Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬಿಜೆಪಿ ಸರ್ಕಾರದಿಂದ ಗುತ್ತಿಗೆದಾರಿಗೆ 22 ಸಾವಿರ ಕೋಟಿ ರೂ. ಬಾಕಿ : ಹಣ ಪಾವತಿಗೆ ಲಂಚ ; ಡಿ.ಕೆಂಪಣ್ಣ ಗಂಭೀರ ಆರೋಪ

ಕಾಲ ಮಿತಿಯೊಳಗೆ ಬಾಕಿ ಮೊತ್ತ ಬಿಡುಗಡೆಗೆ ಮಾಡದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ & ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಎಚ್ಚರಿಕೆ ನೀಡಿದ ಗುತ್ತಿಗೆದಾರರ ಸಂಘ.

by Bengaluru Wire Desk
March 15, 2023
in News Wire, Public interest
Reading Time: 1 min read
0

ಬೆಂಗಳೂರು, ಮಾ.14 www.bengaluruwire.com : ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದರೂ ಗುತ್ತಿಗೆದಾರರಿಗೆ ಎರಡು ವರ್ಷಗಳಿಂದ ವಿವಿಧ ಇಲಾಖೆಗಳಿಂದ ಸುಮಾರು 22,000 ಕೋಟಿ ರು.ಗಳಿಗೂ ಹೆಚ್ಚು ಹಣ ಬಿಡುಗಡೆಯಾಗಬೇಕಿದೆ. ಕಾಮಗಾರಿ ಪೂರ್ಣಗೊಳಿಸಿ ಎರಡು ವರ್ಷಗಳಾದರೂ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಗಂಭೀರ ಆರೋಪ ಮಾಡಿದೆ.

ಈ ಕುರಿತಂತೆ ನಗರದ ಪ್ರೆಸ್ ಕ್ಲಬ್ ನಲ್ಲಿ‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ, ಮುಖ್ಯಮಂತ್ರಿಗಳು ಮತ್ತು ಸಂಬಂಧ ಪಟ್ಟ ಸಚಿವರು ಮತ್ತು ಅಧಿಕಾರಿಗಳಿಗೆ ಬಾಕಿ ಮೊತ್ತ ಪಾವತಿಸಲು ನಿರಂತರವಾಗಿ ಪತ್ರಗಳನ್ನು ಬರೆಯುತ್ತಲೇ ಇದ್ದರೂ ಪ್ರಯೋಜನವಾಗಿಲ್ಲ. ಕಾಮಗಾರಿ ಮುಗಿಸಿದವುಗಳ ಗುಣಮಟ್ಟ ಪರಿಶೀಲಿಸಲಾಗಿರುತ್ತದೆ. ಬಿಲ್ ಬಿಡುಗಡೆ ಮಾಡಬಹುದು ಎಂದು ಬರೆಯಲಾಗಿರುತ್ತದೆ. ಆದರೆ ಬಾಕಿ ಮೊತ್ತ ಬಿಡುಗಡೆಗೂ ಲಂಚ ಕೇಳಲಾಗುತ್ತಿದೆ ಎಂದು ಆರೋಪಿಸಿದರು.

ಲಂಚದ ಹಣ ಕೊಡದೆ ಹೋದರೆ ಇಲ್ಲ ಸಲ್ಲದ ಕಾನೂನು ಕಟ್ಟಳೆಗಳ ಪಾಠ ಮಾಡಲಾಗುತ್ತದೆ. ಪ್ರಭಾವ ಬೀರುವವರಿಗೆ ಅನಾಯಾಸವಾಗಿ ಬಿಲ್ ಮಂಜೂರಾಗುತ್ತದೆ. ಒಂದು ವೇಳೆ ಸರಕಾರ ಬಾಕಿ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳದಿದ್ದರೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಮತ್ತು ಅಂತಿಮವಾಗಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ
ನಿವಾಸಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಯಾವ್ಯಾವ ಇಲಾಖೆಗಳಲ್ಲಿ ಎಷ್ಟು ಬಿಲ್ ಹಣ ಬಾಕಿ? :
ಪ್ರಾಮಾಣಿಕ ಮತ್ತು ನಿಷ್ಠಾವಂತ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಪ್ರಮುಖವಾಗಿ ಲೋಕೋಪಯೋಗಿ, ನೀರಾವರಿ, ಮತ್ತು ಬಿಬಿಎಂಪಿಯಲ್ಲಿ ಅತಿ ಹೆಚ್ಚು ಕಾಮಗಾರಿಗಳು ನಡೆಯುತ್ತಿದ್ದು, ಈ ಮೂರೂ ಇಲಾಖೆಗಳಲ್ಲಿ ಈ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಾಕಿ ಮೊತ್ತ ಸುಮಾರು 10,000 ಕೋಟಿ ರು.ಗಳನ್ನು ಮೀರುತ್ತದೆ.

