ಬೆಂಗಳೂರು, ಏ.5 www.bengaluruwire.com : ಕ್ರೈಸ್ತ ಸಮುದಾಯದವರನ್ನು ಗುರಿಯಾಗಿಸಿಕೊಂಡು ಕೋಮು ಗಲಭೆಗೆ ಪ್ರಚೋದಿಸಿದ ಆರೋಪದಡಿ ಸಚಿವ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ಪೋಲಿಸ್ ಠಾಣೆಯಲ್ಲಿ ಬುಧವಾರ ಎಫ್ ಐಆರ್ ದಾಖಲಾಗಿದೆ.
ಅಖಿಲ ಭಾರತ ಕ್ರೈಸ್ತ ಮಹಾಸಭಾ ಮತ್ತು ಖಾಸಗಿ ದೂರದರ್ಶನ ವಾಹಿನಿ ಭಿತ್ತರಿಸಿರುವ ಅಂಶಗಳ ಆಧಾರ ಹಾಗೂ ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ ಎಂದು ಕೋಮು ದ್ವೇಷ ಭಾಷಣ ಮಾಡಿ ಅಲ್ಪಸಂಖ್ಯಾತ ಕ್ರೈಸ್ತರ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ಉಂಟು ಮಾಡಿ ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಆರೋಪದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯವರು ಇಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ದೂರಿನಲ್ಲಿ “ಸಚಿವ ಮುನಿರತ್ನರವರು ಮಾ.31ರಂದು ಖಾಸಗಿ ಕನ್ನಡದ ಸುದ್ದಿವಾಹನಿಯಲ್ಲಿ ಅಲ್ಪಸಂಖ್ಯಾತ ಸಮುದಾಯದವರನ್ನು ಹೊಡೆದು ಓಡಿಸಿ ಎಂದು ಕೋಮು ದ್ವೇಷದ ಭಾಷಣ ಮಾಡಿ ಅಲ್ಪಸಂಖ್ಯಾತ ಕ್ರೈಸ್ತರ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ಮಾಡಿ ಕೋಮುಗಲಭೆಗೆ ಪ್ರಚೋದನೆ ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು 2023ನೇ ಸಾರ್ವತ್ರಿಕ ಚುನಾವಣೆಯ ಕರ್ತವ್ಯದಲ್ಲಿರುವ ಫ್ಲೈಯಿಂಗ್ ಸ್ಕ್ವಾಡ್ ಟೀಮ್-11ರ ಟೀಮ್ ಲೀಡರ್ ಆದ ಮನೋಜ್ ಕುಮಾರ್ ಅವರು ಠಾಣೆಯಲ್ಲಿ ನೀಡಿದ ಲಿಖಿತ ದೂರು” ಎಂದು ಎಫ್ ಐಆರ್ ನಲ್ಲಿ ದಾಖಲಾಗಿದೆ.
ಕರ್ತವ್ಯದಲ್ಲಿರುವ ಚುನಾವಣಾಧಿಕಾರಿಗಳು, ಸಚಿವ ಮುನಿರತ್ನ ಅವರ ವಿರುದ್ಧ ಪ್ರಜಾಪ್ರತಿನಿಧಿಗಳ ಕಾಯ್ದೆ 1950, 1951, 1989ರ ಕಲಂ 125 ಹಾಗೂ ಭಾರತೀಯ ದಂಡ ಸಂಹಿತೆ 1860ರ ಕಲಂ 117 ಹಾಗೂ 153ಎ ರ ಅಡಿಯಲ್ಲಿ ಎಫ್ ಐಆರ್ ಸಂಖ್ಯೆ 0109/2023ರಂತೆ ದೂರು ದಾಖಲಿಸಿದ್ದಾರೆ.
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.