ಬೆಂಗಳೂರು, ಅ.18 www.bengaluruwire.com : ನಗರದಲ್ಲಿ ಬುಧವಾರ ಭಾರೀ ಅಗ್ನಿ ಅವಘಡವೊಂದು ನಡೆದಿದೆ. ಕೋರಮಂಗಲದ ಮಡ್‌ಪೈಪ್ ಕೆಫೆಯಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡು ಕಟ್ಟಡದೊಳಗೆ ಸಿಲುಕಿದ್ದ ವ್ಯಕ್ತಿ ಮೇಲಿನ ಮಹಡಿಯಿಂದ ಜಿಗಿದಿದ್ದಾನೆ. ಈ ರೀತಿ ಕಟ್ಟಡದಿಂದ ಜಿಗಿದ ವ್ಯಕ್ತಿ ಗಾಯಗೊಂಡಿದ್ದು, ಅವರನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋರಮಂಗಲ ಸಮೀಪದ ಕಿರಾ ಲೇಔಟ್‌ನಲ್ಲಿರುವ ಕೆಡಿಪಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಹೀಗೆ ಕಾಣಿಸಿಕೊಂಡ ಬೆಂಕಿ ಸ್ವಲ್ಪ ಸಮಯದಲ್ಲೇ ಇಡೀ ಕಟ್ಟಡದಾದ್ಯಂತ ಕಾಳ್ಗಿಚ್ಚಿನಂತೆ ಹರಡಿತು. ಬೆಂಕಿ ನಂದಿಸಲು ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ನಿರತರಾಗಿದ್ದಾರೆ. ಸಿಲಿಂಡರ್ ಬ್ಲಾಸ್ಟ್ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬಿಲ್ಡಿಂಗ್‌ನ ಮೇಲೆ ಇರುವ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.