ಲೋಕೋಪಯೋಗಿ ಇಲಾಖೆಯೊಂದೇ ಸುಮಾರು 5000 ಕೋಟಿ ರೂ., ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ಸಣ್ಣ ನೀರಾವರಿ ಇಲಾಖೆ ಸುಮಾರು 8000 ಕೋಟಿ ರು. ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸುಮಾರು 3000 ಕೋಟಿ ರು. ಬಾಕಿ ಉಳಿಸಿಕೊಂಡಿದೆ ಇದೆ ಎಂದರು.

ಹಣ ಬಿಡುಗಡೆಯಲ್ಲೂ ಪ್ರಭಾವಿಗಳ ಅಣತಿಯಂತೆ ಪಾವತಿ :
ಹಣ ಬಿಡುಗಡೆಯಲ್ಲಿ ಜ್ಯೇಷ್ಠತೆಯನ್ನು ಪಾಲಿಸುತ್ತಿಲ್ಲ. ಸಚಿವರು, ಶಾಸಕರು ಮತ್ತು ಹಿರಿಯ ಅಧಿಕಾರಿಗಳು ಸೂಚಿಸುವರಿಗೆ ಮಾತ್ರ ಬಾಕಿ ಮೊತ್ತ ಬಿಡುಗಡೆ ಮಾಡಲಾಗುತ್ತಿದೆ. ಕಾಮಗಾರಿ ಪೂರ್ಣಗೊಳಿಸಿ ಎರಡು ವರ್ಷಗಳಾದರೂ ಹಣ ಬಿಡುಗಡೆ ಮಾಡಲು ಮೀನ ಮೇಷ ಎಣಿಸುವ ಸರಕಾರ ಕೆಲಸ ಮುಗಿಸಿ ಎರಡು ತಿಂಗಳಾದವರಿಗೆ ಹಣ ಬಿಡುಗಡೆ ಮಾಡುತ್ತಿದೆ ಎಂದು ವಾಸ್ತವ ತೆರೆದಿಟ್ಟರು.

ಸಿಎಂ ಬೊಮ್ಮಾಯಿ ನುಡಿದಂತೆ ನಡೆದಿಲ್ಲ :
ಶೇ.80ರಷ್ಟು ಮೊತ್ತವನ್ನು ಹಿರಿತನದ ಆಧಾರದ ಮೇಲೆ ಮತ್ತು ಶೇ.20ರಷ್ಟು ಮೊತ್ತವನ್ನು ವಿವೇಚನಾ ಕೋಟಾದಡಿಯಲ್ಲಿ ಬಿಡುಗಡೆ ಮಾಡಬೇಕು ಎಂದು ನಿಯಮಗಳು ಹೇಳುತ್ತವೆ. ಆದರೆ ಇದು ವಾಸ್ತವದಲ್ಲಿ ಉಲ್ಟಾ ಆಗಿದೆ. ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದಾಗ ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮ
ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಡಿ.ಕೆಂಪಣ್ಣ ಬೇಸರ ವ್ಯಕ್ತಪಡಿಸಿದರು.

ಎರಡು ಮತ್ತು ಮೂರನೇ ಹಂತದ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕೆಲಸ ಮಾಡುವ
ಗುತ್ತಿಗೆದಾರರಿಗೆ ತೀವ್ರ ಅನ್ಯಾಯವಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಹಣ ಬಿಡುಗಡೆಗೆ ಸರಕಾರದ ಖಾತೆಗಳಿಗೆ ಹಣ ಸಂದಾಯವಾಗಿದೆ. ಆದರೂ ಅಧಿಕಾರಿಗಳು ಹಣ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿರುವುದಾದರೂ ಏಕೆ? ಯಾವ
ಕಾರಣಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎನ್ನುವುದು ರಹಸ್ಯವಾಗಿ ಉಳಿದಿಲ್ಲ.

