ಬೆಂಗಳೂರು, ಜು.27 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದ ವತಿಯಿಂದ ಹೊರವಲಯ ವರ್ತುಲ ರಸ್ತೆ (Peripheral ring road) ಭಾಗ-1 ರ ಯೋಜನೆಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿಯ ಸಚಿವರಾದ ಡಿ.ಕೆ. ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ಜು.31ರಂದು ರೈತರು ಹಾಗೂ ಭೂಮಾಲೀಕರೊಂದಿಗೆ ಕುಂದುಕೊರತೆ ಪರಿಹಾರ ಸಭೆಯನ್ನು ಆಯೋಜಿಸಲಾಗಿದೆ.
ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರು, ಅಂಬೇಡ್ಕರ್ ವೀದಿ, ಅರಮನೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಈ ಸಭೆಗೆ ಪೆರಿಫೆರಲ್ ರಿಂಗ್ ರಸ್ತೆ ಭಾಗ-1 ರ ರೈತರು ಹಾಗೂ ಭೂಮಾಲೀಕರು ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಬಹುದೆಂದು ಬಿಡಿಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.