Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW Special | BBMP Works Inquiry Committee | ಬಿಬಿಎಂಪಿ ಅಕ್ರಮ ಕಾಮಗಾರಿಗಳ ತನಿಖೆಗಾಗಿ ನಾಲ್ಕು ಪ್ರತ್ಯೇಕ ತನಿಖಾ ಸಮಿತಿಗಳನ್ನು ರಚಿಸಿದ ರಾಜ್ಯ ಸರ್ಕಾರ

2019-20 ರಿಂದ 2022-23 ರವರೆಗೆ ಪಾಲೊಕೆ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆ- ಕಾರ್ಯಕ್ರಮಗಳಲ್ಲಿ ವ್ಯಾಪಕ ಭ್ರಷ್ಟಾಚಾರ, ಅಕ್ರಮ ನಡೆದಿರುವ ಬಗ್ಗೆ ವ್ಯಾಪಕ ದೂರಿನ ಹಿನ್ನಲೆಯಲ್ಲಿ ವಿಶೇಷ ತನಿಖಾ ಸಮಿತಿ ರಚನೆ. | ಇಕ್ಕಟ್ಟಿನಲ್ಲಿ ಬಿಜೆಪಿ - ಪಾಲಿಕೆ ಗುತ್ತಿಗೆದಾರರು

by Bengaluru Wire Desk
August 7, 2023
in Bengaluru Focus, BW Special, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಆ.7 www.bengaluruwire.com :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಯೋಜನೆಗಳು, ಕಾರ್ಯಕ್ರಮಗಳ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ವ್ಯಾಪಕ ದೂರಿನ ಹಿನ್ನಲೆಯಲ್ಲಿ ಸಂಪೂರ್ಣವಾದ ತನಿಖೆಗಾಗಿ ರಾಜ್ಯ ಸರ್ಕಾರ ಪ್ರತ್ಯೇಕವಾದ ತಜ್ಞರ ತನಿಖಾ ಸಮಿತಿ ರಚಿಸಿದೆ.

ಕಾಮಗಾರಿಗಳನ್ನು ನಿರ್ವಹಿಸದೆಯೇ ಬಿಲ್ ಪಾವತಿಸಿರುವುದು, ಟೆಂಡರ್ ನೀಡುವಲ್ಲಿ ಕೆ.ಟಿ.ಪಿ.ಪಿ ನಿಯಮಗಳನ್ನು ಉಲ್ಲಂಘಿಸಿರುವುದು, ಹೆಚ್ಚಿನ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡದಿರುವುದು ಹಾಗೂ ಅನುಮೋದಿತ ಕಾಮಗಾರಿಗಳನ್ನು ಅನುಷ್ಟಾನಗೊಳಿಸದಿರುವ ಬಗ್ಗೆ ದೂರುಗಳು ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಮತ್ತು ಜಲ ಸಂಪನ್ಮೂಲ ಸಚಿವರೂ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶೇಷ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿ ಪತ್ರ ಬರೆದಿದ್ದರು.

ಈ ಕುರಿತಂತೆ ತನಿಖೆ ನೀಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯು ನಾಲ್ಕು ತನಿಖಾ ಸಮಿತಿಗಳನ್ನು ಪ್ರತ್ಯೇಕವಾಗಿ ರಚಿಸಿ ಆದೇಶ ಹೊರಡಿಸಿದೆ. ಘನತ್ಯಾಜ್ಯ ನಿರ್ವಹಣೆ ಕಾಮಗಾರಿಗಳ ತನಿಖಾ ಸಮಿತಿಗೆ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ನೇತೃತ್ವದ ನಾಲ್ವರ‌ ತನಿಖಾ ಸಮತಿ, ರಸ್ತೆ ಆಭಿವೃದ್ಧಿ ಕಾಮಗಾರಿಗಳು ಮತ್ತು ಓಎಫ್ ಸಿ ಕೇಬಲ್‌ಗಳಿಗೆ ಅನುಮತಿ ನೀಡಿರುವ ಬಗ್ಗೆ ತನಿಖಾ ಸಮಿತಿಗೆ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಆರು ಮಂದಿಯ ಸದಸ್ಯರ ಸಮಿತಿಯನ್ನು ಆ.5ರಂದು ರಚಿಸಲಾಗಿದೆ. ಈ ಸಮಿತಿಯು 30 ದಿನದ ಒಳಗೆ ತನ್ನ ಅಭಿಪ್ರಾಯ ಹಾಗೂ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಸೂಚಿಸಿದೆ.

