Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#HAL Green Field Factory | ತುಮಕೂರಿನ ಅತ್ಯಾಧುನಿಕ ಎಚ್ಎಎಲ್ ಗ್ರೀನ್ ಫೀಲ್ಡ್  ಹೆಲಿಕಾಪ್ಟರ್ ಕಾರ್ಖಾನೆ ವಿಶೇಷತೆಗಳೇನು? ರಾಷ್ಟ್ರದ ರಕ್ಷಣಾ ಶಕ್ತಿಗೆ ಹೇಗೆ ಸಹಾಯಕ?

ದೇಶದ ಹೆಲಿಕಾಪ್ಟರ್ ಅವಶ್ಯಕತೆಯನ್ನು ಪೂರೈಸಲಿದೆ ಎಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆ | ಪ್ರಧಾನಿ ನರೇಂದ್ರ ಮೋದಿಯಿಂದ ಫೆ.6ರಂದು ರಾಷ್ಟ್ರಕ್ಕೆ ಸಮರ್ಪಣೆ | ಅತ್ಯಾಧುನಿಕ ತಂತ್ರಜ್ಞಾನ, ಸೌಲಭ್ಯಗಳನ್ನು ಹೊಂದಿದ ಕಾರ್ಖಾನೆ

by Bengaluru Wire Desk
February 6, 2023
in News Wire, Public interest
Reading Time: 2 mins read
0
ತುಮಕೂರಿನ ಗುಬ್ಬಿ ತಾಲೂಕಿನ  ಬಿದರೆಹಳ್ಳ ಕಾವಲ್ ನಲ್ಲಿನ ಎಚ್ಎಎಲ್ ಸಂಸ್ಥೆಯ ಅತ್ಯಾಧುನಿಕ ಗ್ರೀನ್ ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆ ಚಿತ್ರ

ತುಮಕೂರಿನ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ ನಲ್ಲಿನ ಎಚ್ಎಎಲ್ ಸಂಸ್ಥೆಯ ಅತ್ಯಾಧುನಿಕ ಗ್ರೀನ್ ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆ ಚಿತ್ರ

ತುಮಕೂರು, ಫೆ.6 www.bengaluruwire.com : ದೇಶದ ರಕ್ಷಣೆಯಲ್ಲಿ ‘ಆತ್ಮನಿರ್ಭರ್ತ’ದತ್ತ ಮತ್ತೊಂದು ಹೆಜ್ಜೆಯಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಇಲ್ಲಿನ ಗುಬ್ಬಿ ತಾಲೂಕು ಬಿದಿರೆಹಳ್ಳ ಕಾವಲ್ ನಲ್ಲಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (HAL) ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಎಚ್ಎಎಲ್ ನ ಈ ಗ್ರೀನ್‌ಫೀಲ್ಡ್ ಹೆಲಿಕಾಪ್ಟರ್ ಫ್ಯಾಕ್ಟರಿ 615 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ಇದು ದೇಶದ ಎಲ್ಲಾ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಒಂದೆಡೇ ಎಲ್ಲಾ ಸೌಲಭ್ಯವನ್ನು ಹೊಂದಿದ ಕೇಂದ್ರವಾಗಿ ದೂರದೃಷ್ಟಿಯೊಂದಿಗೆ ಸ್ಥಾಪಿಸಲಾಗಿದೆ. ಇಲ್ಲಿ ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯವನ್ನು ಕಲ್ಪಿಸಿದ್ದು, ಆರಂಭದಲ್ಲಿ ಲಘು ಉಪಯುಕ್ತತೆ ಹೆಲಿಕಾಪ್ಟರ್‌ಗಳನ್ನು (LUHs) ಉತ್ಪಾದಿಸಲಾಗುತ್ತದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ

