Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ENERGY NEWS | ಪವರ್ ಜೊತೆ ʼಪವರ್‌ ಪಾಲಿಟಿಕ್ಸ್‌ʼ ಬೇಡ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

200 ಯೂನಿಟ್‌ ಉಚಿತ ವಿದ್ಯುತ್‌ ಭರವಸೆ ಹುಸಿ ಘೋ಼ಷಣೆ : ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ಘೋಷಣೆ ಬಗ್ಗೆ ಟೀಕಿಸಿದ ಸಿಎಂ ಬಸವರಾಜ ಬೊಮ್ಮಾಯಿ | ನವೀಕರಿಸಬಹುದಾದ ಇಂಧನ ಪಂಪ್‌ ಸ್ಟೊರೇಜ್‌ ಸೋಲಾರ್‌ ಬ್ಯಾಟರಿ ಪೂರೈಸಲು ಸರ್ಕಾರ ಮುಂದಾಗಿದೆ

by Bengaluru Wire Desk
March 6, 2023
in News Wire
Reading Time: 1 min read
0
ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯಲ್ಲಿ ಬೆಸ್ಕಾಂ ವ್ಯಾಪ್ತಿಯ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಸಚಿವ ವಿ.ಸುನಿಲ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೆಶಕ ಮಹಾಂತೇಶ ಬೀಳಗಿ ಮತ್ತಿತರರು ಚಿತ್ರದಲ್ಲಿದ್ದಾರೆ.

ಬೆಂಗಳೂರು, ಮಾ.6 www.bengaluruwire.com : ಪವರ್‌ (ಇಲೆಕ್ಟ್ರಿಸಿಟಿ) ಜೊತೆ ʼಪವರ್‌ ಪಾಲಿಟಿಕ್ಸ್‌ʼ ಬಳಸದೆ ವಾಸ್ತವಾಂಶದ ಮೇಲೆ ನಿರ್ಣಯಗಳನ್ನು ಇಂಧನ ಇಲಾಖೆ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕು. ಜನರಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ನೀಡಲಾಗುವುದು ಎನ್ನುವ ಹುಸಿ ಭರವಸೆಯನ್ನು ನೀಡಿ ಅವರನ್ನು ಮೋಸಗೊಳಿಸುವ ಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಗ್ಗೆ ವಾಗ್ದಾಳಿ ನಡೆಸಿದರು.

ಸೋಮವಾರ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನಿರ್ಮಿಸಿರುವ ಹೊಸ ಕಚೇರಿ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಅವೈಜ್ಞಾನಿಕ ವಿದ್ಯುತ್‌ ನೀತಿಗಳಿಂದಾಗಿ ಈಗಾಗಲೇ ಇಂಧನ ಇಲಾಖೆ ನಷ್ಟದಲ್ಲಿದೆ. ಯಾರಿಗೋ  ಲಾಭ ಮಾಡುವ ಉದ್ದೇಶದಿಂದ ವಿದ್ಯುತ್‌ ಇಲಾಖೆಯಲ್ಲಿ ರಾಜಕೀಯ “ಪವರ್‌” ಬಳಸಿರುವುದನ್ನು ನಾವು ನೋಡಿದ್ದೇವೆ. ಇದರ ದುರುಪಯೋಗ ತಡೆಯಲು ನಮ್ಮ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹರಿಹಾಯ್ದರು.

