ಬೆಂಗಳೂರು, ಜು.27 www.bengaluruwire.com : ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘಕ್ಕೆ ಜು.27ರಂದು ನಡೆದ ಕಾರ್ಯಕಾರಿ ಮಂಡಳಿ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾರ್ಗದರ್ಶನದ ತಂಡದ ಕಾರ್ಯಕಾರಿ ಸಮಿತಿಯ ಒಟ್ಟು 23 ಸ್ಥಾನಗಳಲ್ಲಿ 20 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವನ್ನು ಸಾಧಿಸಿದ್ದಾರೆ.
ಈ ಚುನಾವಣೆಯಲ್ಲಿ ಒಟ್ಟು 2200 ಮತದಾರರಿದ್ದು, 1900 ಮತಗಳು ಚಲಾವಣೆಯಾಗಿರುತ್ತದೆ. ಚುನಾಯಿತರಾದ ತಂಡದ ಎಲ್ಲಾ ಸದಸ್ಯರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಅಭಿನಂದನೆ ಸಲ್ಲಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸಚಿವಾಲಯ ನೌಕರರ ಸಂಘದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಾರ್ಗದರ್ಶನದ ತಂಡಕ್ಕೆ ಮತ ನೀಡಿದ ಸಚಿವಾಲಯದ ಎಲ್ಲಾ ವೃಂದದ ಅಧಿಕಾರಿ/ನೌಕರರಿಗೆ ಹಾಗೂ ಚುನಾವಣೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತದೆ ಎಂದು ತಿಳಿಸಿದೆ.
ಈ ಕೆಳಕಂಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಾರ್ಗದರ್ಶನದ ತಂಡದವರು ಚುನಾಯಿತ ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಗೆಲುವು ಸಾಧಿಸಿದ್ದಾರೆ :