Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Kempegowda Burial Site Development | ಮಾಗಡಿ : ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿಗೆ 7-8 ಎಕರೆ ಜಾಗ ಅಗತ್ಯ – ಜನರಿಗೆ ಪರ್ಯಾಯ ವ್ಯವಸ್ಥೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶುಕ್ರವಾರ ಮಾಗಡಿಯ ಕೆಂಪೇಗೌಡ ಕೋಟೆ, ಸಮಾಧಿ ಸ್ಥಳದ ಅಭಿವೃದ್ಧಿ ಕುರಿತ ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

by Bengaluru Wire Desk
October 6, 2023
in Bengaluru Focus, News Wire
Reading Time: 1 min read
0
ಮಾಗಡಿಯಲ್ಲಿರುವ ಕೆಂಪೇೇಗೌಡರ ಸಮಾಧಿ ಸ್ಥಳಕ್ಕೆ ಶುಕ್ರವಾರ ತೆರಳಿ ಪೂಜೆ ಮಾಡಿ, ಗೌರವ ಸಲ್ಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಸಚಿವ ಕೃಷ್ಣಭೈರೇಗೌಡ ಅವರು ಚಿತ್ರದಲ್ಲಿದ್ದಾರೆ.

ಮಾಗಡಿಯಲ್ಲಿರುವ ಕೆಂಪೇೇಗೌಡರ ಸಮಾಧಿ ಸ್ಥಳಕ್ಕೆ ಶುಕ್ರವಾರ ತೆರಳಿ ಪೂಜೆ ಮಾಡಿ, ಗೌರವ ಸಲ್ಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಸಚಿವ ಕೃಷ್ಣಭೈರೇಗೌಡ ಅವರು ಚಿತ್ರದಲ್ಲಿದ್ದಾರೆ.

ಮಾಗಡಿ, ಅ.06 www.bengaluruwire.com : “ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಈ ಗ್ರಾಮದ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಾಗಡಿಯ ಕೆಂಪೇಗೌಡ ಕೋಟೆ, ಸಮಾಧಿ ಸ್ಥಳದ ಅಭಿವೃದ್ಧಿ ಕುರಿತ ಪ್ರಾತ್ಯಕ್ಷಿಕೆ ವೀಕ್ಷಣೆ ನಂತರ ಶುಕ್ರವಾರ ಮಾತನಾಡಿದ ಶಿವಕುಮಾರ್, “ನಾವು ಈ ಹಿಂದೆ ಕೆಂಪೇಗೌಡ ಪ್ರಾಧಿಕಾರ ಸ್ಥಾಪನೆ ಮಾಡಿದ್ದೆವು. ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿ ಮಾಡಲು, ಈ ಊರಿನ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಮಾತು ನೀಡಿದ್ದೆವು. ಅದರಂತೆ ಸ್ಥಳಾಂತರಕ್ಕೆ ಜಮೀನಿನ ವ್ಯವಸ್ಥೆ ಆಗಿದೆ. ಇದಕ್ಕೆ ಎಲ್ಲರ ಸಹಕಾರ ಸಿಕ್ಕಿದೆ ಎಂದು ಕೇಳಿ ಸಂತೋಷವಾಗಿದೆ. ಪ್ರತಿಯೊಬ್ಬರಿಗೂ ದಾಖಲೆಗಳ ಸಮೇತ ನಿವೇಶನ ನೀಡಬೇಕು, ಅವರ ಬದುಕಿಗೆ ಅನುಕೂಲ ಆಗುವ ವ್ಯವಸ್ಥೆ ಕಲ್ಪಿಸಲು ಶಾಸಕ ಬಾಲಕೃಷ್ಣ ಅವರಿಗೆ ತಿಳಿಸಿದ್ದೇನೆ ಎಂದರು.

ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಶುಕ್ರವಾರ ಸಂಜೆ ಸಂಸದ ಡಿ.ಕೆ.ಶಿವಕುಮಾರ್ ಮತ್ತಿತರರೊಂದಿಗೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಈ ಭಾಗದ ಅಭಿವೃದ್ಧಿಗೆ ಅಕ್ಕಪಕ್ಕದ 7-8 ಎಕರೆ ಜಮೀನು ಬೇಕಿದ್ದು, ಇದಕ್ಕೆ ಬದಲಿ ಜಮೀನು ನೀಡಲಾಗುವುದು. ಇದನ್ನು ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾಗಿ ಮಾಡಬೇಕು. ಇದು ದೇಶದ ಆಸ್ತಿ. ಇದಕ್ಕಾಗಿ ನೀವು ಸಹಕಾರ ನೀಡಬೇಕು. ಕೆಂಪೇಗೌಡರ ಜನ್ಮಸ್ಥಳ ಹಾಗೂ ಐಕ್ಯಸ್ಥಳ ಇದಾಗಿದೆ. ಶ್ರೀ ಶಿವಕುಮಾರಸ್ವಾಮಿಗಳ ಜನ್ಮಸ್ಥಳ, ಶ್ರೀ ಬಾಲಗಂಗಾಧರನಾಥ ಸ್ವಾಮಿಗಳ ಜನ್ಮಸ್ಥಳ ಮಾಗಡಿ ಕ್ಷೇತ್ರದಲ್ಲಿರುವುದು ವಿಶೇಷ. ಈ ಕ್ಷೇತ್ರಗಳ ಅಭಿವೃದ್ಧಿಗೆ ನಿಮ್ಮ ಸಹಕಾರ ಇರಲಿ” ಎಂದು ತಿಳಿಸಿದರು.