“ಈಗಾಗಲೇ ನಾವು ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ ಯೋಜನೆಯಲ್ಲಿ 40 ಯೂನಿಟ್‌ ವಿದ್ಯುತ್‌ ಅನ್ನು ಉಚಿತವಾಗಿ ನೀಡುತಿದ್ದೇವೆ. ಗೃಹ ಬಳಕೆಯ ವಿದ್ಯುತ್‌ ಪ್ರಮಾಣ 50 ರಿಂದ 70 ಯೂನಿಟ್‌ ಮಾತ್ರ ಇರುತ್ತದೆ. ಇದರಲ್ಲಿ ಬಹುತೇಕ ಉಚಿತ ವಿದ್ಯುತ್‌ ನ್ನು ನಾವು ಈಗಾಗಲೇ ನೀಡುತ್ತಿದ್ದೇವೆ. 200 ಅಥವಾ  300 ಯೂನಿಟ್‌ ವಿದ್ಯುತ್‌ ಎಲ್ಲಿಯೂ ಕೂಡ ಬಳಕೆ ಆಗಲ್ಲ. ನಾವು 200 ಯೂನಿಟ್‌ ಉಚಿತ ನೀಡುತ್ತೇವೆ ಎನ್ನುವುದೇ ದೊಡ್ಡ ಮೋಸ. 200 ಯೂನಿಟ್‌ ವಿದ್ಯುತ್ ಉಚಿತವಾಗಿ ಕೊಡುತ್ತೇವೆ ಎಂದರೆ ಅರ್ಥ ಏನು? ಇದು ಜನರನ್ನು ದಾರಿತಪ್ಪಿಸುವ ಯತ್ನ ಎಂದು ಅಭಿಪ್ರಾಯಪಟ್ಟರು.

“ಪವರ್‌ ಜೊತೆಗೆ ಪವರ್‌ ಪಾಲಿಟಿಕ್ಸ್‌ ಬಳಸಬಾರದು. ವಾಸ್ತವ ಅಂಶದ ಮೇಲೆ ಮತ್ತು ಇಲಾಖೆಯ ದಕ್ಷತೆಯ ಹಿತದೃಷ್ಟಿಯಿಂದ ನಾವು ನಿರ್ಣಯಗಳನ್ನು ತೆಗೆದುಕೊಳ್ಳಬೇಕು” ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

 200 ಯೂನಿಟ್‌ ಒಂದು ಮನೆಗೆ ಖರ್ಚಾಗುವುದಿಲ್ಲ. ಈ ಅಂಶಗಳು ಜನರ ಮಧ್ಯೆ ಚರ್ಚೆ ಆಗಬೇಕು.  ವಿದ್ಯುತ್‌ ಇಲಾಖೆಯಲ್ಲಿ ಏಕೆ ಕೊರತೆ ಆಗುತ್ತಿದೆ,. ಎಷ್ಟು ಸಹಾಯಧನವನ್ನು ರಾಜ್ಯ ಸರಕಾರ ಕೊಡಬಹುದು ಹಾಗು ಎಷ್ಟನ್ನು ನಾವು ನಿಭಾಯಿಸಬಹುದು ಎಂಬುದರ ಆಧಾರದ ಮೇಲೆ ನಾವು ಕೆಲಸ ಮಾಡಬೇಕಾಗಿದೆ.

ಬೆಸ್ಕಾಂ ನೂತನ ಕಟ್ಟಡದ ಗ್ರಾಫಿಕ್ಸ್ ಚಿತ್ರ

ಸಬ್ಸೀಡಿ ಕೊಟ್ಟರೂ ಎಸ್ಕಾಂಗಳು ಸಾಲದ ಸುಳಿಯಲ್ಲಿ :

ರಾಜ್ಯ ಸರಕಾರ ಸುಮಾರು 16000 ಕೋಟಿ ರೂ. ಸಬ್ಸಿಡಿಯನ್ನು ನೀಡುತ್ತಿದೆ. ಆದಾಗ್ಯೂ ಕೂಡ ಎಸ್ಕಾಂಗಳು ಸಾಲದಲ್ಲಿ ಸಿಕ್ಕಿಹಾಕಿಕೊಳ್ಳಬೇಕಾದ ಪರಿಸ್ಥಿತಿ ಉದ್ಬವಿಸಿದೆ. ಕೆಲವು ಗ್ರಾಹಕರಿಂದ ವಿದ್ಯುತ್‌ ಸರಬರಾಜು ಶುಲ್ಕದ ಬಾಕಿ ಪಾವತಿ ಆಗದ ಕಾರಣದಿಂದಾಗಿ ಉತ್ಪಾದನೆ ಮತ್ತು ಆದಾಯದಲ್ಲಿ ಅಂತರ ಉಂಟಾಗಿದೆ. ಇದನ್ನು ಸರಿದೂಗಿಸಲು ರಾಜ್ಯ ಸರಕಾರ 9000 ಕೋಟಿ ರೂ. ವಿಶೇಷ ಅನುದಾನವನ್ನು ಇಂಧನ ಇಲಾಖೆಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

