Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಕಚೇರಿ ಹಾಜರಾತಿ ಕಳ್ಳಾಟಕ್ಕೆ ಬ್ರೇಕ್ : ಬಿಬಿಎಂಪಿಯಿಂದ‌ ಮೊಬೈಲ್ ಆಪ್ ಆಧಾರಿತ ಹಾಜರಾತಿ ವ್ಯವಸ್ಥೆ ಕಡ್ಡಾಯ

ಹಾಜರಾತಿ, ರಜೆ, ಸ್ಥಳ ಪರಿಶೀಲನೆ ಎಲ್ಲದಕ್ಕೂ ಮೊಬೈಲ್ ಆಪ್ ಆಧಾರಿತ ಬಯೋಮೆಟ್ರಿಕ್ ಹಾಜರಿ ವ್ಯವಸ್ಥೆ ಅಳವಡಿಕೆ.

by Bengaluru Wire Desk
November 24, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ನ.24 www.bengaluruwire.com : ಸಮಯಕ್ಕೆ ಸರಿಯಾಗಿ ಬಿಬಿಎಂಪಿ ಕಚೇರಿಗಳಿಗೆ ಅಧಿಕಾರಿ ಸಿಬ್ಬಂದಿ ಬರಲ್ಲ. ಇದರ ಒಟ್ಟಾರೆ ಪರಿಣಾಮ ಪಾಲಿಕೆ ಆಡಳಿತದ ಮೇಲಾಗುತ್ತಿದೆ, ನಾಗರೀಕರಿಗೂ ಅಗತ್ಯ ಸೌಕರ್ಯ ಕಲ್ಪಿಸಲು ತೊಂದರೆಯಾಗುತ್ತಿದೆ. ಇದಕ್ಕಾಗಿ ಪಾಲಿಕೆಯು ಮೊಬೈಲ್ ಆಪ್ ಆಧಾರಿತ ಬಯೋಮೆಟ್ರಿಕ್ ಹಾಜರಿ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

 ಮೊಬೈಲ್ಆ್ಯಪ್ ನಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

ಬಿಬಿಎಂಪಿಯ ಕೇಂದ್ರ ಕಚೇರಿ ಸೇರಿದಂತೆ ಎಲ್ಲಾ ಎಂಟು ವಲಯಗಳಲ್ಲಿ ಸಿಬ್ಬಂದಿಯ ಹಾಜರಾತಿಯನ್ನು ಮೊಬೈಲ್ ಆ್ಯಪ್ ಬಯೋಮೆಟ್ರಿಕ್ ಮೂಲದ ದಾಖಲಿಸಲು ಸೂಚನೆ ನೀಡಲಾಗಿದೆ. ಪಾಲಿಕೆಯ ಕೇಂದ್ರ ಕಛೇರಿ ಹಾಗೂ ಎಲ್ಲಾ ವಲಯಗಳ ಅಧಿಕಾರಿ ಮತ್ತು ಸಿಬ್ಬಂದಿ ಲಾಗ್ ಸೇಫ್ (Logsafe) ಸಂಸ್ಥೆಯವರು ಅಭಿವೃದ್ಧಿ ಪಡಿಸಿರುವ ಮೊಬೈಲ್ ಆಪ್‌ನಲ್ಲಿ ಲಾಗಿನ್ ಮಾಡಿಕೊಳ್ಳುವಂತೆ ನ.21ರಂದು ತುಷಾರ್ ಗಿರಿನಾಥ್ ಸುತ್ತೋಲೆ ಹೊರಡಿಸಿದ್ದಾರೆ.

ಲಾಗ್ ಸೇಫ್ ಮೊಬೈಲ್ ಆಪ್ ಚಿತ್ರ.

ಕೆಲವು ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಕಚೇರಿಗೆ ಆಗಮಿಸದ ಹಿನ್ನೆಲೆಯಲ್ಲಿ ಮೊಬೈಲ್ ಆ್ಯಪ್ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ಅಧಿಕಾರಿ ಸಿಬ್ಬಂದಿ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಂಡು ಲಾಗಿನ್ ಆಗಿ ಬೆಳಗ್ಗೆ 10 ರೊಳಗೆ ಹಾಜರಾತಿ ನಮೂದಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈಗಾಗಲೇ ಲಾಗಿನ್ ಐಡಿಗಳನ್ನು ವಲಯ ಆಯುಕ್ತರುಗಳಿಗೆ ಹಸ್ತಾಂತರಿಸಿದ್ದು, ವಲಯದಲ್ಲಿ ಸ್ಥಳ ಭೇಟಿ, ಪರಿಶೀಲನೆಯ ಲಾಗಿನ್ ಮತ್ತು ಲಾಗ್ ಔಟ್ ಸಮಯವನ್ನು ವಲಯ ಆಯುಕ್ತರು ನಿರ್ದರಿಸಿ ಮೊಬೈಲ್ ಆಪ್ ಮುಖಾಂತರ ಹಾಜರಾತಿಯನ್ನು ಪರಿಗಣಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದರಿಂದಾಗಿ ಪರಿಶೀಲನೆ, ಫಿಲ್ಡ್ ವಿಸಿಟ್ ಹೆಸರಲ್ಲಿ ತಮ್ಮ ವೈಯುಕ್ತಿಕ ಕೆಲಸ ಕಾರ್ಯಗಳಲ್ಲಿ ತೊಡಗುವ ಅಧಿಕಾರಿ ಮತ್ತು ಸಿಬ್ಬಂದಿಯ ಆಟಕ್ಕೆ ಮುಖ್ಯ ಆಯುಕ್ತರು ಬ್ರೇಕ್ ಹಾಕಿದ್ದಾರೆ.

