ಬೆಂಗಳೂರು, ಏ.20 www.bengaluruwire.com : ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರವಾದ ಇಂದು ಕೊನೆ ದಿನವಾಗಿದ್ದು, ಮತದಾನಕ್ಕೆ ದಿನಗಣನೆ ಆರಂಭವಾದಂತೆ ಬಿಸಿಲ ಬಿಸಿಲಂತೆ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಭರಾಟೆಯು ಹೆಚ್ಚಾಗಿದೆ.
ಈ ಮಧ್ಯೆ ರಾಜ್ಯದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಭಾರತ ಚುನಾವಣಾ ಆಯೋಗ, ಮುಂಬರುವ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮತದಾರರಲ್ಲಿ ಮತದಾನ ಮತ್ತು ಚುನಾವಣೆ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲು “ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ” “Nothing like Voting, 1 Vote for Sure’ ಇದು ಈ ಬಾರಿಯ ಘೋಷವಾಕ್ಯವಾಗಿರುತ್ತದೆ.
ಈ ಘೋಷವಾಕ್ಯವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇನ್ನಿತರೆ ಕಛೇರಿಗಳ ಪತ್ರ ವ್ಯವಹಾರಗಳಲ್ಲಿ ಹಾಗೂ ಇಲಾಖೆಗಳ ಜಾಲತಾಣಗಳ ಮುಖಪುಟಗಳಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಸಂಬಂಧಿತ ಇಲಾಖಾ ಮುಖ್ಯಸ್ಥರುಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಈ ಕುರಿತಂತೆ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚಿಸಿತ್ತು.
ಈ ಹಿನ್ನಲೆಯಲ್ಲಿ ಇಲಾಖೆಯು ಇಂದು ಈ ಸಂಬಂಧ ಎಲ್ಲಾ ಇಲಾಖೆಗಳಿಗೆ ಆಯೋಗದ ನಿರ್ದೇಶನ ಪಾಲಿಸುವಂತೆ ಸೂಚಿಸಿದೆ.