ಬೆಂಗಳೂರು, ಸೆ.14 www.bengaluruwire.com : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಪೈಕಿ ಕೇಂದ್ರದ ಮಾನದಂಡದಲ್ಲಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಆದೇಶಿಸಿದೆ.
ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆಯ(Ground Truthing) ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಘೋಷಿಸಿ ಆದೇಶಿಸಿದೆ.
ರಾಜ್ಯದಲ್ಲಿ 2023ನೇ ಸಾಲಿನ ನೈಋತ್ಯ ಮುಂಗಾರು ರಾಜ್ಯಕ್ಕೆ ಜೂ.8 ರಂದು ವಾಡಿಕೆಗಿಂತ ಒಂದು ವಾರ ತಡವಾಗಿ ಪ್ರವೇಶಿಸಿತ್ತು. ರಾಜ್ಯದ ಎಲ್ಲೆಡೆ 14 ದಿನಗಳಲ್ಲಿ ಮಳೆಯು ವ್ಯಾಪಿಸಿತು. ಜೂನ್ ತಿಂಗಳಿನಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ.56 ಮಳೆ ಕೊರತೆ ಕಂಡುಬಂದಿತ್ತು. ಜುಲೈನಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29 ಹೆಚ್ಚು ಮಳೆಯಾಗಿದೆ. ಈ ಮಳೆಯು ಕೇವಲ ಒಂದು ವಾರ ಮಾತ್ರ ಕೇಂದ್ರೀಕೃತವಾಗಿತ್ತು. ಆಗಸ್ಟ್ ಮಾಹೆಯಲ್ಲಿ ವಾಡಿಕೆಗಿಂತ ಶೇ.73 ಮಳೆ ಕೊರತೆಯಾಗಿತ್ತು. ಕಳೆದ 125 ವರ್ಷಗಳಲ್ಲಿ ಇದು ಅತಿ ಕಡಿಮೆ ಮಳೆ ದಾಖಲಾಗಿದೆ.
ಬರ ಪೀಡಿತ 195 ತಾಲೂಕುಗಳ ಪಟ್ಟಿ ಈ ಕೆಳಕಂಡಂತಿದೆ :