ಬೆಂಗಳೂರು, ಆ.1 www.bengaluruwire.com :
ರಾಜ್ಯದಲ್ಲಿ ಹೊಸದಾಗಿ ಸೃಷ್ಟಿಸಲಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾರ್ಯದರ್ಶಿ ಹುದ್ದೆಗೆ 2008ರ ಬ್ಯಾಚಿನ ಐಎಎಸ್ ಅಧಿಕಾರಿ ಪಿ.ರಾಜೇಂದ್ರ ಚೋಳನ್ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಚೋಳನ್ ಅವರು ಕರ್ನಾಟಕ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಆಯೋಗದ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಈ ಹುದ್ದೆಯಿಂದ ಅವರನ್ನು ಬಿಡುಗಡೆಗೊಳಿಸಿ ಉಪಮುಖ್ಯಮಂತ್ರಿ ಅವರ ಕಾರ್ಯದರ್ಶಿ ಹುದ್ದೆಗೆ ಸರ್ಕಾರ ನೇಮಿಸಿದೆ.
ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಯು ಸ್ಥಾನಮಾನ ಮತ್ತು ಜವಾಬ್ದಾರಿಗಳಲ್ಲಿ ಮುನ್ಸಿಪಲ್ ಆಡಳಿತದ ನಿರ್ದೇಶಕರ ಕೇಡರ್ ಹುದ್ದೆಗೆ
ಸಮಾನವೆಂದು ಘೋಷಿಸಲಾಗಿದೆ.