ಬ್ರೆಜಿಲ್, ನ.21 www.bengaluruwire.com : ವಿಶ್ವದ ಅತಿದೊಡ್ಡ ಶ್ರೀಮಂತ ಹಾಗೂ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಆಗಾಗ ಒಂದಿಲ್ಲೊಂದು ವಿಷಯದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಈ ಬಾರಿ ಬಿಲ್ ಗೇಟ್ಸ್ ಬ್ರೆಜಿಲ್ನ ಒಳಚರಂಡಿಗೆ ಇಳಿದು ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.
ಇದಕ್ಕೆ ಕಾರಣ ಏನಪ್ಪಾ ಅಂದರೆ, ವಿಶ್ವ ಶೌಚಾಲಯ ದಿನದ ಅಂಗವಾಗಿ ಇಲ್ಲಿನ ಒಳಚರಂಡಿಗೆ ಇಳಿದು, ತ್ಯಾಜ್ಯ ನೀರಿನ ಸಂಸ್ಕರಣೆಯ ಕುರಿತಂತೆ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಈ ಬಗ್ಗೆ ವಿಡಿಯೊವೊಂದನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ಈ ವರ್ಷ ವಿಶ್ವ ಶೌಚಾಲಯ ದಿನದ ಪ್ರಯುಕ್ತ ಬ್ರೆಜಿಲ್ನ ಒಳಚರಂಡಿಗೆ ಇಳಿದು ಅಲ್ಲಿನ ವ್ಯವಸ್ಥೆಯ ನಿಗೂಢ ಇತಿಹಾಸವನ್ನು ಪರಿಶೋಧಿಸಲು ಪ್ರಯತ್ನ ಮಾಡಿದೆ. ಜಾಗತಿಕ ಆರೋಗ್ಯದಲ್ಲಿ ತ್ಯಾಜ್ಯನೀರಿನ ನಿರ್ವಹಣೆಯ ಪಾತ್ರವನ್ನು ಅನ್ವೇಷಿಸಲು ಈ ವ್ಯವಸ್ಥೆಯಿಂದ ಸಾಧ್ಯವಾಗಿದೆ’ ಎಂದು ಬಿಲ್ ಗೇಟ್ಸ್ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ತಿಳಿಸಿದ್ದಾರೆ.
‘ಬ್ರೆಜಿಲ್ನ ಒಳಚರಂಡಿ ವ್ಯವಸ್ಥೆಯ ಕುರಿತಂತೆ ಅನೇಕ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗಿದೆ. ನಗರದ ತ್ಯಾಜ್ಯ ನೀರಿನ ಸಂಸ್ಕರಣೆ ಇತಿಹಾಸದ ಬಗ್ಗೆ ತಿಳಿಯಲು ಸಾಧ್ಯವಾಯ್ತು. 18ನೇ ಶತಮಾನದಲ್ಲಿ ಚರಂಡಿ ನೀರನ್ನು ನೇರವಾಗಿ ಸೆನ್ನೆ ನದಿಗೆ ಹರಿಸಲಾಗಿತ್ತು. ಇದು ಕಾಲರಾದಂತಹ ಭೀಕರ ಸಾಂಕ್ರಮಿಕ ರೋಗ ಹರಡಲು ಕಾರಣವಾಗಿತ್ತು. ಇಂದು ಒಳಚರಂಡಿ ಮತ್ತು ಸಂಸ್ಕರಣಾ ಘಟಕಗಳು ನಗರದ ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿದೆ’ ಎಂದು ವಿಡಿಯೊದಲ್ಲಿ ಹೇಳಿದ್ದಾರೆ.
ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 19ರಂದು ವಿಶ್ವ ಶೌಚಾಲಯ ದಿನ ಆಚರಿಸಲಾಗುತ್ತದೆ. ಇದರ ಅಂಗವಾಗಿ ವಿಶ್ವದ ಆಗರ್ಭ ಶ್ರೀಮಂತ ಬಿಲ್ ಗೇಟ್ಸ್, ಒಳಚರಂಡಿ ಒಳಗೆ ಇಳಿದು ಸ್ವಚ್ಛತೆಯ ಅಗತ್ಯತೆ ಕುರಿತಂತೆ ಈ ಕಾರ್ಯ ಕೈಗೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.