ಎರಡು ವರ್ಷಗಳೀಂದೀಚೆಗೆ ಬಾಕಿ ಉಳಿಸಿಕೊಳ್ಳುವ ಪರಿಪಾಠ ಹೆಚ್ಚಳವಾಗಿದೆ. ಸರಕಾರ ಕೂಡಲೇ
ಹಂತಹಂತವಾಗಿ ಹಿರಿತನದ ಆಧಾರದ ಮೇಲೆ ಬಾಕಿ ಮೊತ್ತವನ್ನು ಬಿಡುಗಡೆ ಮಾಡುವಂತೆ ವಿನಂತಿಸುತ್ತೇವೆ.

ಚುನಾವಣೆ ಅಧಿಸೂಚನೆಗೂ ಮುನ್ನ ಬಿಲ್ ಪಾವತಿಗೆ ಆಗ್ರಹ :
ಚುನಾವಣೆಗೆ ಯಾವುದೇ ಸಂದರ್ಭದಲ್ಲಿ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ. ಒಮ್ಮೆ
ಚುನಾವಣೆ ಘೋಷಣೆ ಆದರೆ ಸಬೂಬುಗಳನ್ನು ಹೇಳಲು ಸರಕಾರಕ್ಕೆ ಅವಕಾಶಗಳು ಲಭ್ಯವಾಗುತ್ತವೆ. ಆದ್ದರಿಂದ ಚುನಾವಣೆಗೆ ಅಧಿಸೂಚನೆ ಹೊರಡಿಸುವುದಕ್ಕೂ ಮುನ್ನ ತ್ವರಿತವಾಗಿ ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಿರಿತನದ ಆಧಾರದಲ್ಲಿ ಬಿಡುಗಡೆ ಮಾಡಬೇಕೆಂದು
ಸರಕಾರವನ್ನು ಒತ್ತಾಯಿಸುವುದಾಗಿ ಅವರು ಹೇಳಿದರು.

ಬಿಲ್ ಪಾವತಿಗೆ ಹೊಸ ತಂತ್ರಜ್ಞಾನ ರೂಪಿಸಿ:
ಕಾಮಗಾರಿಗಳು ಪೂರ್ಣಗೊಂಡ ನಂತರ ಬಿಲ್ ಪಾವತಿಗೆ ಹೊಸ ತಂತ್ರಜ್ಞಾನವನ್ನು ಒಳಗೊಂಡ ವ್ಯವಸ್ಥೆಯೊಂದನ್ನು ರೂಪಿಸಬೇಕು ಎಂದು ಮತ್ತೊಮ್ಮೆ ಸರಕಾರವನ್ನು ಆಗ್ರಹಪಡಿಸುತ್ತೇವೆ. ಆಯಾ ಇಲಾಖೆಗಳ ಕಚೇರಿಗಳಲ್ಲಿ ಜೇಷ್ಠತಾ ಪಟ್ಟಿಯನ್ನು ನಾಮ ಫಲಕದಲ್ಲಿ ಹಾಕಬೇಕು ಮತ್ತು ಎಷ್ಟು ಮೊತ್ತ ಬಾಕಿ ಇದೆ, ಎಷ್ಟು ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನೂ ಪ್ರಕಟ ಮಾಡಬೇಕು. ಆಗ ಮಾತ್ರ ಪಾರದರ್ಶಕತೆಯನ್ನು ತರಲು ಸಾಧ್ಯವಾಗುತ್ತದೆ. ಎಲ್ಲ ಇಲಾಖೆಗಳ ಪೂರ್ಣಗೊಳಿಸಿದ, ಚಾಲ್ತಿಯಲ್ಲಿರುವ ಮತ್ತು ಮುಂಬರುವ ಕಾಮಗಾರಿಗಳ ಮೊತ್ತದ ಅಂದಾಜು ಪಟ್ಟಿಯನ್ನು ತಯಾರಿಸಿ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನವನ್ನು ನಿಗದಿಪಡಿಸುವುದು ಉತ್ತಮ. ಅನುದಾನದ ಲಭ್ಯತೆಯನ್ನು ಆಧರಿಸಿ ಕಾಮಗಾರಿಗಳಿಗೆ ಟೆಂಡರ್ ಆಹ್ವಾನಿಸಿದರೆ ಸರಕಾರ ಮತ್ತು ಗುತ್ತಿಗೆದಾರರ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಮತ್ತು ಸರಕಾರಕ್ಕೂ ಹೊರೆ ತಪ್ಪುತ್ತದೆ ಎಂದು ಅವರು ಸಲಹೆ ನೀಡಿದರು.

