Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Namma Metro News | ಇಂದಿನಿಂದ ಚಲ್ಲಘಟ್ಟದಿಂದ ವೈಟ್‌ಫೀಲ್ಡ್‌ವರೆಗೆ ನೇರಳೆ ಮಾರ್ಗದಲ್ಲಿ ಸಂಪೂರ್ಣ ಮೆಟ್ರೋ ಸಂಚಾರ ಆರಂಭ : ಟಿಕೆಟ್ ದರ, ಸಮಯದ ಮಾಹಿತಿ ಇಲ್ಲಿದೆ

ನೇರಳೆ ಸಂಪೂರ್ಣ ಮಾರ್ಗವು ಈಗ ಒಟ್ಟು 43.49 ಕಿ.ಮೀ ಉದ್ದವಿದ್ದು, 37 ನಿಲ್ದಾಣಗಳನ್ನು ಒಳಗೊಂಡಿದೆ.

by Bengaluru Wire Desk
October 9, 2023
in Bengaluru Focus, Public interest
Reading Time: 1 min read
0
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.9 www.bengaluruwire.com : ಅಂತೂ ಇಂತೂ ನಮ್ಮ ಮೆಟ್ರೋದ ನೇರಳೆ ಮಾರ್ಗ (ಪೂರ್ವ – ಪಶ್ಚಿಮ ಮಾರ್ಗ) ಸಂಪೂರ್ಣ ರೈಲು ಕಾರ್ಯಾಚರಣೆ ಇಂದು ಬೆಳಗ್ಗೆ 5 ಗಂಟೆಯಿಂದ ಆರಂಭವಾಗಿದೆ. 

ಇದರಿಂದಾಗಿ ಚಲ್ಲಘಟ್ಟ (Challagatta)ದಿಂದ ವೈಟ್‌ಫೀಲ್ಡ್‌ (Whitefield)ವರೆಗೆ ನೇರಳೆ ಮಾರ್ಗದಲ್ಲಿ ಸಂಪೂರ್ಣ ಮೆಟ್ರೋ ಸಂಚಾರ ಆರಂಭವಾಗಿದ್ದು, ಮೆಟ್ರೋ ಪ್ರಯಾಣಿಕರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ನೇರಳೆ ಸಂಪೂರ್ಣ ಮಾರ್ಗವು ಈಗ ಒಟ್ಟು 43.49 ಕಿ.ಮೀ ಉದ್ದವಿದ್ದು, 37 ನಿಲ್ದಾಣಗಳನ್ನು ಒಳಗೊಂಡಿದೆ.  ಒಂದು ತುದಿಯಿಂದ ಮತ್ತೊಂದು ತುದಿಗೆ ಸಂಪರ್ಕಿಸಲು ಮೆಟ್ರೋ ನಿಗಮ 60 ರೂ. ಟಿಕೆಟ್ ದರವನ್ನು ನಿಗದಿಪಡಿಸಿದೆ.

ನೇರಳೆ ಮಾರ್ಗ ಸಂಪೂರ್ಣವಾಗಿ ತೆರೆದಿರುವುದರಿಂದ ಐಟಿ ಉದ್ಯೋಗಿಗಳು, ಸಾರ್ವಜನಿಕರಿಗೆ ಭಾರಿ ಅನುಕೂಲವಾಗಲಿದೆ. ಈ ಮೂಲಕ ನಮ್ಮ ಮೆಟ್ರೋದ ಅತಿ ಉದ್ದದ ಮಾರ್ಗ ಎನ್ನುವ ಖ್ಯಾತಿ ಈಗ ನೇರಳೆ ಮಾರ್ಗದ ಪಾಲಾಗಿದೆ. 43.49 ಕಿಮೀ ದೂರವನ್ನು ಕ್ರಮಿಸಲು ಸುಮಾರು 76 ನಿಮಿಷಗಳ ಸಮಯ ಬೇಕು ಎಂದು ಅಂದಾಜಿಸಲಾಗಿದೆ. ಕೆಆರ್ ಪುರ – ಬೈಯಪ್ಪನಹಳ್ಳಿ ನಡುವಿನ‌ ಮೆಟ್ರೋ ಕಾಮಗಾರಿಗೆ 363.48 ಕೋಟಿ ರೂ. ಹಾಗೂ ಕೆಂಗೇರಿ – ಚಲ್ಲಘಟ್ಟ ನಡುವಿನ ಮಾರ್ಗಕ್ಕೆ 167.97 ಕೋಟಿ ರೂ. ವೆಚ್ಚ ಮಾಡಲಾಗಿದೆ.

ಚಲ್ಲಘಟ್ಟ – ಕೆಂಗೇರಿ (2.05 ಕಿ.ಮೀ), ಕೆಆರ್ ಪುರ – ಬೈಯಪ್ಪನಹಳ್ಳಿ (2.10 ಕಿ.ಮೀ) ನಡುವಿನ ನೇರಳೆ ಮಾರ್ಗದಲ್ಲಿ ಸುರಕ್ಷತಾ ತಪಾಸಣಾ ಕಾರ್ಯ ನಡೆಸಿದ್ದ ಸಿಎಂಆರ್ ಎಸ್ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಆದರೆ ಅಧಿಕೃತ ಸಂಚಾರ ಆರಂಭವಾಗಿರಲಿಲ್ಲ. ಆ ಬಳಿಕ ಬಿಎಂಆರ್ ಸಿಎಲ್ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಲು ಪತ್ರ ಬರೆದಿತ್ತು. ಅಕ್ಟೋಬರ್ 7ರಂದು ಈ ಮಾರ್ಗ ಉದ್ಘಾಟನೆ ಆಗುತ್ತೆ ಎನ್ನಲಾಗಿತ್ತಾದರೂ ನಂತರ ದಿನಾಂಕ ನಿಗದಿಯಾಗಿಲ್ಲ ಎಂದು ಬಿಎಂಆರ್ ಸಿಎಲ್ ಸ್ಪಷ್ಟನೆ ನೀಡಿತ್ತು.

ಇದರ ಬೆನ್ನಲ್ಲೇ ಐಟಿ ಉದ್ಯೋಗಿಗಳು, ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಗಳ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜಕೀಯ ಲಾಭಕ್ಕೆ ಜನರಿಗೆ ತೊಂದರೆ ಕೊಡದಂತೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು ಯಾವ ಉದ್ಘಾಟನಾ ಸಮಾರಂಭವೂ ಇಲ್ಲದೆ ರೈಲು ಸಂಚಾರ ಆರಂಭಿಸಲು ಹೇಳಿದೆ.

ಪೂರ್ವ – ಪಶ್ಚಿಮ ಮಾರ್ಗ ಸಂಪೂರ್ಣವಾಗಿ ಕಾರ್ಯನಿರ್ವಹಣೆ ಅ.9ರಿಂದ ಪ್ರಾರಂಭವಾಗಿರುವುದರಿಂದ ಈಗ ನಮ್ಮ ಮೆಟ್ರೋ ಒಟ್ಟು 73.81 ಕಿಮೀ ಮೆಟ್ರೋ ಮಾರ್ಗವನ್ನು ಹೊಂದಿದಂತಾಗಿದೆ (ಹಸಿರು ಮತ್ತು ನೇರಳೆ ಮಾರ್ಗ ಸೇರಿಸಿ). ಒಟ್ಟು 66 ಮೆಟ್ರೋ ನಿಲ್ದಾಣಗಳು ಕಾರ್ಯ ನಿರ್ವಹಿಸುತ್ತಿವೆ.

ಹೊಸ ಮಾರ್ಗದ ಕಾರ್ಯಾಚರಣೆಯ ಸಮಯ ಹೀಗಿದೆ :

* ವೈಟ್‌ಫೀಲ್ಡ್ ನಿಂದ ಪಟ್ಟಂದೂರು ಅಗ್ರಹಾರ ಮಾರ್ಗದಲ್ಲಿ ಪ್ರತಿ 10 ನಿಮಿಷಗಳಿಗೆ ಒಂದು ರೈಲು ಸೇವೆ ಇರಲಿದೆ.