ಇನ್ನು ಬೃಹತ್ ನೀರುಗಾಲುವೆ ಕಾಮಗಾರಿಗಳು, ಕೇಂದ್ರ, ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪತ್ರ (OC) ನೀಡಿರುವ ಬಗ್ಗೆ ಐಎಎಸ್ ಅಧಿಕಾರಿ ಪಿ.ಸಿ.ಜಾಫರ್ ಅಧ್ಯಕ್ಷತೆಯ ನಾಲ್ವರ ಸಮತಿಯನ್ನು ಸರ್ಕಾರವು ರಚನೆ ಮಾಡಿದೆ. ಜೊತೆಗೆ ಕೆರೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳು ಮತ್ತು ವಾರ್ಡ್ ಮಟ್ಟದ ಕಾಮಗಾರಿಗಳ ತನಿಖೆ ನಡೆಸಲು ಡಾ.ವಿಶಾಲ್ ಅಧ್ಯಕ್ಷತೆಯಲ್ಲಿ ಆರು ಮಂದಿಯ ತನಿಖಾ ಸಮಿತಿಯನ್ನು ಸರ್ಕಾರ ರಚಿಸಿ ಆದೇಶ ಹೊರಡಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ಪ್ರಮುಖವಾಗಿ ಘನತ್ಯಾಜ್ಯ ನಿರ್ವಹಣೆ ಕಾಮಗಾರಿಗಳು, ರಸ್ತೆ ಅಭಿವೃದ್ಧಿ ಕಾಮಗಾರಿಗಳು, ಓಎಫ್‌ಸಿ ಕೇಬಲ್ ಅಳವಡಿಕೆ, ಬೃಹತ್ ನೀರುಗಾಲುವೆ ಕಾಮಗಾರಿಗಳು, ಕೇಂದ್ರ ಹಾಗೂ ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ ಸ್ವಾಧೀನಾನುಭವ ಪತ್ರ ನೀಡುವಿಕೆ ಸಂಬಂಧ ಪ್ರಮುಖವಾಗಿ ತನಿಖಾ ಸಮಿತಿಗಳು ತನಿಖೆ ನಡೆಸಲಿವೆ.

ವಿವಿಧ ನಾಲ್ಕು ತನಿಖಾ ಸಮತಿಗಳ ಅಧ್ಯಕ್ಷರು ಮತ್ತು ಸಮಿತಿ ಸದಸ್ಯರ ವಿವರ :

ಇದಲ್ಲದೇ ಕೆರೆಗಳ ಅಭಿವೃದ್ಧಿ ಕಾಮಗಾರಿಗಳು. ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿಗಳು ಮತ್ತು ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ದೂರು ಪ್ರಕರಣಗಳನ್ನು ಸಹಜ ನ್ಯಾಯ ತತ್ವದ ಅಡಿಯಲ್ಲಿ ಗಂಭೀರ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಬಾಹ್ಯ ಮೂಲದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಆಯಾ ವಿಷಯ ವ್ಯಾಪ್ತಿಗೊಳಪಟ್ಟಂತೆ ಸಮಿತಿ ರಚಿಸಿದೆ. ಈ ಸಮಿತಿಯಲ್ಲಿ ಪರಿಣಿತರು, ತಜ್ಞರುಗಳನ್ನು ನೇಮಿಸಿ ತನಿಖಾ ಸಮಿತಿಗಳಿಂದ ಸ್ವತಂತ್ರ ವಿಚಾರಣೆ ನಡೆಸಲಾಗುತ್ತದೆ ಎಂದು ನಗರಾಭಿವೃದ್ಧಿ ಇಲಾಖೆಯು ತನ್ನ ಆದೇಶದಲ್ಲಿ ತಿಳಿಸಿದೆ.

