Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Lalbagh Flower Show | ಸಸ್ಯಕಾಶಿಯಲ್ಲಿ ಪುಷ್ಪಗಳಲ್ಲಿ ಅರಳಲಿದೆ ವಿಧಾನಸೌಧ…!! : ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆ

ಫಲಪುಷ್ಪ ಪ್ರದರ್ಶನ ಆ.4ರಿಂದ 15ರ ತನಕ | ಪ್ರದರ್ಶನಕ್ಕೆ 2.50 ಕೋಟಿ ರೂ. ವೆಚ್ಚ | 10 ಲಕ್ಷ ಮಂದಿ ಪ್ರದರ್ಶನಕ್ಕೆ ಆಗಮಿಸುವ ನಿರೀಕ್ಷೆ | ಲಾಲ್ ಬಾಗ್ ನ 6 ಎಕರೆ ಜಾಗದಲ್ಲಿ ಪಶ್ಚಿಮಘಟ್ಟದ 132 ಸಸ್ಯ ಪ್ರಬೇಧಗಳ 450 ಸಸಿಗಳನ್ನು ನೆಟ್ಟ ವಿದ್ಯಾರ್ಥಿಗಳು - ಸಿಬ್ಬಂದಿ

by Bengaluru Wire Desk
August 2, 2023
in Bengaluru Focus, Public interest
Reading Time: 2 mins read
0

ಬೆಂಗಳೂರು, ಆ.2 www.bengaluruwire.com : ಈ ಬಾರಿ ಲಾಲ್ ಬಾಗ್ ನಲ್ಲಿ ಆಗಸ್ಟ್ 4 ರಿಂದ ಆಗಸ್ಟ್ 15ರವರೆಗೂ ನಡೆಯುವ ಸ್ವಾತಂತ್ರೋತ್ಸವದ ಫಲಪುಷ್ಪ ಪ್ರದರ್ಶನ ವಿಭಿನ್ನವಾಗಿರಲಿದೆ.‌ ಕರ್ನಾಟಕದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ನಡೆಯಲಿದೆ.

ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ಈ ಬಗ್ಗೆ ವಿವರ ನೀಡಿದ ತೋಟಗಾರಿಕೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರು, ನಾಡಿನ ಕೀರ್ತಿಯನ್ನು ದೇಶದಾದ್ಯಂತ ಹರಡಿದ ಕೆಂಗಲ್ ಹನುಮಂತಯ್ಯ ಅವರ ಜೀವನ, ಸಾಧನೆ, ಹೋರಾಟಗಳನ್ನು ಈ ವರ್ಷ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ಪುಷ್ಪ ಗೌರವ ಮೂಲಕ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ತೋಟಗಾರಿಕೆ ಇಲಾಖೆ ಸ್ವಾತಂತ್ರೋ ತ್ಸವದ ಅಂಗವಾಗಿ ಹಮ್ಮಿಕೊಂಡಿರುವ 214ನೇ ಫಲಪುಷ್ಪ ಪ್ರದರ್ಶನ ಇದಾಗಿದ್ದು, ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಆಗಸ್ಟ್ 4ರಂದು ಸಂಜೆ 6ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ವಿವರಿಸಿದರು.

ಗಾಜಿನ ಮನೆಯಲ್ಲಿ ಹೂಗಳ ಅಲಂಕರಿಸಿ ಸಿಂಗರಿಸುವ ಕೆಲಸ ಭರದಿಂದ ಸಾಗಿದೆ.

ಗಾಜಿನ ಮನೆಯ ಕೇಂದ್ರಭಾಗದಲ್ಲಿ 18 ಅಡಿ ಅಗಲ, 36 ಅಡಿ ಉದ್ದ ಮತ್ತು 18 ಅಡಿ ಎತ್ತರದ ವಿಧಾನಸೌಧವು 7.2 ಲಕ್ಷ ವಿವಿಧ ತಳಿಯ ಪುಷ್ಪಗಳಲ್ಲಿ ಅರಳಲಿದೆ. ಕೆಂಗಲ್ ಹನುಮಂತಯ್ಯ ಅವರ 14 ಅಡಿ ಎತ್ತರದ ಬೃಹತ್ ಪ್ರತಿಮೆಯು ಅನಾವರಣಗೊಳ್ಳಲಿದ್ದು, ನೋಡಗರ ಕಣ್ಮನ ಸೆಳೆಯಲಿದೆ. ಗಾಜಿನ ಮನೆಯ ಕೇಂದ್ರ ಭಾಗದ ಬಲಬದಿಗೆ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಪುಷ್ಪ ಮಾದರಿಯನ್ನು 3.48 ಲಕ್ಷ ಸೇವಂತಿಗೆ ಹೂಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಆಗಸ್ಟ್ 5ರಿಂದ ನಡೆಯುವ ಡಚ್ ಹೂವಿನ ಜೋಡಣೆ, ಇಕೆಬಾನ, ತರಕಾರಿ ಕೆತ್ತನೆ, ಪುಷ್ಪಭಾರತಿ, ಬೋನ್ಸಾಯ್, ಥಾಯ್ ಆರ್ಟ್, ಜಾನೂರು ಒಣಹೂವಿನ ಜೋಡಣೆಯ ಕಲೆಗಳ ಸ್ಪರ್ಧೆಯ ಪ್ರದರ್ಶನವನ್ನು ಹೈಕೋರ್ಟ್ ನ್ಯಾಯಮೂರ್ತಿ ಎಚ್‌. ಪಿ.ಸಂದೇಶ್ ಉದ್ಘಾಟಿಸಲಿದ್ದಾರೆ. ಚಲನಚಿತ್ರ ನಟಿ ಉಮಾಶ್ರೀ ಭಾಗವಹಿಸಲಿದ್ದಾರೆ.

