ಬೆಂಗಳೂರು, ಜೂ.22 www.bengaluruwire.com : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೊದಲ ಗ್ಯಾರಂಟಿಯಾಗಿ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಜೂನ್ 11ರಿಂದ ಜೂ.21ರ ತನಕದ 11 ದಿನಗಳಲ್ಲಿ ರಾಜ್ಯದಾದ್ಯಂತ 5.40 (5,40,07,124) ಕೋಟಿ ಮಹಿಳೆಯರು ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ.
ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಈ 11 ದಿನಗಳ ಅವಧಿಯಲ್ಲಿ 5.40 ಮಹಿಳೆಯರು ಪ್ರಯಾಣಿಸಿದ ಬಸ್ ಟಿಕೆಟ್ ಮೌಲ್ಯವು 126 ಕೋಟಿ (126,72,99,929 ಕೋಟಿ) ರೂ.ಗಳಾಗಿದೆ ಎಂದು ಕೆಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್.11 ರಿಂದ ಆರಂಭಗೊಂಡ ಈ ಯೋಜನೆಯ ಮೊದಲ ದಿನ 5,71,023 ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದರೆ, ಜೂ.12ರಂದು 41,34,726, ಜೂ.13ರಂದು 51,52,769 ಮಂದಿ ಹಾಗೂ ಜೂ.14ರಂದು ಒಟ್ಟು 50,17,174 ಮಹಿಳೆಯರು ಶಕ್ತಿ ಯೋಜನೆ ಬಳಸಿಕೊಂಡು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಜೂ.21ರಂದು ಒಂದೇ ದಿನ ಒಟ್ಟಾರೆ ರಾಜ್ಯಾದ್ಯಂತ 1,07,25,596 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಸಾರಿಗೆ ಇಲಾಖೆ ನಾಲ್ಕು ನಿಗಮಗಳಿಗೆ ಸೇರಿದ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ.
ಇದನ್ನೂ ಓದಿ : Bescom News | ಬೆಸ್ಕಾಂ ವಿದ್ಯುತ್ ಬಿಲ್ ತಡವಾಗಿದ್ದು ಯಾಕೆ? ಯಾವಾಗ ಬಿಲ್ ಕಟ್ಟಬಹುದು? ಇಲ್ಲಿದೆ ಬೆಸ್ಕಾಂ ಸಮಜಾಯುಷಿ
ಇದೀಗ 21-06-2023ರಂದು ಒಂದೇ ದಿನ KSRTC ಬಸ್ಸಿನಲ್ಲಿ 32,71,314 ಮಂದಿ BMTC ಬಸ್ಸಿನಲ್ಲಿ 33,42,195, NWKRTCಯಲ್ಲಿ 24,92766 ಮಹಿಳೆಯರು ಹಾಗೂ KKRTC ಸಾರಿಗೆ ಬಸ್ಸುಗಳಲ್ಲಿ 16,19,321 ಮಂದಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಬಸ್ಸಿನಲ್ಲಿ ಮಹಿಳೆಯರೊಂದಿಗೆ ಸೌಜನ್ಯದಿಂದ ವರ್ತಿಸಲು ನಿಗಮ ಆದೇಶ :
ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರೊಂದಿಗೆ ಬಸ್ಸಿನ ನಿರ್ವಾಹಕರು ಮತ್ತು ಚಾಲಕರು ಸೌಜನ್ಯಯುತವಾಗಿ ವರ್ತಿಸಬೇಕು ಹಾಗೂ ಈ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಬೇಕು. ತಪ್ಪಿದಲ್ಲಿ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಖಡಕ್ ಆದೇಶದಲ್ಲಿ ತಿಳಿಸಿದೆ. ಅದಾಗ್ಯೂ ಸಹ ಮಹಿಳೆಯರು ಇರುವ ಬಸ್ ನಿಲ್ದಾಣ/ಬಸ್ ನಿಲುಗಡೆ ಸ್ಥಳಗಳಲ್ಲಿ ಬಸ್ ನಿಲ್ಲಿಸದೇ ಇರುವುದು/ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪುಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು ಹಾಗೂ ಇನ್ನಿತರ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಸಾಮಾಜಿಕ ಜಾಲತಾಣ/ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗುತ್ತಿರುವುದನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಹಿಳೆಯರಿಗೆ ವಿತರಿಸುವ ಟಿಕೇಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಲಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ನಿಗದಿತ ಎಲ್ಲಾ ಬಸ್ ನಿಲ್ದಾಣ/ಬಸ್ ನಿಲುಗಡ ಸ್ಥಳಗಳಲ್ಲಿ ನಿಲುಗಡ ನೀಡಿ, ಪ್ರಯಾಣಿಕರನ್ನು ವಿಶೇಷವಾಗಿ ಮಹಿಳೆಯರು/ವಿದ್ಯಾರ್ಥಿಗಳನ್ನು ಹತ್ತಿಸಿ/ಇಳಿಸುವುದು ಹಾಗೂ ಸದರಿ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು. ಇನ್ನು ಮುಂದ, ಮಹಿಳಾ ಪ್ರಯಾಣಿಕರೊಂದಿಗೆ ಯಾವುದೇ ರೀತಿಯಲ್ಲಿ ಅಗೌರವದಿಂದ ನಡೆದುಕೊಳ್ಳುವ ಪ್ರಕರಣಗಳು ವರದಿಯಾದಲ್ಲಿ, ಸಂಬಂಧಪಟ್ಟ ಚಾಲಕ ಮತ್ತು ನಿರ್ವಾಹಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದು ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಿಳೆಯರಿಗೆ ವಿತರಿಸುವ ಟಿಕೆಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಲಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ನಿಗದಿತ ಎಲ್ಲಾ ಬಸ್ ನಿಲ್ದಾಣ/ಬಸ್ ನಿಲುಗಡ ಸ್ಥಳಗಳಲ್ಲಿ ನಿಲುಗಡ ನೀಡಿ, ಪ್ರಯಾಣಿಕರನ್ನು ವಿಶೇಷವಾಗಿ ಮಹಿಳೆಯರು/ವಿದ್ಯಾರ್ಥಿಗಳನ್ನು ಹತ್ತಿಸಿ/ಇಳಿಸುವುದು ಹಾಗೂ ಸದರಿ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು. ಇನ್ನು ಮುಂದ, ಮಹಿಳಾ ಪ್ರಯಾಣಿಕರೊಂದಿಗೆ ಯಾವುದೇ ರೀತಿಯಲ್ಲಿ ಅಗೌರವದಿಂದ ನಡೆದುಕೊಳ್ಳುವ ಪ್ರಕರಣಗಳು ವರದಿಯಾದಲ್ಲಿ, ಸಂಬಂಧಪಟ್ಟ ಚಾಲಕ ಮತ್ತು ನಿರ್ವಾಹಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದು ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ. ಚಾಲನಾ ಸಿಬ್ಬಂದಿಗಳು ‘ಶಕ್ತಿ’ ಯೋಜನೆಯ ಪರಿಣಾಮಕಾರಿ ಯಶಸ್ವಿ ಅನುಷ್ಠಾನಕ್ಕೆ ಸಹಕರಿಸುವ ಆಶಯವನ್ನು ನಿಗಮವು ಹೊಂದಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಟೆಕೆಟ್ ಇಲ್ಲದೆ ಪ್ರಯಾಣಿಸಿದ 3,636 ಪ್ರಯಾಣಿಕರಿಗೆ ದಂಡ :
ಮೇ ತಿಂಗಳಿನಲ್ಲಿ ರಾಜ್ಯದ ರಸ್ತೆ ಸಾರಿಗೆ ನಿಗಮದ 44,052 ಬಸ್ ಗಳಲ್ಲಿ ಟಿಕೆಟ್ ಇಲ್ಲದೆ ಸಂಚರಿಸುತ್ತಿದ್ದ 3,266 ಪ್ರಕರಣಗಳನ್ನು ಪತ್ತೆ ಹಚ್ಚಿರುವ ನಿಗಮದ ತನಿಖಾ ತಂಡವು, 3,636 ಪ್ರಯಾಣಿಕರಿಂದ 5,89,453 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ. ಈ ಮೂಲಕ ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 73,859 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಇಲಾಖೆಯು ಸೂಕ್ತ ಶಿಸ್ತಿನ ಕ್ರಮ ಜರುಗಿಸಿದೆ. ಆದ್ದರಿಂದ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದು ಪ್ರಯಾಣ ಮಾಡುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕರಣೆಯ ಮೂಲಕ ಮನವಿ ಮಾಡಿದೆ.
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.