* ಪಟ್ಟಂದೂರು ಅಗ್ರಹಾರದಿಂದ ಮೈಸೂರು ರಸ್ತೆ ನಿಲ್ದಾಣಕ್ಕೆ ಪ್ರತಿ 5 ನಿಮಿಷಕ್ಕೆ ಒಂದು ಮೆಟ್ರೋ ರೈಲು ಸಂಚರಿಸಲಿದೆ.

* ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ – ಎಂಜಿ ರಸ್ತೆ ಮಾರ್ಗದಲ್ಲಿ ದಟ್ಟಣೆಯ ಸಮಯದಲ್ಲಿ ಪ್ರತಿ 3 ನಿಮಿಷಕ್ಕೆ ಒಂದು ರೈಲು ಸಂಚಾರ ಇರಲಿದೆ.

* ಮೈಸೂರು ರಸ್ತೆಯಿಂದ – ಚಲ್ಲಘಟ್ಟ ಮಾರ್ಗದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ.

* ಕಾಡುಗೋಡಿ (ವೈಟ್‌ಫೀಲ್ಡ್) ನಿಲ್ದಾಣದಿಂದ ಕೊನೆಯ ಮೆಟ್ರೊ ರೈಲು ರಾತ್ರಿ 10.45ಕ್ಕೆ ಹೊರಡಲಿದೆ. ಬೆಳಗ್ಗೆ 5 ಗಂಟೆಗೆ ಮೊದಲ ರೈಲು ಸಂಚಾರ ಆರಂಭವಾಗಲಿದೆ.

ಕೊನೆಯ ರೈಲು ಹೊರಡುವ ಸಮಯ ಹೀಗಿದೆ :

ಕೊನೆಯ ರೈಲು ವೈಟ್ ಫೀಲ್ಡ್ (ಕಾಡುಗೋಡಿ) ನಿಂದ ರಾತ್ರಿ 10.45ಕ್ಕೆ ಹಾಗೂ ಉಳಿದ ಟರ್ಮಿನಲ್‌ಗಳಿಂದ ರಾತ್ರಿ 11.05ಕ್ಕೆ ಹೊರಡುತ್ತದೆ. ಎಲ್ಲಾ ಟರ್ಮಿನಲ್ ಗಳಿಂದ ಮೆಟ್ರೋ ರೈಲು ಸೇವೆ ಎಂದಿನಂತೆ ಬೆಳಗ್ಗೆ 5 ರಿಂದ ಆರಂಭವಾಗುತ್ತದೆ.

WhatsApp Join our WhatsApp Channel
Previous Post

BW EXCLUSIVE | BIG NEWS | ಕ್ರೈಸ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಕೆ – 200 ಕೋಟಿ ರೂ. ಹಗರಣ!!? ; ಕಳಪೆ ಬಟ್ಟೆ ಪೂರೈಕೆಗೆ ಕಾರ್ಟೆಲ್ ದುಷ್ಟಕೂಟ ಸೃಷ್ಟಿ

Next Post

Brand Bengaluru | “ನನ್ನ ಸ್ವತ್ತು”, ಸ್ವಯಂ ಚಾಲಿತ ನಕ್ಷೆ ಅನುಮೋದನೆ ಯೋಜನೆ ಜಾರಿ : ಡಿಸಿಎಂ ಡಿ.ಕೆ. ಶಿವಕುಮಾರ್

Next Post

Brand Bengaluru | "ನನ್ನ ಸ್ವತ್ತು", ಸ್ವಯಂ ಚಾಲಿತ ನಕ್ಷೆ ಅನುಮೋದನೆ ಯೋಜನೆ ಜಾರಿ : ಡಿಸಿಎಂ ಡಿ.ಕೆ. ಶಿವಕುಮಾರ್

Crime News | ಬೆಂಗಳೂರು : ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಬಸ್ ಶೆಲ್ಟರ್ ಕಳ್ಳತನ ಪ್ರಕರಣಕ್ಕೆ ಹೊಸ ಟ್ವಿಸ್ಟ್ ; ಅಸಲಿಗೆ ನಡೆದದ್ದೇನು?

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group