ಲಾಲ್ ಬಾಗ್ ಗಾಜಿನ ಮನೆ ಸುತ್ತಮುತ್ತ ಏನೆಲ್ಲಾ ಫಲಫುಷ್ಪ ಪ್ರದರ್ಶನ ಕಾಣಸಿಗಲಿದೆ ಎಂಬುದರ ನಕ್ಷೆಯ ಚಿತ್ರ.

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದ ಹೈಲೈಟ್ಸ್ :
*ಪ್ರಥಮ ಬಾರಿಗೆ ಪ್ರದರ್ಶನಕ್ಕೆ ಪ್ರವೇಶ ಪಡೆಯಲು ಆನ್ ಲೈನ್ ಬುಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವೇಶ ಶುಲ್ಕ ವಯಸ್ಕರಿಗೆ 70ರೂ., ರಜಾ ದಿನಗಳಲ್ಲಿ 80ರೂ., ಮಕ್ಕಳಿಗೆ 30ರೂ., ಹಾಗೂ ಸಮವಸ್ತ್ರ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ.
*ಪ್ರದರ್ಶನ ಸಮಯ ಬೆಳಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ.
*2.50 ಕೋಟಿ ರೂ. ಪ್ರದರ್ಶನದ ಒಟ್ಟು ವೆಚ್ಚ.
*10 ಲಕ್ಷ ಫಲಪುಷ್ಪ ಪ್ರದರ್ಶನಕ್ಕೆ ಬರುವವರ ಅಂದಾಜು ಸಂಖ್ಯೆ.
*ಲಾಲ್ ಬಾಗ್ ನಲ್ಲಿ ಒಟ್ಟು 136 ಸಿಸಿಟಿವಿ ಅಳವಡಿಕೆ.
*29 ಲಕ್ಷ ಬಳಕೆಯಾಗಿರುವ ಅಂದಾಜು ಹೂಕುಂಡ ಹಾಗೂ ಪ್ರತ್ಯೇಕಿಸಿದ ಹೂಗಳ‌ ಸಂಖ್ಯೆ.

ಗಾಜಿನ ಮನೆಯ ಇಕ್ಕೆಲಗಳಲ್ಲಿ ಹೂವಿನಿಂದ ಅಲಂಕರಿಸಿರುವ ಕೆಲಸ ಕಾರ್ಯಗಳು ನಡೆಯುತ್ತಿದೆ.

ಪಾರ್ಕಿಂಗ್ ಎಲ್ಲೆಲ್ಲಿದೆ ?:

  • ಹಾಪ್‌ಕಾಮ್ಸ್ ಆವರಣ ಮತ್ತು ಜೆ.ಸಿ. ರಸ್ತೆಯಲ್ಲಿರುವ ಬಿಬಿಎಂಪಿ ಬಹುಮಹಡಿ ವಾಹನ ನಿಲ್ದಾಣ
  • ಶಾಂತಿನಗರ ಬಸ್‌ನಿಲ್ದಾಣದ ಬಹುಮಹಡಿ ವಾಹನ ನಿಲ್ದಾಣ
  • ಅಲ್ ಅಮೀನ್ ಕಾಲೇಜು ಮೈದಾನ

ಇಕೆಬಾನ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಆಗಸ್ಟ್‌ 14ರಂದು ಸಾಹಿತಿ ಶೂದ್ರ ಶ್ರೀನಿವಾಸ್, ಜಾನಪದ ತಜ್ಞೆ ಕೆ.ಆರ್. ಸಂಧ್ಯಾ ರೆಡ್ಡಿ, ಚಲನಚಿತ್ರ ನಟಿ ರಚಿತಾ ರಾಮ್ ಬಹುಮಾನ ವಿತರಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ನಿರ್ದೇಶಕ ರಮೇಶ್ ಡಿ.ಎಸ್, ಜಂಟಿ ನಿರ್ದೇಶಕ ಎಂ.ಜಗದೀಶ್, ಉಪನಿರ್ದೇಶಕಿ ಜಿ.ಕುಸುಮಾ ಪಾಲ್ಗೊಂಡಿದ್ದರು.