ಎಲ್ ಯುಎಚ್ ಹೆಲಿಕಾಪ್ಟರ್ ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ 3-ಟನ್ ವರ್ಗದ್ದಾಗಿದ್ದು, ಏಕ ಇಂಜಿನ್ ಹಾಗೂ ವಿವಿಧೋದ್ದೇಶ ಉಪಯುಕ್ತತೆಯ ಹೆಲಿಕಾಪ್ಟರ್ ಆಗಿರುತ್ತದೆ.  ಹೆಚ್ಚಿನ ಕುಶಲತೆಯ ವಿಶಿಷ್ಟ ಲಕ್ಷಣಗಳನ್ನು ಹೊಂದಿದೆ. ಆರಂಭದಲ್ಲಿ, ಈ ಕಾರ್ಖಾನೆಯು ವರ್ಷಕ್ಕೆ ಸುಮಾರು 30 ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುತ್ತದೆ ಮತ್ತು ಹಂತ ಹಂತವಾಗಿ ವರ್ಷಕ್ಕೆ 60 ಮತ್ತು ನಂತರ 90 ಕ್ಕೆ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮೊದಲ ಎಲ್ ಯುಎಚ್ ಹೆಲಿಕಾಪ್ಟರ್ ಅನ್ನು ಕಠಿಣ ಪರೀಕ್ಷೆಗೆ ಒಳಪಡಿಸಲಾಗಿದ್ದು ಮತ್ತು ಇದು ಪೂರ್ಣ ರೀತಿಯಲ್ಲಿ ಬಳಕೆಗೆ ಸಿದ್ಧವಾಗಿದೆ.

ಬಹು ವಿಧದ ಹೆಲಿಕಾಪ್ಟರ್ ತಯಾರಿಕ ಕೇಂದ್ರ :

ಲೈಟ್ ಕಾಂಬ್ಯಾಟ್ ಹೆಲಿಕಾಪ್ಟರ್‌ಗಳು (LCH ಗಳು) ಮತ್ತು ಇಂಡಿಯನ್ ಮಲ್ಟಿರೋಲ್ ಹೆಲಿಕಾಪ್ಟರ್‌ (IMRHs) ನಂತಹ ಇತರ ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸಲು ಕಾರ್ಖಾನೆಯ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತದೆ. ಇದನ್ನು ಭವಿಷ್ಯದಲ್ಲಿ ಹಗುರ ಯುದ್ಧ ಹೆಲಿಕಾಪ್ಟರ್, ಹಗುರ ಉಪಯುಕ್ತತೆ ಹೆಲಿಕಾಪ್ಟರ್, ಸುಧಾರಿತ ನಾಗರೀಕ ಹಗುರ ಹೆಲಿಕಾಪ್ಟರ್ 

ಎಚ್ಎಎಲ್ ನಿರ್ಮಿತ ಹೆಲಿಕಾಪ್ಟರ್ ಗಳ ಚಿತ್ರ

(ALH) ಮತ್ತು ಭಾರತೀಯ ಬಹುಪಯೋಗಿ ಹೆಲಿಕಾಪ್ಟರ್ (IMRH) ನ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ ಪರೀಕ್ಷೆಗೆ ಸಹ ಬಳಸಲಾಗುತ್ತದೆ. ಈ ಕಾರ್ಖಾನೆಯಿಂದ ಸಿವಿಲ್ LUH ನ ಸಂಭಾವ್ಯ ರಫ್ತುಗಳನ್ನು ಸಹ ಪೂರೈಸಲಾಗುತ್ತದೆ.

ಒಂದು ಸಾವಿರಕ್ಕೂ ಹೆಚ್ಚಿನ ಹೆಲಿಕಾಪ್ಟರ್ ಉತ್ಪಾದನೆ ಗುರಿ :