ಕಛೇರಿ ಅವಧಿಯ ಮುಕ್ತಾಯ ಸಂಜೆ 5.30ರ ನಂತರ ಮೊಬೈಲ್ ಆಪ್‌ನಲ್ಲಿ ಲಾಗ್ ಔಟ್ ಮಾಡಿಕೊಂಡು ಹಾಜರಾತಿಯನ್ನು ದೃಢೀಕರಿಸಬೇಕು. ಆದರೆ ಕಛೇರಿ ಅವಧಿ ಮುಕ್ತಾಯಕ್ಕೆ ಮುಂಚಿತವಾಗಿ ಮೊಬೈಲ್ ಆಪ್‌ನಲ್ಲಿ ಲಾಗ್ ಔಟ್ ಮಾಡಿರುವುದನ್ನು ಪರಿಗಣಿಸಬಾರದು ಎಂದು ಅವರು ಸಂಬಂಧಿಸಿದ ಸಂಬಳ ನೀಡುವ ಅಧಿಕಾರಿ, ಕಚೇರಿ ಮುಖ್ಯಸ್ಥರಿಗೆ ಸುತ್ತೋಲೆಯ ಮೂಲಕ ವಿವರಿಸಿದ್ದಾರೆ.

ಮೊಬೈಲ್ ಆಪ್ ಬಯೋಮೇಟ್ರಿಕ್ ಮುಖಾಂತರ ಹಾಜರಾತಿ ಸಲ್ಲಿಸುತ್ತಿರುವ ಬಗ್ಗೆ ದೃಢೀಕರಿಸಿಕೊಂಡು ವೇತನ ಪಾವತಿ ಇಲಾಖೆ ಮುಖ್ಯಸ್ಥರಿಗೆ, ವಲಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಹಾಗೂ ಸಾಂದರ್ಭಿಕ ರಜೆಗೂ ಮೊಬೈಲ್ ಆಪ್‌ನಲ್ಲಿ ಮುಖಾಂತರ ದೃಢೀಕರಿಸಿ ರಜೆಯನ್ನು ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.

ಈ ಹಿಂದೆ ಕೇಂದ್ರ ಕಚೇರಿ ಹಾಗೂ ಕೆಲವೊಂದು ವಲಯ ಕಚೇರಿಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಯಂತ್ರಗಳನ್ನು ಅಳವಡಿಸಿ ಆ ಮೂಲಕ ಹಾಜರಾತಿ ವ್ಯವಸ್ಥೆ ತರಲಾಗಿತ್ತು. ಕೆಲವು ಬಾರಿ ಕಚೇರಿ ನೌಕರರೇ ಬಯೋಮೆಟ್ರಿಕ್ ಯಂತ್ರದ ಬೆರಳಚ್ಚು ಇಡುವ ಸೆನ್ಸಾರ್ ಭಾಗವನ್ನು ಹಾಳುಗೆಡವಿ, ಆ ಯಂತ್ರ ಕಾರ್ಯನಿರ್ವಹಿಸದಂತೆ ಮಾಡುತ್ತಿದ್ದರು. ಹೀಗೆ ಹಾಳಾದ ಯಂತ್ರ ಸರಿಪಡಿಸಲು ಹಾಗೂ ಯಂತ್ರ ನಿರ್ವಹಣೆಗೆ ಸೂಕ್ತ ಆರ್ಥಿಕ ಸಂಪನ್ಮೂಲ ನಿಗದಿ ಮಾಡದ ಕಾರಣ ಆ ವ್ಯವಸ್ಥೆಯು ಅರ್ಧಕ್ಕೆ ನಿಂತು ಹೋಗಿತ್ತು. ಹೀಗಾಗಿ ತಮಗಿಷ್ಟ ಬಂದಂತೆ ಅಧಿಕಾರಿ, ಸಿಬ್ಬಂದಿ ಕಚೇರಿಗೆ ಬಂದು ಹೋಗುತ್ತಿದ್ದರು. 

ಹೊಸ ಮೊಬೈಲ್ ಆಪ್ ಬಯೋಮೆಟ್ರಿಕ್ ಆಧಾರಿತ ಹಾಜರಾತಿ ವ್ಯವಸ್ಥೆಯಲ್ಲಿ ಇನ್ಯಾವ ಶಾರ್ಟ್ ಕಟ್ ಅನ್ನು ಪಾಲಿಕೆ ಹುಡುಕುತ್ತಾರೋ ಕಾದು ನೋಡಬೇಕಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Karnataka RDPR News | 11 ಸಾವಿರ ಗ್ರಾಮ ಪಂಚಾಯಿತಿ ನೌಕರರ ಸೇವಾ ಭದ್ರತೆಗೆ ಕ್ರಮ : ಪ್ರಿಯಾಂಕ್‌ ಖರ್ಗೆ 

Next Post

PM Modi Flies In Tejas Fighter Jet | ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ನರೇಂದ್ರ ಮೋದಿ!!

Next Post
ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ

PM Modi Flies In Tejas Fighter Jet | ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ನರೇಂದ್ರ ಮೋದಿ!!

ದೇಶದ ವಿಶೇಷ ಕಾರ್ಯಾಚರಣೆ ಪಡೆಯೊಂದರ ಸಾಂದರ್ಭಿಕ ಚಿತ್ರ.

India Top 7 Special Forces | ದೇಶದ ಭದ್ರತಾ ಪಡೆಗಳಲ್ಲಿ ಈ 7ಖತರ್ ನಾಕ್ ವಿಶೇಷ ಪಡೆಗಳ ಕಾರ್ಯಾಚರಣೆ ಹೇಗಿರುತ್ತೆ? ಇಲ್ಲಿದೆ ಕುತೂಹಕಾರಿ ಸುದ್ದಿ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d