ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆಯ ಸಂದರ್ಭದಲ್ಲಿ ಸಚಿವರು ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿ ಜನರಿಗೆ ತೊಂದರೆಯಾಗದಂತೆ, ಹಾನಿಯಾದ ಸ್ಥಳಗಳಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.