ಪ್ರತಿ ವಿಧಾನಸಭಾ ಚುನಾವಣೆಯಂತೆ ಈ ಬಾರಿಯೂ ರಾಜ್ಯದಲ್ಲಿ ಮೇ.10ರ ಬುಧವಾರದ ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿತ್ತು. ಹಲವು ಕಡೆಗಳಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಸರಾಸರಿ ಶೇ.8.26ರಷ್ಟು ಮತದಾನವಾಗಿತ್ತು. ರಾಜ್ಯದ ಹಲವು ಕಡೆ ಸಮಾಜದ ಗಣ್ಯವ್ಯಕ್ತಿಗಳು, ರಾಜಕಾರಣಿಗಳು, ವಿವಿಧ ಕ್ಷೇತ್ರಗಳಲ್ಲಿನ ಸೆಲೆಬ್ರೆಟಿಗಳು ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದ್ದಾರೆ.