ಇಂಧನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಕೆ.ಜೆ. ಜಾರ್ಜ್ ಅವರು ಮೊದಲ ಬಾರಿಗೆ ಬೆಸ್ಕಾಂ ಕೇಂದ್ರ ಕಚೇರಿಗೆ ಗುರುವಾರ ಭೇಟಿ ನೀಡಿದರು. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕ ಜೆ.ದರ್ಶನ್, ತಾಂತ್ರಿಕ ನಿರ್ದೇಶಕ ರಮೇಶ್ ಹೆಚ್. ಜೆ ಅವರು ನೂತನ ಸಚಿವರನ್ನು ಸ್ವಾಗತಿಸಿ, ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಸಚಿವರು ಬೆಸ್ಕಾಂಗೆ ಸಂಬಂಧಿಸಿದಂತೆ ಅತೀ ಶೀಘ್ರದಲ್ಲೇ ಉನ್ನತ ಅಧಿಕಾರಿಗಳ ಸಭೆ ಕರೆಯುವುದಾಗಿ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.