ಪಶ್ಚಿಮಘಟ್ಟ ಸಸ್ಯ ಪ್ರಬೇಧಗಳ ಸಸಿಗಳ ನೆಡುವಿಕೆ ಕಾರ್ಯಕ್ರಮ :

ಲಾಲ್ ಬಾಗ್ ನಲ್ಲಿ 6 ಎಕರೆ ಸ್ಥಳದಲ್ಲಿ ಸಹ್ಯಾದ್ರಿಯ 132 ಸಸ್ಯ ಪ್ರಬೇಧಗಳ ಸಸಿ‌ ನೆಡಲಾಗಿರುವ ಸ್ಥಳದ ಚಿತ್ರ

ಲಾಲ್‌ಬಾಗ್‌ನಲ್ಲಿ ಪ್ರಸ್ತುತ ಒಟ್ಟಾರೆ 2,350 ಕ್ಕೂ ಹೆಚ್ಚು ಸಸ್ಯ ಪ್ರಬೇಧಗಳದ್ದು ಗಿಡಗಳನ್ನು ಪರಿಚಯಿಸುವ ಕಾರ್ಯ ಪರಿಣಾಮಕಾರಿಯಾಗಿ ಮುಂದುವರೆದಿದೆ. ಇದರ ಭಾಗವಾಗಿ ಲಾಲ್‌ಬಾಗ್‌ನ ಐತಿಹಾಸಿಕ ಬಂಡೆ ಹಿಂಭಾಗದ ಪ್ರದೇಶದಲ್ಲಿ (ಸಿದ್ದಾಪುರ ಪ್ರವೇಶ ದ್ವಾರದ ಬಳ) ಕಳೆದ ಎಪ್ಪತ್ತು ವರ್ಷಗಳಿಂದ ಖಾಲಿ ಇದ್ದ 6 ಎಕರೆ ಆಯ್ದ ಪ್ರದೇಶದಲ್ಲಿ ನಮ್ಮ ರಾಜ್ಯದ ಅಮೂಲ್ಯ ಸಂಪತ್ತಾದ ಸಹ್ಯಾದ್ರಿಯ (ಪಶ್ಚಿಮ ಘಟ್ಟ/Western Ghats) 132 ಸಸ್ಯ ಪ್ರಬೇಧಗಳಿಗೆ ಸೇರುವ 450 ಸಸಿಗಳನ್ನು ಪ್ರಪ್ರಥಮ ಬಾರಿಗೆ ನೆಡುಲಾಯಿತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Gruha Jyothi Scheme | ಇಂದಿನಿಂದಲೇ ಅರ್ಹ ಫಲಾನುಭವಿಗಳಿಗೆ ಗೃಹಜ್ಯೋತಿ ಶೂನ್ಯ ಬಿಲ್ ವಿತರಣೆ ಆರಂಭ : ಸಚಿವ ಕೆ.ಜೆ.ಜಾರ್ಜ್

Next Post

BW SPECIAL | KAS NEWS | ಕೆಎಎಸ್ – ಐಎಎಸ್ ಅಧಿಕಾರಿಗಳ “ಬಾಂಧವ್ಯ” ವೃದ್ಧಿಗೆ ಕೆಎಎಸ್ಒಎ ಸಂಘದ ದುರ್ಬಳಕೆ : ಮುಖ್ಯ ಕಾರ್ಯದರ್ಶಿಗಳಿಗೆ ದೂರು

Next Post
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

BW SPECIAL | KAS NEWS | ಕೆಎಎಸ್ – ಐಎಎಸ್ ಅಧಿಕಾರಿಗಳ “ಬಾಂಧವ್ಯ” ವೃದ್ಧಿಗೆ ಕೆಎಎಸ್ಒಎ ಸಂಘದ ದುರ್ಬಳಕೆ : ಮುಖ್ಯ ಕಾರ್ಯದರ್ಶಿಗಳಿಗೆ ದೂರು

ನಗರದ ಧರ್ಮರಾಯ ಸ್ವಾಮಿ ದೇವಸ್ಥಾನ ಮುಖ್ಯರಸ್ತೆಯಲ್ಲಿನ ಗಂಗಾಧರೇಶ್ವರ ದೇವಸ್ಥಾನದ ಹಾನಿಯಾಗಿದ್ದ ಗೋಡೆಯನ್ನು ಬಿಬಿಎಂಪಿ  ದುರಸ್ತಿಪಡಿಸುತ್ತಿರುವ ಚಿತ್ರ.

BBMP News | ಬಿಬಿಎಂಪಿಯಿಂದ, ಹಾನಿಯಾಗಿದ್ದ ಐತಿಹಾಸಿಕ ಗಂಗಾಧರೇಶ್ವರ ದೇವಸ್ಥಾನ ಗೋಡೆ ದುರಸ್ತಿ ಕಾರ್ಯ ಚುರುಕು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d