ಬೆಂಗಳೂರು, ಜೂ.9 www.bengaluruwire.com : ರಾಜ್ಯ ಸರ್ಕಾರ ವಿವಿಧ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಚುನಾವಣೆಯಲ್ಲಿ ಬಹುಮತ ಪಡೆದರು ಕಾಂಗ್ರೆಸ್ ಸರ್ಕಾರ ರಚನೆ ಪ್ರಾರಂಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್ ನಾಯಕರ ಉಪಸ್ಥಿತಿಯಲ್ಲಿ ಎಲ್ಲಾ ಗೊಂದಲಗಳಿಗೂ ಪರಿಹಾರ ದೊರಕಿತ್ತು. ಇದಾದ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆಯನ್ನೂ ಸಹ ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸಿ ಹಂಚಿಕೆ ಮಾಡಲಾಗಿತ್ತು.
ಇದೀಗ ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನು ಸದ್ದಿಲ್ಲದೆ ಮಾಡಲಾಗಿದೆ. ಯಾವ ಸಚಿವರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ನೋಡಿ.