3 ರಿಂದ 15 ಟನ್‌ಗಳ ಭಾರವಿರುವ ಹೆಲಿಕಾಪ್ಟರ್ ವರ್ಗದಲ್ಲಿ 1,000 ಕ್ಕೂ ಹೆಚ್ಚು ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸಲು ಎಚ್ಎಎಲ್ ಯೋಜನೆ ರೂಪಿಸಿಕೊಂಡಿದೆ. 20 ವರ್ಷಗಳ ಅವಧಿಯಲ್ಲಿ ಒಟ್ಟು ನಾಲ್ಕು ಲಕ್ಷ ಕೋಟಿ ರೂ. ವ್ಯವಹಾರ ಮಾಡುವ, ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗವನ್ನು ಸೃಷ್ಟಿಸಲಿದೆ.  ತುಮಕೂರಿನಲ್ಲಿ ಹೆಲಿಕಾಪ್ಟರ್ ಉತ್ಪಾದನಾ ಕೇಂದ್ರವು ತನ್ನ ಸಾಮಾಜಿಕ ಜವಾಬ್ದಾರಿ ಹೊಣೆಗಾರಿಕೆ (Corporate Social Responsibility) ಚಟುವಟಿಕೆಗಳ ಮೂಲಕ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಯನ್ನು ದೊಡ್ಡ ಪ್ರಮಾಣದ ಸಮುದಾಯ ಕೇಂದ್ರಿತ ಕಾರ್ಯಕ್ರಮಗಳೊಂದಿಗೆ ಉತ್ತೇಜಿಸಲಿದೆ. ಇದಕ್ಕಾಗಿ ಕಂಪನಿಯು ಗಣನೀಯ ಮೊತ್ತವನ್ನು ಖರ್ಚು ಮಾಡುತ್ತದೆ. ಇದೆಲ್ಲವೂ ಈ ಪ್ರದೇಶದ ಜನರ ಜೀವನದಲ್ಲಿ ಸುಧಾರಣೆಗೆ ಕಾರಣವಾಗುತ್ತದೆ.

ಸ್ಥಳೀಯರ ಜೀವನ ಗುಣಮಟ್ಟ ಹೆಚ್ಚಳಕ್ಕೆ ಸಹಾಯಕ :

ಬೆಂಗಳೂರಿನಲ್ಲಿ ಅಸ್ತಿತ್ವದಲ್ಲಿರುವ ಎಚ್ಎಲ್ ಸೌಲಭ್ಯಗಳೊಂದಿಗೆ ಕಾರ್ಖಾನೆಯ ಸಾಮೀಪ್ಯವು ಈ ಪ್ರದೇಶದಲ್ಲಿ ಏರೋಸ್ಪೇಸ್ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ ಮತ್ತು ಶಾಲೆಗಳು, ಕಾಲೇಜುಗಳು ಮತ್ತು ವಸತಿ ಪ್ರದೇಶಗಳಂತಹ ಕೌಶಲ್ಯ ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ಬೆಂಬಲಿಸುತ್ತದೆ. ವೈದ್ಯಕೀಯ ಮತ್ತು ಆರೋಗ್ಯ ರಕ್ಷಣೆಗಾಗಿ ಹತ್ತಿರದ ಪಂಚಾಯತ್‌ಗಳಲ್ಲಿ ವಾಸಿಸುವ ಸಾವಿರಾರು ಜನರನ್ನು ತಲುಪುತ್ತದೆ.

ಎಚ್ಎಎಲ್ ನ ಗ್ರೀನ್‌ಫೀಲ್ಡ್ ಹೆಲಿಕಾಪ್ಟರ್ ಫ್ಯಾಕ್ಟರಿ ಪಕ್ಷಿನೋಟ

ಬಹು ವಿಧದ ಸೌಲಭ್ಯದ ಕಾರ್ಖಾನೆ :

