ಬೆಂಗಳೂರು, ಏ.19 www.bengaluruwire.com : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಬುಧವಾರ, ಪ್ರಧಾನಿ ನರೇಂದ್ರ ಮೋದಿ, ಜಗತ್ ಪ್ರಕಾಶ್ ನಡ್ಡಾ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಾರೆಂದು ಭಾರೀ ಸುದ್ದಿ ಮಾಡಿದ್ದ ನಟ ಕಿಚ್ಚ ಸುದೀಪ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹೆಸರೇ ಇಲ್ಲವಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ.10 ರಂದು ಮತದಾನ ನಡೆಯಲಿದ್ದು, ಮೇ. 13 ಫಲಿತಾಂಶ ಪ್ರಕಟವಾಗಲಿದೆ.
ಸ್ಟಾರ್ ಪ್ರಚಾರಕರ ಪಟ್ಟಿಯ ವಿವರ ಈ ಕೆಳಕಂಡಂತಿದೆ :