9000 ಸಾವಿರ ಕೋಟಿ ಜೊತೆಗೆ ಇನ್ನಷ್ಟು ಹಣವನ್ನು ನಮ್ಮ ಸರಕಾರ ಇಂಧನ ಇಲಾಖೆಗೆ ನೀಡಲಿದೆ.  ಬೇಸಿಗೆಯಲ್ಲಿ ವಿದ್ಯುಚ್ಚಕ್ತಿ ನಿರ್ವಹಣೆ , ಅದಕ್ಕೆ ಬೇಕಾದ ಯೋಜನೆ ಮಾಡಲಾಗುತ್ತಿದೆ. ವಿದ್ಯುತ್ ಉತ್ಪಾದನೆ ಜೊತೆಗೆ  ಹೆಚ್ಚುವರಿ ಉತ್ಪಾದನೆಯನ್ನು ಮಾರಾಟ ಮಾಡಿ ರಾಜ್ಯ ಸರಕಾರ 2000 ಕೋಟಿ ರೂ. ವಹಿವಾಟು ಮಾಡಿದೆ ಎಂದು ತಿಳಿಸಿದರು.

ಈ ಹಿಂದೆ ಕಲ್ಲಿದ್ದಲ್ಲುನ್ನು ಆಮದು ಮಾಡಲಾಗುತ್ತಿತ್ತು. ಆದರೆ  ಅದನ್ನು ನಮ್ಮ ಕಲ್ಲಿದ್ದಲು ಜೊತೆ ಮಿಶ್ರಣ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಹೆಚ್ಚು ಧಾರಣೆಯ ಕಲ್ಲಿದ್ದಲು ಖರೀದಿಸಿರುವುದರಿಂದಾಗಿ ನಷ್ಟ ಉಂಟಾಗುತ್ತಿತ್ತು. ಹಾಗೆಯೇ  ಕಲ್ಲಿದ್ದಲು ತೊಳೆಯಲು ಸಾವಿರಾರು ಕೋಟಿ ರೂ. ಖರ್ಚು ಮಾಡಲಾಗುತ್ತಿತ್ತು. ವಿದ್ಯುತ್‌ ಉತ್ಪಾದನೆ ಮತ್ತು ವಿತರಣೆಯ ನಷ್ಟದ ಲೆಕ್ಕಾಚಾರ ಕೂಡ ಆಗಬೇಕಾಗಿದೆ. ಇದನ್ನು ವೈಜ್ಞಾನಿಕವಾಗಿ ಮಾಡಬೇಕಾದ ಅವಕಶ್ಯತೆ ಇದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಗುರುಚರಣ್‌ ಸಮಿತಿ ಶಿಫಾರಸು ಅನುಷ್ಠಾನ: 

ವಿದ್ಯುತ್‌  ಉತ್ಪಾದನೆ, ವಿತರಣೆ ಮತ್ತು ಪೂರೈಕೆಯಲ್ಲಿ ನಷ್ಟ ಉಂಟಾಗುತ್ತಿದೆ. ಈ ಮೂರು ವಲಯದಲ್ಲಿ ನಾವು ದಕ್ಷತೆಯನ್ನು ತಂದು ನಷ್ಟವನ್ನು ಕಡಿಮೆ ಮಾಡಬೇಕಾಗಿದೆ. ಹಲವಾರು ಸುಧಾರಣೆಗಳನ್ನು ಇಲಾಖೆಯಲ್ಲಿ ತರಲು ಗುರುಚರಣ್‌ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಲು ಕ್ರಮವಹಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ನವೀಕರಿಸಬಹುದಾದ ಇಂಧನ ಸಂಗ್ರಹಕ್ಕೆ ಒತ್ತು :

