ಬೆಂಗಳೂರು, ಮಾ.21 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರುತಿ ಮಂದಿರ ವಾರ್ಡ್‌ನಲ್ಲಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ ಒಂದು ವರ್ಷದಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಬರೋಬ್ಬರಿ 20,100 ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ನೀಡಿದೆ.
ಈ ಡಯಾಲಿಸಿಸ್ ಕೇಂದ್ರದ ‘ಪ್ರಥಮ ವಾರ್ಷಿಕೋತ್ಸವ’ ಕಾರ್ಯಕ್ರಮಕ್ಕೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ವಿ. ಸೋಮಣ್ಣ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಮಂಗಳವಾರ ಚಾಲನೆ ನೀಡಿದರು.
ಡಯಾಲಿಸಿಸ್ ಕೇಂದ್ರದ ಪ್ರಮುಖ ಅಂಶಗಳು:
ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ ಒಟ್ಟು 68 ಡಯಾಲಿಸಿಸ್ ಉಪಕರಣಗಳನ್ನು ಅಳವಡಿಸಲು ಸ್ಥಳಾವಕಾಶವಿದ್ದು, ಪ್ರಾರಂಭದಲ್ಲಿ 2 ಉಪಕರಣಗಳಿಂದ ಪ್ರಾರಂಭವಾಗಿ ಇದೀಗ 42 ಉಪಕರಣಗಳು ಕಾರ್ಯನಿರ್ವಹಿಸುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಹಾಗೂ ಎ.ಪಿ.ಎಲ್ ಕಾರ್ಡ್ ಹೊಂದಿರುವವರಿಗೆ ಒಂದು ಡಯಾಲಿಸಿಸ್ ಗೆ 700 ರೂ. ತೆಗೆದುಕೊಳ್ಳಲಾಗುತ್ತಿದೆ.
ಕಾರ್ಯಕ್ರಮದಲ್ಲಿ ವಲಯ ಜಂಟಿ ಆಯುಕ್ತರಾದ ಲೋಕನಾಥ್, ಕ್ಲಿನಿಕಲ್ ವಿಭಾಗದ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ನಿರ್ಮಲ ಬುಗ್ಗಿ, ವಲಯ ಆರೋಗ್ಯಾಧಿಕಾರಿಯಾದ ಡಾ.ಮನೋರಂಜನ್ ಹೆಗ್ಡೆ, ಇನ್ಸ್ ಟೊಟ್ಯೂಟ್ ಆಫ್ ನೆಫ್ರೋ ಯುರಾಲಜಿ ಸಂಸ್ಥೆಯ ನಿರ್ದೇಶಕರಾದ ಡಾ.ಕೇಶವಮೂರ್ತಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ ವಿಳಾಸ :
ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ, ಮಾರುತಿ ಮಂದಿರ ವಾರ್ಡ್, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ, ಬೆಂಗಳೂರು.