ಬೆಂಗಳೂರು, ಏ.28 www.bengaluruwire.com : ಚುನಾವಣಾ ಆಯೋಗ ಮತದಾರರಲ್ಲಿ “ಮತದಾನದ ಜಾಗೃತಿ” ಮೂಡಿಸಲು ಸೂಚಿಸಿರುವ ಹಿನ್ನಲೆಯಲ್ಲಿ ಇಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ ಕೇಂದ್ರ ಕಛೇರಿಯ ಮುಂಭಾಗದಲ್ಲಿ ಬಿಬಿಎಂಪಿಯು “ಮತದಾನ ನಮ್ಮೆಲ್ಲರ ಹಕ್ಕು, ಮೇ 10 ರಂದು ತಪ್ಪದೇ ಮತದಾನ ಮಾಡಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಹೆಮ್ಮೆಯಿಂದ ಭಾಗಿಯಾಗಿ” ಎಂಬ ಸಾಮಾಜಿಕ ಕಳಕಳಿಯ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಿಎಂಟಿಸಿಯ ಸಾಂಸ್ಕೃತಿಕ ಕಲಾ ಕುಟೀರದ ಕಲಾವಿದರು ಮತ್ತು ಕೆ ಎಸ್ ಆರ್ ಟಿ ಸಿಯ ಸಿಬ್ಬಂದಿ “ಮತದಾನ ಸಂಕಲ್ಪ ಬೀದಿ ನಾಟಕ”ವನ್ನು ಟಿಎಂ ಬಾಲಕೃಷ್ಣರವರ ನಿರ್ದೇಶನದಲ್ಲಿ ಪ್ರದರ್ಶಿಸಿದರು.
ಮತದಾನ ಜಾಗೃತಿ ಜಾಥಾ, ಗಿಡ ನೆಡುವ ಕಾರ್ಯಕ್ರಮ, ಮತದಾನ ಮಾಡಲು ಪ್ರತಿಯೊಬ್ಬರು ಪ್ರತಿಜ್ಞೆ ಮಾಡುವ ಮೂಲಕ ವಿಶೇಷ ವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಹಣಕಾಸು ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಬಿಎಂಟಿಸಿ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಎ.ವಿ. ಸೂರ್ಯಸೇನ್, ಬಿಬಿಎಂಪಿ ದಕ್ಷಿಣ ವಲಯ ಕಂದಾಯ ಉಪ ಆಯುಕ್ತೆ ಲಕ್ಷ್ಮಿ ದೇವಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.