Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Coastline Plastic Pollution | ರಾಜ್ಯದ ಕರಾವಳಿಯಲ್ಲಿ ಪ್ರತಿದಿನ 50 ಟನ್ ಪ್ಲಾಸ್ಟಿಕ್ ಕಡಲ ಒಡಲು ಸೇರುತ್ತಿದೆ!! : ಇದು ಸಮುದ್ರ ಜೀವಿಗಳ ಪಾಲಿಗೆ ಮರಣ ಶಾಸನ

ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ | ವಿಶ್ವಬ್ಯಾಂಕ್ ತಜ್ಞರ ತಂಡದಿಂದ ಈಶ್ವರ ಖಂಡ್ರೆ ಭೇಟಿ | ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು- ಪರಿಸರ ಸಚಿವ ಈಶ್ವರ್ ಖಂಡ್ರೆ ಪರಿಸರ ಅಧಿಕಾರಿಗಳಿಗೆ ಸೂಚನೆ

by Bengaluru Wire Desk
August 9, 2023
in News Wire, Public interest
Reading Time: 1 min read
0
ಸಮುದ್ರ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವಿರುವ ಚಿತ್ರ (ಸಾಂದರ್ಭಿಕ ಚಿತ್ರ)

ಸಮುದ್ರ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವಿರುವ ಚಿತ್ರ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಆ.8 www.bengaluruwire.com : ಪರಿಸರ ಮಾಲಿನ್ಯ ನಗರ ಪಟ್ಟಣ ಪ್ರದೇಶಗಳಂತೆ ರಾಜ್ಯದ ಕರಾವಳಿಗೂ ವ್ಯಾಪಿಸಿದೆ. 317 ಕಿಲೋ ಮೀಟರ್ ಇರುವ ನಮ್ಮ ಕರಾವಳಿಯ ಕಡಲಿಗೆ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬ ಆಘಾತಕಾರಿ ಹಾಗೂ ಗಂಭೀರವಾದ ವಿಷಯ ಬಹಿರಂಗವಾಗಿದೆ.

ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರವನ್ನು ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದೆ. ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ (World Bank) ಪ್ರಸ್ತಾಪಿತ ಕೆ.ಶೋರ್ – ಬ್ಲೂ ಪ್ಯಾಕ್ (Karnataka – Surface Sustainable Harvest of Ocean Resources- Blue Pack) ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸುವಂತೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಶ್ವಬ್ಯಾಂಕ್ ನಿಯೋಗ ಮಂಗಳವಾರ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆಯನ್ನು ಭೇಟಿ ಮಾಡಿ, ಕರಾವಳಿಯಲ್ಲಿ ಪ್ಲಾಸ್ಟಿಕ್ ಮಾಲಿನ್ಯ ಕುರಿತು ಗಹನ ಚರ್ಚೆ ನಡೆಸಿದರು.