ಸ್ಕಾಡಾವನ್ನು ಬಹಳ ಯಶಸ್ವಿಯಾಗಿ ಇಂಧನ ಬಳಸಿಕೊಂಡಿದೆ. ಸ್ಕಾಡಾ ಇರುವುದರಿಂದಾಗಿ ದೊಡ್ಡ ಜಾಲದ ವಿದ್ಯುತ್‌ ವಿತರಣೆಯ ಸಂಪೂರ್ಣ ಮಾಹಿತಿ ಲಭ್ಯವಾಗುತ್ತಿದೆ. ಸ್ಕಾಡಾ ಅನುಷ್ಠಾನದಲ್ಲಿ ನಾವು ಯಶಸ್ವಿಯಾಗಿ  ಮಾಡಿದ್ದೇವೆ. ಇದೀಗ ಸ್ಕಾಡಾ 2 ಯೋಜನೆಗೆ ಅನುಮತಿಯನ್ನು ನೀಡಲಾಗಿದೆ. ಇದರ ಉನ್ನತೀಕರಣದಿಂದ ದಕ್ಷತೆ ಜಾಸ್ತಿಯಾಗುತ್ತಿದ. ಇದರ ಜೊತೆಗೆ ನವೀಕರಿಸಬಹುದಾದ ಇಂಧನವನ್ನು ಬಳಕೆಮಾಡಿ, ಪಂಪ್‌ ಸ್ಟೊರೇಜ್‌  ವ್ಯವಸ್ಥೆಗೆ ನಾವು ಕೈಹಾಕಿದ್ದೇವೆ. ಶರಾವತಿಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ನಾವು ಮುಂದಾಗಿದ್ದು, ನವೀಕರಿಸಬಹುದಾದ ಇಂಧನವನ್ನು ಬಳಸಲು ಪಂಪ್‌ ಸ್ಟೊರೇಜ್‌ ಅವಶ್ಯಕತೆ ಇದೆ. ಅದನ್ನು ನಾವು ಮಾಡುತ್ತೇವೆ. ಸ್ಟೊರೇಜ್‌ ಗೆ ಸೋಲಾರ್‌ ಬ್ಯಾಟರಿ ಬೇಕಾಗಿದ್ದು, ಇದನ್ನು ಪೂರೈಸಲು  ಸರಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು.

ವಿದ್ಯುತ್ ವಿಚಾರದಲ್ಲಿ ವಿಶೇಷ ಆಡಳಿತ ನಿರ್ವಹಣೆ ಕೌಶಲ್ಯ ಅಗತ್ಯ :

“ನವೀಕರಿಸಬಹುದಾದ ಇಂಧನ ಸೇರಿ ನಾವು ಸುಮಾರು 30,000 ಮ್ಯಾಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದೇವೆ. ಆದರೆ  ಗರಿಷ್ಟ ವಿದ್ಯುತ್‌ ಬೇಡಿಕೆ ಸಮಯದಲ್ಲಿ ಇದು ಸಾದ್ಯವಾಗುತ್ತಿಲ್ಲ. ಹೀಗಾಗಿ ನಾವು ಸಾಂಪ್ರದಾಯಿಕ ಇಂಧನದ ಮೇಲೆ ಹೆಚ್ಚು ಅವಲಂಬಿತರಾಗಿದ್ದೇವೆ. ವಿದ್ಯುತ್‌ ಸಂಗ್ರಹ ಸಾದ್ಯವಾಗುತ್ತಿಲ್ಲ. ಆದ್ದರಿಂದ ವಿದ್ಯುತ್‌ ಉತ್ಪಾದನೆ, ವಿತರಣೆ ಮತ್ತು ಪೂರೈಕೆಯನ್ನು ಸರಿದೂಗಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಇದಕ್ಕೆ ವಿಶೇಷ ಆಡಳಿತ ನಿರ್ವಹಣೆ ಕೌಶಲ್ಯದ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಇಂಧನ ಇಲಾಖೆ ನೌಕರರ ವೇತನ ಪರಿಷ್ಕರಣೆ ಭರವಸೆ :

