ಬೆಂಗಳೂರು, ಮಾ.27 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ 8 ವಲಯಗಳ ವ್ಯಾಪ್ತಿಯಲ್ಲಿ ಆಯ್ದ 50 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಹಿಳೆಯರ ವಿಶೇಷ ಆರೋಗ್ಯ ತಪಾಸಣೆಗಾಗಿ ಆಯುಷ್ಮತಿ ಕ್ಲಿನಿಕ್ ಗಳಿಗೆ ಇಂದು ಚಾಲನೆ ನೀಡಲಾಗಿದೆ.
ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ತಜ್ಞ ವೈದ್ಯರಿಂದ ಪ್ರತಿ ದಿನ ಮಹಿಳೆಯರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.
ಪ್ರತಿ ಸೋಮವಾರ – ಫಿಸಿಷಿಯನ್, ಮಂಗಳವಾರ – ಮೂಳೆ ಮತ್ತು ಕೀಲು ತಜ್ಞರು, ಬುಧವಾರ – ಶಸ್ತ್ರಚಿಕಿತ್ಸಾ ತಜ್ಞರು, ಗುರುವಾರ – ಮಕ್ಕಳ ತಜ್ಞರು, ಶುಕ್ರವಾರ -ಸ್ತ್ರೀ ರೋಗ ತಜ್ಞರು, ಶನಿವಾರ – ಇತರೆ(ಕಿವಿ, ಮೂಗು ಮತ್ತು ಗಂಟಲು, ನೇತ್ರ, ಚರ್ಮರೋಗ, ಮಾನಸಿಕ ರೋಗ) ತಜ್ಞರ ಸೇವೆ ನೀಡಲಾಗುತ್ತದೆ.
ಮಹಿಳೆಯರಿಗೋಸ್ಕರ ರೂಪಗೊಂಡ ಈ ಕ್ಲಿನಿಕ್ ನಲ್ಲಿ ಉಚಿತವಾಗಿ ಆಪ್ತ ಸಮಾಲೋಚನೆ, ಲ್ಯಾಬ್ ಪರೀಕ್ಷೆಗಳು, ಔಷಧಿ, ಕ್ಷೇಮ ಚಟುವಟಿಕೆಗಳಾದ ಯೋಗ ಮತ್ತು ಧ್ಯಾನ ಹಾಗೂ ರೆಫರಲ್ ಸೇವೆಗಳು ಲಭ್ಯವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ 50 ಆಯುಷ್ಮತಿ ಕ್ಲೀನಿಕ್ ಗಳ ಪಟ್ಟಿಯ ಪ್ರತಿ ಇಲ್ಲಿದೆ :