ಹೆಲಿಕಾಪ್ಟರ್ ರನ್‌ವೇ, ಫ್ಲೈಟ್ ಹ್ಯಾಂಗರ್, ಫೈನಲ್ ಅಸೆಂಬ್ಲಿ ಹ್ಯಾಂಗರ್, ಸ್ಟ್ರಕ್ಚರ್ ಅಸೆಂಬ್ಲಿ ಹ್ಯಾಂಗರ್, ಏರ್ ಟ್ರಾಫಿಕ್ ಕಂಟ್ರೋಲ್ ಮತ್ತು ವಿವಿಧ ಅಗತ್ಯ ಸೇವಾ ಸೌಲಭ್ಯಗಳಂತಹ ಸೌಲಭ್ಯಗಳ ಸ್ಥಾಪನೆಯೊಂದಿಗೆ, ಕಾರ್ಖಾನೆಯು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಖಾನೆಯು ಅತ್ಯಾಧುನಿಕ ಇಂಡಸ್ಟ್ರಿ 4.0 ಸ್ಟ್ಯಾಂಡರ್ಡ್ ಉಪಕರಣಗಳು ಮತ್ತು ಅದರ ಕಾರ್ಯಾಚರಣೆಗಳಿಗಾಗಿ ತಂತ್ರಗಳನ್ನು ಹೊಂದಿದೆ.

ಎಚ್ಎಎಲ್ ನ ಈ ಗ್ರೀನ್‌ಫೀಲ್ಡ್ ಹೆಲಿಕಾಪ್ಟರ್ ಫ್ಯಾಕ್ಟರಿ ಸ್ಥಾಪನೆಗೆ ಇದೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2016ರಲ್ಲಿ ಅಡಿಪಾಯವನ್ನು ಹಾಕಿದ್ದರು. ಈ ಕಾರ್ಖಾನೆಯು ಭಾರತವು ತನ್ನ ಸಂಪೂರ್ಣ ಹೆಲಿಕಾಪ್ಟರ್‌ ಅವಶ್ಯಕತೆಗಳನ್ನು ಆಮದು ಮಾಡಿಕೊಳ್ಳದಿರುವಷ್ಟು ಪ್ರಮಾಣದಲ್ಲಿ ಪೂರೈಕೆ ಮಾಡುವಷ್ಟು ಸಜ್ಜುಗೊಳಿಸಲಾಗಿದೆ.ಪ್ರಧಾನಮಂತ್ರಿಯವರ ‘ಆತ್ಮನಿರ್ಭರ್ ಭಾರತ್’ ನ ದೃಷ್ಟಿಕೋನಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ವಿನ್ಯಾಸ, ಅಭಿವೃದ್ಧಿಯಲ್ಲಿ ಮತ್ತು ತಯಾರಿಕೆ ಮಾಡಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಿರಿಯ ಅಧಿಕಾರಿಗಳು ರಕ್ಷಣಾ ಸಚಿವಾಲಯದ ಅಧಿಕಾರಿಗಳು, ಎಚ್ಎಎಲ್ ಹೆಲಿಕಾಪ್ಟರ್ ತಯಾರಿಕಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Nadadevate | ನಾಡಿಗೊಂದೇ ಕನ್ನಡಾಂಬೆಯ ಭಾವಚಿತ್ರ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Next Post

#BDA News | ಕೆಂಪೇಗೌಡ ಬಡಾವಣೆ ಭೂ ಸ್ವಾಧೀನ ಪ್ರಕರಣ : ಕೋರ್ಟ್ ಪ್ರಕರಣ ವಾಪಸಾತಿಗೆ ಬಿಡಿಎನಿಂದ ರೈತರಿಗೆ ಮನವಿ

Next Post
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

#BDA News | ಕೆಂಪೇಗೌಡ ಬಡಾವಣೆ ಭೂ ಸ್ವಾಧೀನ ಪ್ರಕರಣ : ಕೋರ್ಟ್ ಪ್ರಕರಣ ವಾಪಸಾತಿಗೆ ಬಿಡಿಎನಿಂದ ರೈತರಿಗೆ ಮನವಿ

Airport News | ಬೆಂಗಳೂರು ಏರ್ ಪೋರ್ಟ್: 2022ನೇ ಇಸವಿಯಲ್ಲಿ 27.50 ದಶಲಕ್ಷ ಪ್ರಯಾಣಿಕರ ಪ್ರಯಾಣ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d