ರಾಜಧಾನಿಯಲ್ಲಿ ಇಲಾಖೆಯ ತಮ್ಮ ಕಚೇರಿಯಲ್ಲಿ ಮಂಗಳವಾರ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ ಮತ್ತು ಕಾರ್ಯ ಗುಂಪಿನ ನಾಯಕ ಪಾಬ್ಲೋ ಸಿ. ಬೆನಿಟೆಜ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, “317 ಕಿಲೋ ಮೀಟರ್ ಕರುನಾಡ ಕರಾವಳಿಯಲ್ಲಿ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬುದು ಆಘಾತಕಾರಿ ಅಂಶವಾಗಿದೆ. ಇದರಿಂದ ಸಮುದ್ರ ತಟಕ್ಕೆ ಬಂದು ಮೊಟ್ಟೆ ಇಟ್ಟು ಮರಿ ಮಾಡುವ ಆಮೆ ಸೇರಿದಂತೆ ಮೊದಲಾದ ಜಲಚರಗಳ ಸಂತಾನೋತ್ಪತ್ತಿಗೆ ಬಾಧಕವಾಗುತ್ತಿದೆ” ಎಂಬ ಅಂಶದ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಬ್ಲೂ ಪ್ಯಾಕ್ ಯೋಜನೆಯ ಒಟ್ಟು ಮೊತ್ತ 840 ಕೋಟಿ ರೂ. ಆಗಿದ್ದು, ಇದರಲ್ಲಿ ಶೇ.70ರಷ್ಟನ್ನು ವಿಶ್ವಬ್ಯಾಂಕ್ ಸಾಲದ ರೂಪದಲ್ಲಿ ನೀಡಲಿದೆ. ರಾಜ್ಯ ಸರ್ಕಾರ ಶೇ.30ರಷ್ಟು ಭರಿಸಬೇಕಾಗುತ್ತದೆ. ಪ್ರಾಥಮಿಕ  ಯೋಜನಾ ವರದಿ (ಪಿಪಿಆರ್)ಗೆ ನೀತಿ ಆಯೋಗ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಬೆಂಬಲವಿದೆ ಎಂದು ಅಧಿಕಾರಿಗಳು ಇದೇ ಸಂದರ್ಭದಲ್ಲಿ ವಿವರಿಸಿದರು.

ಮಾನವರ ಮತ್ತು ಸಮಸ್ತ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಿದೆ ಎಂದು ಪ್ರತಿಪಾದಿಸಿದ ಸಚಿವ ಈಶ್ವರ ಖಂಡ್ರೆ, ಕರುನಾಡ ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ದುಷ್ಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿ ಆಗಬಹುದು ಎಂದು ತಿಳಿಸಿದರು.

ನಿಯೋಗದಲ್ಲಿದ್ದ ಸದಸ್ಯರು ಕರಾವಳಿಯಲ್ಲಿರುವ ಮೀನುಗಾರರು, ಮೀನುಗಾರಿಕೆಗೆ ವಿರಾಮವಿದ್ದ ಸಂದರ್ಭದಲ್ಲಿ ಕಡಲತಡಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡಬಹುದು. ಮೀನು ಹಿಡಿಯುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಅವರಿಗೆ ಹೆಚ್ಚು ಲಾಭದಾಯಕ ಆಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತು ವಿಜಯ ಮೋಹನ್ ರಾಜ್ ಮತ್ತಿತರರರು ಭಾಗಿಯಾಗಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Bangalore Illegal Advt. Ban | ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್- ಬ್ಯಾನರ್ ನಿರ್ಬಂಧ ಜಾರಿ : ರೂಲ್ಸ್ ಬ್ರೇಕ್ ಗೆ 50 ಸಾವಿರ ರೂ. ದಂಡ

Next Post

Wildlife News | Indian Tasar silk Moth | ಬೆಂಗಳೂರಿನಲ್ಲಿ ಅಪರೂಪದ ರೇಷ್ಮೆ ಪತಂಗ ಪ್ರತ್ಯಕ್ಷ!!

Next Post
ಬೆಂಗಳೂರಿನ ಆರ್ ಆರ್ ನಗರದಲ್ಲಿ ಮನೆಯೊಂದರಲ್ಲಿ ಕಂಡು ಬಂದ ಅಪರೂಪದ ಇಂಡಿಯನ್ ಟಸರ್ ಸಿಲ್ಕ್ ಮೊತ್ ಎಂಬ ಆಕರ್ಷಕ ಬಣ್ಣದ ಪತಂಗ ಎಲ್ಲರ ಗಮನ ಸೆಳೆಯಿತು.

Wildlife News | Indian Tasar silk Moth | ಬೆಂಗಳೂರಿನಲ್ಲಿ ಅಪರೂಪದ ರೇಷ್ಮೆ ಪತಂಗ ಪ್ರತ್ಯಕ್ಷ!!

Freedom Fighters | ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d