ಇಂಧನ ಇಲಾಖೆ ನೌಕರರ  ವೇತನ ಪರಿಷ್ಕರಣೆಯನ್ನು ಕುರಿತು ಆರ್ಥಿಕ ಇಲಾಖೆ ಮತ್ತು ಇಂಧನ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ . ಆದಷ್ಟೂ ಶೀಘ್ರ ಪರಿಷ್ಕರಣೆ ಮಾಡಿ ಬಹಳ ವರ್ಷದ ಬೇಡಿಕೆಯನ್ನು ನಮ್ಮ ಸರಕಾರ ಈಡೇರಿಸಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ಹೊಸ ಕಟ್ಟಡಗಳ ಉದ್ಘಾಟನೆ ಜೊತೆಗೆ ಸಲಕರಣೆಗಳ ಸಾಗಾಣಿಕೆಗೆ ಬೆಸ್ಕಾಂ ಖರೀದಿಸಿರುವ 25 ಹೊಸ ಲಾರಿಗಳಿಗೆ ಮುಖ್ಯಮಂತ್ರಿಯವರು ಹಸಿರು ನಿಶಾನೆ ತೋರಿದರು.

26 ಲಕ್ಷ ಭಾಗ್ಯ ಜ್ಯೋತಿ, 20 ಲಕ್ಷ ಕುಟೀರ ಜ್ಯೋತಿ ಸಂಪರ್ಕವನ್ನು ಕಲ್ಪಿಸಲಾಗಿದೆ. ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್‌ ಗ್ರಾಹಕರಿಗೆ 75 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ಹೀಗಾಗಿ ನಮ್ಮ ಸರಕಾರ ಬಹುತೇಕ ಉಚಿತ ವಿದ್ಯುತ್‌ ಅನ್ನು ಅರ್ಹ ಗ್ರಾಹಕರಿಗೆ ನೀಡುತ್ತಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ .ಸುನಿಲ್ ಕುಮಾರ್ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯಸಚೇತಕ ಹಾಗು ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಎಂ. ಸತೀಶ್‌  ವಹಿಸಿದ್ದರು. ಬೆಸ್ಕಾಂ ವ್ಯವಸ್ಥಾಪಕ ನಿರ್ದೆಶಕ ಮಹಾಂತೇಶ ಬೀಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕಪಿಲ್‌ ಮೋಹನ್‌, ಬೆಸ್ಕಾಂನ ನಿರ್ದೇಶಕ (ಹಣಕಾಸು)ದರ್ಶನ್‌ ಜೆ,  ನಿರ್ದೇಶಕ (ತಾಂತ್ರಿಕ) ರಮೇಶ್‌ ಎಚ್. ಕೆ. ಹಾಗೂ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಹಾಜರಿದ್ದರು.

WhatsApp Join our WhatsApp Channel
Previous Post

Health News | H3N2 ವೈರಸ್‌ ಸೋಂಕು : ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ – ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟನೆ

Next Post

BW SPECIAL | ಆಹಾರದ ಬಿಲ್ ಜೊತೆಗೆ ಸ್ವಯಂಪ್ರೇರಿತವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ !! : ಕೆಲವು ಹೋಟೆಲ್ ಗಳ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ದೂರು – ಗ್ರಾಹಕ ಸಂರಕ್ಷಣಾ ಮಾರ್ಗಸೂಚಿ ಏನು ಹೇಳುತ್ತೆ?

Next Post
ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

BW SPECIAL | ಆಹಾರದ ಬಿಲ್ ಜೊತೆಗೆ ಸ್ವಯಂಪ್ರೇರಿತವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ !! : ಕೆಲವು ಹೋಟೆಲ್ ಗಳ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ದೂರು – ಗ್ರಾಹಕ ಸಂರಕ್ಷಣಾ ಮಾರ್ಗಸೂಚಿ ಏನು ಹೇಳುತ್ತೆ?

ಸಾಂದರ್ಭಿಕ ಚಿತ್ರ

ನಾಳೆ (ಮಾ.8) ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ!! ಕಾರಣ ಏನು?

Please login to join discussion

Like Us on Facebook

Follow Us on Twitter

Recent News

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group