ಬೆಂಗಳೂರು, ಆ.19 www.bengaluruwire.com : ದ್ವಿತೀಯ ಪಿ.ಯು.ಸಿ 2ನೇ ಪೂರಕ ಪರೀಕ್ಷೆ ಆ.8ರಿಂದ ಸೆ.2ರ ವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯ ಬಸ್ ಗಳಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಿಬರಲು ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದೆ.
ದ್ವಿತೀಯ ಪಿ.ಯು.ಸಿ 2ನೇ ಪೂರಕ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಎಲ್ಲಾ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಈ ಉಚಿತ ಪ್ರಯಾಣ ವ್ಯವಸ್ಥೆಯನ್ನು ಮಾಡಿದೆ ಎಂದು ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.






















