Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

  • Bengaluru Focus

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Agriculture News | ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

ಬಿತ್ತನೆ ಬೀಜ, ರಸಗೊಬ್ಬರ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಸೂಚನೆ | 5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ ಬೇಡಿಕೆ | 7.85 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳು ಲಭ್ಯ

by Bengaluru Wire Desk
May 30, 2023
in News Wire, Public interest
Reading Time: 1 min read
0

ಬೆಂಗಳೂರು, ಮೇ.30 www.bengaluruwire.com : ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ಮಂಗಳವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.

ಪೂರ್ವ ಮುಂಗಾರಿನಲ್ಲಿ ವಾಡಿಕೆಯಾಗಿ 108 ಮಿ.ಮೀ ಮಳೆಯಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 108 ಮಿ.ಮೀ ಮಳೆಯಾಗಿದ್ದು, ಯಾವುದೇ ಕೊರತೆ ಆಗಿರುವುದಿಲ್ಲ.
2022-23 ನೇ ಸಾಲಿನ ಮೂರನೇ ಮುಂಗಡ ಅಂದಾಜಿನಂತೆ 139.28 ಲಕ್ಷ ಟನ್‌ಗಳಷ್ಟು ಆಹಾರ ಧಾನ್ಯಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ. 2023 ರ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ.

ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಎನ್. ಚಲುವರಾಯಸ್ವಾಮಿ

ಇದುವರೆಗೆ 2.48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ :
ಪೂರ್ವ ಮುಂಗಾರು ಬೆಳೆಗಳ 2.95 ಲಕ್ಷ ಹೆಕ್ಟೇರ್ ಗುರಿಯಿದ್ದು, ಇದುವರೆಗೆ 2.48 ಲಕ್ಷ ಹೆಕ್ಟೇರ್ (ಶೇ.84)ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳಲಾಗಿರುತ್ತದೆ.
5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ ಬೇಡಿಕೆಯಿದ್ದು, 7.85 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳು ಲಭ್ಯವಿದೆ. ಬಿತ್ತನೆ ಬೀಜದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಖಾಸಗಿ ಹಾಗೂ ಸಹಕಾರ ಸಂಘಗಳಲ್ಲಿ 13.90 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು :
2023-24 ಸಾಲಿನ ಮುಂಗಾರು ಹಂಗಾಮಿಗೆ 25.47 ಲಕ್ಷ ಮೆ.ಟನ್ ರಸಗೊಬ್ಬರ ಬೇಡಿಕೆ ಇದೆ. 7.30 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದೆ. ಪ್ರಸ್ತುತ ಖಾಸಗಿ ಹಾಗೂ ಸಹಕಾರ ಸಂಘಗಳಲ್ಲಿ 13.90 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. 1.68 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಕಾಪು ದಾಸ್ತಾನು(Buffer Stock) ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಲಭ್ಯವಿದ್ದು, ಪ್ರಸ್ತುತ ರಸಗೊಬ್ಬರದ ಯಾವುದೇ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.

ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರಿಗೆ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗಬಾರದು. ಪರೀಕ್ಷೆ ಮಾಡಿ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರಿಗೆ ಪೂರೈಕೆ ಮಾಡಬೇಕು. ರೈತರಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಪೂರೈಸಬೇಕು. ಮುಂಗಾರಿನಲ್ಲಿ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಅವರು ಸೂಚನೆ ನೀಡಿದರು.

ಇದರ ಜೊತೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒಗಳು ಹಾಜರಿರಬೇಕು. ಮಣ್ಣು ಪರೀಕ್ಷೆ‌ (Soil Test) ವರದಿಗಳನ್ನು ಸೂಕ್ತ ಸಮಯದಲ್ಲಿ ನೀಡಬೇಕು. ಬೆಳೆ ವಿಮೆ ನೀಡುವಲ್ಲಿ ರೈತರಿಗೆ ಸಮಸ್ಯೆ ಆಗಬಾರದು. ಜಿಲ್ಲಾ ಮಟ್ಟದಲ್ಲಿ ಯಾವುದೇ ಸಮಸ್ಯೆಯಾದರೂ ಜಂಟಿ ನಿರ್ದೇಶಕರೇ ನೇರ ಹೊಣೆ ಆಗುತ್ತೀರಾ ಎಂದು ಸಚಿವರು ಎಚ್ಚರಿಕೆ ನೀಡಿದರು.

ನೆಟೆರೋಗದಿಂದ ತೊಗರಿಬೆಳೆ ಹಾನಿಗೆ ಶೀಘ್ರದಲ್ಲೇ ಪರಿಹಾರ ಬಿಡುಗಡೆ :
2022-23ನೇ ಸಾಲಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 1,98,488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14,495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20,401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10,259 ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿರುತ್ತದೆ. ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ 10 ಸಾವಿರ ಪರಿಹಾರದಂತೆ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿಗಳ ಅನುದಾನ ಘೋಷಿಸಲಾಗಿದ್ದು, ಶೀಘ್ರದಲ್ಲೇ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.‌

ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ‌:
ಕೃಷಿ ಇಲಾಖೆಯಲ್ಲಿ ಶೇ‌.58ನಷ್ಟು ಹುದ್ದೆಗಳು ಖಾಲಿಯಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ರೈತರಿಗೆ ತಲುಪಿಸಲು ವಿಳಂಬ ಆಗಲಿದೆ. ಆ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಅವಶ್ಯವಿದೆ. ಹಾಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಕೃಷಿ ಇಲಾಖೆಗೆ ಒಟ್ಟು 8982 ಹುದ್ದೆಗಳು ಮಂಜೂರಾಗಿದ್ದು, ಆ ಪೈಕಿ 3787 ಹುದ್ದೆಗಳು ಭರ್ತಿಯಾಗಿವೆ. 5195 ಹುದ್ದೆಗಳು ಖಾಲಿಯಿದೆ.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Police Transfer | ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ್ ನೇಮಕ

Next Post

BW SPECIAL | ಬಿಬಿಎಂಪಿ ಶಾಲಾ-ಕಾಲೇಜು 210 ಖಾಯಂ ಶಿಕ್ಷಕರ ನೇಮಕಾತಿಗೆ ನಿರ್ಲಕ್ಷ್ಯ : ವಿದ್ಯಾರ್ಥಿಗಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BW SPECIAL | ಬಿಬಿಎಂಪಿ ಶಾಲಾ-ಕಾಲೇಜು 210 ಖಾಯಂ ಶಿಕ್ಷಕರ ನೇಮಕಾತಿಗೆ ನಿರ್ಲಕ್ಷ್ಯ : ವಿದ್ಯಾರ್ಥಿಗಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ

BMTC Student Bus Pass | ಬಿಎಂಟಿಸಿ ವಿಧ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ಜೂ.15ರ ತನಕ ವಿಸ್ತರಣೆ

Please login to join discussion

Like Us on Facebook

Follow Us on Twitter

Recent News

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

July 27, 2026

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group