ಬೆಂಗಳೂರು, ಮಾ.26 www.bengaluruwire.com : ಅಂತಾರಾಷ್ಟ್ರೀಯ ಅಚೀವರ್ಸ್ ಕೌನ್ಸಿಲ್ ಹಾಗೂ ಏಷಿಯಾ ವೇದಿಕ್ ಕಲ್ಚರಲ್ ಫೌಂಡೇಷನ್ ವತಿಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಿಂಟೋ ಆಸ್ಪತ್ರೆಯ ನೇತ್ರಾಧಿಕಾರಿ ಡಾ.ಎಂ.ವೆಂಕಟೇಶ್ ಅತ್ಯುತ್ತಮ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಂತಾರಾಷ್ಟ್ರೀಯ ಮಕ್ಕಳ ಆರೋಗ್ಯ ಅಕಾಡೆಮಿಯ ಸಹಯೋಗದಲ್ಲಿ ಈ ಪ್ರಶಸ್ತಿಯನ್ನು ಮಿಂಟೋ ಆಸ್ಪತ್ರೆಯ ನೇತ್ರಾಧಿಕಾರಿ ಡಾ.ಎಂ. ವೆಂಕಟೇಶ್ ಅವರಿಗೆ ನೀಡಲಾಗಿದೆ. ವೈದ್ಯಕೀಯ ಸೇವೆಯಲ್ಲಿ ಇವರ ಕಾಳಜಿ ಹಾಗೂ ಅವಿರತ ಶ್ರಮಕ್ಕೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.