ಬೆಂಗಳೂರು, ಏ.15 www.bengaluruwire.com : ರಾಜ್ಯದ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಇಂದು 42 ಕ್ಷೇತ್ರಗಳಿಗೆ ಮೂರನೇ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲಿಗೆ ಈತನಕ ಕೈ ಪಕ್ಷವು 209 ಅಭ್ಯರ್ಥಿಗಳ ಹೆಸರನ್ನು ಅಖೈರು ಮಾಡಿದೆ.
ಆದರೆ ಇನ್ನು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ, ಬಂಡಾಯ ಏಳಬಹುದಾದ ಇತರ 15 ಕ್ಷೇತ್ರಗಳ ಹೆಸರನ್ನು ಇನ್ನಷ್ಟೆ ಪ್ರಕಟಿಸಬೇಕಿದೆ. ಈಗಾಗಲೇ ಏ.13 ಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು 20ನೇ ತಾರೀಖಿನವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮೇ 10, 2023 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮತಗಳ ಎಣಿಕೆ ಮತ್ತು ಫಲಿತಾಂಶಗಳ ಪ್ರಕಟಣೆಯು ಮೇ.13 ರಂದು ನಡೆಯಲಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC), ಮುಂಬರುವ ಕರ್ನಾಟಕ ಚುನಾವಣೆಗಳಿಗೆ ಒಟ್ಟು 124 ಅಭ್ಯರ್ಥಿಗಳತನ್ನ ಮೊದಲ ಪಟ್ಟಿಯನ್ನು ಮಾರ್ಚ್.25 ರಂದು ಬಿಡುಗಡೆ ಮಾಡಿತ್ತು. ಈ ಪಟ್ಟಿಯನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ಅಂತಿಮಗೊಳಿಸಿತ್ತು.
ಕಾಂಗ್ರೆಸ್ ಸಿಇಸಿ ನಂತರ ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಏಪ್ರಿಲ್ 6 ರಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಿತು. ಇದೀಗ ಶನಿವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು ಒಟ್ಟಾರೆ ಕಾಂಗ್ರೆಸ್ 209 ಅಭ್ಯರ್ಥಿಗಳ ಸಂಖ್ಯೆಯನ್ನು ಬಿಡುಗಡೆ ಮಾಡಿದಂತಾಗಿದೆ. ಅವುಗಳ ವಿವರ ಈ ಕೆಳಕಂಡಂತಿದೆ :