ಬೆಂಗಳೂರು, ಜು.06 www.bengaluruwire.com : ಮೋಜು ಮತ್ತು ಮಸ್ತಿಗಾಗಿ, ದ್ವಿ-ಚಕ್ರ ವಾಹನ ಮತ್ತು ಮೊಬೈಲ್ ಫೋನ್ಗಳನ್ನು ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು
ವಿವಿಪುರಂ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನೀಡಿದ ಸುಳಿವಿನ ಮೇರೆಗೆ, ಅವರಿಂದ ಸುಮಾರು 18 ಲಕ್ಷ ಮೌಲ್ಯದ 10 ಐಷಾರಾಮಿ ದ್ವಿ-ಚಕ್ರ ವಾಹನ ಮತ್ತು 1 ಆಟೋ ರಿಕ್ಷಾ ಹಾಗೂ 1 ಲಕ್ಷದ 20 ಸಾವಿರ ರೂ. ಮೌಲ್ಯದ 19 ವಿವಿಧ ಕಂಪನಿಯ ಮೊಬೈಲ್ ಫೋನ್ಗಳನ್ನು ಪೊಲೀಸರು ಅಮಾನತ್ತುಪಡಿಸಿಕೊಂಡಿರುತ್ತಾರೆ.
ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಕೃಷ್ಣಕಾಂತ ರವರ ಮಾರ್ಗದರ್ಶನದಲ್ಲಿ ವಿ.ವಿ.ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಜಿ.ನಾಗರಾಜ ಅವರ ಉಸ್ತುವಾರಿಯಲ್ಲಿ, ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮಿರ್ಜಾ ಆ ರಜಾ ರವರ ನೇತೃತ್ವದಲ್ಲಿ ಹಾಗೂ ಸಿಬ್ಬಂದಿ ಈ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.