇ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಅಧಿಕಾರ ನೀಡಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮದ ಕುರಿತು ನಡೆಸುತ್ತಿರುವ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆಯೂ ಆಯೋಗ ಸೂಚಿಸಿದೆ.

ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳಿಗೆ ನೀಡಿರುವ ಕೆಲವು ಪ್ರಮುಖ ನಿರ್ದೇಶಗಳು ಹೀಗಿವೆ
WhatsApp Join our WhatsApp Channel
Previous Post

Karnataka News | ನಿರುದ್ಯೋಗಿಗಳಿಗೆ ಸಿಹಿ ಸುದ್ದಿ : ಕೌಶಲ್ಯಾಭಿವೃದ್ಧಿ ಇಲಾಖೆಯಿಂದ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ

Next Post

#ViralVideo |18 ಚಕ್ರದ ಬೃಹತ್ ಟ್ರಕ್  ಒಳಗೆ ಕೂರದೆ ಹಿಮ್ಮುಖವಾಗಿ ಗಾಡಿ ಪಾರ್ಕಿಂಗ್ ಮಾಡುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್

Next Post
ಸಾಮಾಜಿಕ ಜಾಲತಾಣದಲ್ಲಿ ಟ್ರಕ್ ಡ್ರೈವರ್ ಒಬ್ಬ ಹೊರಗಿನಿಂದಲೇ 18 ಚಕ್ರದ ವಾಹನವನ್ನು ಪಾರ್ಕಿಂಗ್ ಮಾಡುತ್ತಿರುವ ದೃಶ್ಯದ ಸ್ಕ್ರೀನ್ ಶಾಟ್. 
ಸೂಚನೆ : ವಿಸ್ತ್ರತ ಸುದ್ದಿಯ ಕೆಳಭಾಗದಲ್ಲಿ ವೈರಲ್ ವಿಡಿಯೋ ಇದೆ.

#ViralVideo |18 ಚಕ್ರದ ಬೃಹತ್ ಟ್ರಕ್  ಒಳಗೆ ಕೂರದೆ ಹಿಮ್ಮುಖವಾಗಿ ಗಾಡಿ ಪಾರ್ಕಿಂಗ್ ಮಾಡುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್

ಆಯುಷ್ಮಾನ್ ಭಾರತ್ ಅಭಿಯಾನದ ಸಾಂದರ್ಭಿಕ ಚಿತ್ರ

#AyushmanBharatMission | ರಾಷ್ಟ್ರಮಟ್ಟದ ಆರೋಗ್ಯ ಸೌಕರ್ಯದಲ್ಲಿ ಕರ್ನಾಟಕದ ಪರಿಸ್ಥಿತಿ ಹೀಗಿದೆ ನೋಡಿ...!

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group