ಗುತ್ತಿಗೆದಾರರ ಬಳಿ ಹಣದ ಮಂತ್ರದಂಡವಿಲ್ಲ :
ಗುತ್ತಿಗೆದಾರರ ಬಳಿ ಹಣದ ಮಂತ್ರದಂಡ ಇರುವುದಿಲ್ಲ. ಅವರೂ ಬ್ಯಾಂಕ್, ಮತ್ತು ಖಾಸಗಿಯವರಿಂದ ಸಾಲ ತಂದು ಬಡ್ಡಿ ಕಟ್ಟುತ್ತಿರುತ್ತಾರೆ. ಕಚ್ಚಾವಸ್ತುಗಳ ಪೂರೈಕೆದಾರರಿಗೆ, ಕಾರ್ಮಿಕರಿಗೆ ವೇತನ ಪಾವತಿಸಬೇಕಾಗಿರುತ್ತದೆ. ಎರಡು ಮೂರು ವರ್ಷಗಳ ಕಾಲ ಬಾಕಿ ಉಳಿಸಿಕೊಂಡರೆ ಗುತ್ತಿಗೆದಾರರು ಬದುಕುವುದಾದರೂ ಹೇಗೆ? ಸಾಲಗಾರರ ಕಾಟ ತಡೆಯಲಾರದೆ, ಕಮೀಷನ್ ಕೊಡಲಾಗದೆ ಸಮಾಜಕ್ಕೆ ಅಂಜಿ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳು ಕಣ್ಣ ಮುಂದಿವೆ. ಮನೆ ಆಸ್ತಿ,ಪಾಸ್ತಿ ಮಾರಾಟ ಮಾಡಿಕೊಂಡು ಬೀದಿ ಪಾಲಾಗಿರುವ ಉದಾಹರಣೆಗಳು ಇವೆ. ಈ ಬಗ್ಗೆ ಸರ್ಕಾರ ಕೂಡಲೇ ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ
ಜಿ.ಎಂ.ರವೀಂದ್ರ, ಉಪಾಧ್ಯಕ್ಷರಾದ ಆರ್.ಅಂಬಿಕಾಪತಿ, ಜಂಟಿ ಕಾರ್ಯದರ್ಶಿ ಹನುಮಂತಯ್ಯ, ಸಂಘಟನಾ ಕಾರ್ಯದರ್ಶಿ ಎಂ.ಎಚ್. ಯತಿರಾಜ್, ಜಂಟಿ ಕಾರ್ಯದರ್ಶಿ
ಎಂ.ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Oscar Awards 2023| ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ; ಈ ಹಾಡಿನ ಹಕ್ಕನ್ನು ಖರೀದಿಸಿದ್ದ ಲಹರಿ ಸಂಗೀತ ಸಂಸ್ಥೆ

Next Post

BBMP News | ಬಿಬಿಎಂಪಿಯಲ್ಲಿ ಜೇಷ್ಟತೆ ಆಧಾರ ಮೀರಿ ಬಿಲ್ ಪಾವತಿಸುತ್ತಿಲ್ಲ : ಹಣಕಾಸು ವಿಶೇಷ ಆಯುಕ್ತ ಜಯರಾಮ್ ರಾಯಪುರ ಸ್ಪಷ್ಟನೆ

Next Post
ಬಿಬಿಎಂಪಿ ಹಣಕಾಸು ವಿಶೇಷ ಆಯುಕ್ತ ಜಯರಾಮ್ ರಾಯಪುರ ಬುಧವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವುದು.

BBMP News | ಬಿಬಿಎಂಪಿಯಲ್ಲಿ ಜೇಷ್ಟತೆ ಆಧಾರ ಮೀರಿ ಬಿಲ್ ಪಾವತಿಸುತ್ತಿಲ್ಲ : ಹಣಕಾಸು ವಿಶೇಷ ಆಯುಕ್ತ ಜಯರಾಮ್ ರಾಯಪುರ ಸ್ಪಷ್ಟನೆ

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಸಾರಿಗೆ ನೌಕರರಿಗೆ ಖುಷಿಯ ಸುದ್ದಿ : ಶೇ.15ರಷ್ಟು ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group