2019-20 ರಿಂದ 2022-23 ರವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತದ ಅವಧಿ ಮುಗಿದ ಕಾರಣ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಈ ಅವಧಿಯಲ್ಲಿ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್, ಬಿಜೆಪಿಯು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಡೆಸುವ ಕಾಮಗಾರಿಗಳಲ್ಲಿ 40 ಪರ್ಸೆಂಟ್ ಕಮಿಷನ್ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿತ್ತು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ವಿಚಾರವನ್ನು ಚುನಾವಣಾ ತಂತ್ರದಲ್ಲಿ ಪ್ರಮುಖವಾಗಿ ಪ್ರಯೋಗಿಸಿ, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಏರುವಲ್ಲಿ ಮಹತ್ವದ ಪಾತ್ರವಹಿಸಿತ್ತು. ಇದೀಗ ಮುಂದಿನ ವರ್ಷ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ, ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಜನರ ಎದುರಿಗೆ ಇಡಲು ಸ್ವತಂತ್ರ ವಿಚಾರಣೆ ನಡಿಸಲು ನಾಲ್ಕು ಪ್ರತ್ಯೇಕ ಸಮಿತಿಗಳನ್ನು ರಚಿಸುವ ತಂತ್ರಕ್ಕೆ ಕೈ ಹಾಕಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ತನಿಖಾ ಸಮಿತಿ ರಚನೆಆ.1ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪಾಲಿಕೆ ವ್ಯಾಪ್ತಿಯಲ್ಲಿ 2019-20ರಿಂದ 2022-23ನೇ ಸಾಲಿನ ತನಕ ಪಾಲಿಕೆಯಲ್ಲಿ ಕೈಗೊಂಡ ಕಾಮಾಗಾರಿಗಳು, ಟೆಂಡರ್ ಮತ್ತಿತರ 26 ಅಂಶಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಪತ್ರ ಬರೆದಿದ್ದರು. ಈ ಪತ್ರವು ಸಾಕಷ್ಟು ವೈರಲ್ ಆಗಿತ್ತು. ಅಲ್ಲದೆ ಈ ವಿಚಾರವು ಪಾಲಿಕೆಯಲ್ಲಿ ಕಾಮಗಾರಿಗಳ ಗುತ್ತಿಗೆ ನಿರ್ವಹಿಸಿ ಬಾಕಿ ಮೊತ್ತ ಪಾವತಿಗಾಗಿ ಕಾಯುತ್ತಿರುವ ನೂರಾರು ಗುತ್ತಿಗೆದಾರರ ಅಸಮಾಧಾನ ಹಾಗೂ ತೀವ್ರ ಆಕ್ಷೇಪಕ್ಕೂ ಕಾರಣವಾಗಿದೆ.

ಇದೀಗ ಸರ್ಕಾರ ಈ ನಾಲ್ಕು ವರ್ಷಗಳ ಅವಧಿಯ ಕಾಮಗಾರಿಗಳ ತನಿಖೆಗೆ ಸಮಿತಿ ರಚಿಸಿರುವುದರಿಂದ ಪಾಲಿಕೆ ಗುತ್ತಿಗೆದಾರರಿಗೆ ಪಾಲಿಕೆಯ ವ್ಯಾಪ್ತಿಯಲ್ಲಿ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಬಿಬಿಎಂಪಿ ಅನುದಾನದಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಸಂಪೂರ್ಣವಾದ ತನಿಖೆ ಪೂರ್ಣಗೊಂಡು, ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿ ಅದು ಮುಂದಿನ‌ಕ್ರಮ ಕೈಗೊಳ್ಳುವ ತನಕ ಬಿಲ್ ಪಾವತಿಯಾಗುವುದು ಅನುಮಾನವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Flash News |Actress Spandana | ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಬ್ಯಾಂಕಾಕ್ ನಲ್ಲಿ ನಿಧನ : ಮೃತದೇಹ ನಾಳೆ ಬೆಂಗಳೂರಿಗೆ

Next Post

BBMP Contractors Bills | ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ, ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ : ಡಿಸಿಎಂ ಡಿ.ಕೆ. ಶಿವಕುಮಾರ್

Next Post

BBMP Contractors Bills | ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ, ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ : ಡಿಸಿಎಂ ಡಿ.ಕೆ. ಶಿವಕುಮಾರ್

Bangalore Illegal Advt. Ban | ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್- ಬ್ಯಾನರ್ ನಿರ್ಬಂಧ ಜಾರಿ : ರೂಲ್ಸ್ ಬ್ರೇಕ್ ಗೆ 50 ಸಾವಿರ ರೂ. ದಂಡ

Please login to join discussion

Like Us on Facebook

Follow Us on Twitter

Recent News

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d