ಇದಕ್ಕೂ ಮುನ್ನ ಕುದೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದ ಅವರು, ಲಿಂಗಾಯತರ ಅಸಮಾಧಾನದ ಬಗ್ಗೆ ಸಭೆ ನಡೆಯುತ್ತಿರುವ ಬಗ್ಗೆ ಕೇಳಿದಾಗ, “ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೆಲವು ಅಧಿಕಾರಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಲ್ಲಾ ಪಕ್ಷಗಳು ಅವರದೇ ಆದ ರಾಜಕಾರಣ ಮಾಡಲು ಹೊರಟಿವೆ. ರಾಜ್ಯದ ಎಲ್ಲಾ ಜಾತಿ, ಸಮುದಾಯದವರು ನಮಗೆ ಮತ ಹಾಕಿ ಜನರ ಸೇವೆ ಮಾಡಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಾವು ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ” ಎಂದು ಹೇಳಿದರು.

ಪಂಚಾಯ್ತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ವಿಚಾರವಾಗಿ ಸಿಎಂ ಸ್ಪಷ್ಟನೆ ಕುರಿತು ಕೇಳಿದಾಗ, “ಇದು ಆರ್ಥಿಕ ಇಲಾಖೆ ನಿರ್ಧಾರ. ಕಳೆದ 30 ವರ್ಷಗಳಿಂದ ಯಾವುದೇ ಹೊಸ ಅಂಗಡಿಗಳಿಗೆ ಅನುಮತಿ ನೀಡಿಲ್ಲ. ಅನೇಕರು ಪರವಾನಗಿಯನ್ನು 4-5 ಕೋಟಿಗೆ ಮಾರುತ್ತಿದ್ದಾರೆ. ಹೆಚ್ಚಿನ ಜನರಿಗೆ ಉದ್ಯೋಗ ಸೃಷ್ಟಿ ಮಾಡಬೇಕು. ಎಲ್ಲಿ ಮದ್ಯದ ಅಂಗಡಿ ತೆರೆಯಬೇಕು ಎಂದು ಚರ್ಚೆ ಮಾಡುತ್ತೇವೆ. ಹಾಗೆಂದು ಹಳ್ಳಿ, ಹಳ್ಳಿಗಳಲ್ಲಿ ಮಾಡುವುದಿಲ್ಲ. ಕುಡಿತ ತಪ್ಪಿಸಲು ಆಗುವುದಿಲ್ಲ. ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಎಲ್ಲರ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಮಾಡುತ್ತಾರೆ” ಎಂದು ಉಪಮುಖ್ಯಮಂತ್ರಿಗಳು ವಿವರಿಸಿದರು.

ಸಂಜೆಯ ಬಳಿಕ ಅಭಿವೃದ್ಧಿ ಮಾಡಲು ಉದ್ದೇಶಿಸಿರುವ ಮಾಗಡಿ ಕೋಟೆ ಜಾಗವನ್ನು ಡಿಸಿಎಂ ಡಿ ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್, ಶಾಸಕ ಎಚ್ ಸಿ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ರವಿ ಜೊತೆ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಅವರು ಮಾಗಡಿಯ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಿಡಿಎ ಆಯುಕ್ತ ಜಯರಾಮ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Human Interest News | ಅನಾರೋಗ್ಯದ ನಡುವೆ ಹೆಣ್ಣುಮಗು ಅಪ್ಪಿ ಮುದ್ದಾಡಿದ ತಾಯಿಯ ಚಿಂತಾಜನಕ ವಿಡಿಯೋ ವೈರಲ್ : ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಸಚಿವ ಜಮೀರ್ ಖಾನ್ ನೆರವು

Next Post

KSRTC Pallakki Bus Service | ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿಯಿಂದ “ಪಲ್ಲಕ್ಕಿ” ಉತ್ಸವ ಆರಂಭ

Next Post

KSRTC Pallakki Bus Service | ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿಯಿಂದ "ಪಲ್ಲಕ್ಕಿ" ಉತ್ಸವ ಆರಂಭ

AKBMS Vipra Vanijya | ಬೆಂಗಳೂರಿನಲ್ಲಿ ನಾಳೆ ರಾಜ್ಯಮಟ್ಟದ ವಿಪ್ರ ವ್ಯಾಪಾರ ಮತ್ತು ವಾಣಿಜ್ಯೋದ್ಯಮಿಗಳ ಸಮಾವೇಶ

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group