Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP IN NEPAL | ಬಿಬಿಎಂಪಿ ನೌಕರರ ಸಂಘದ ಕಮಾಲ್ ; ನೇಪಾಳದಲ್ಲಿ ಮೊಳಗಿತು ಕನ್ನಡ ಡಿಂಡಿಮ…!!

ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಅದ್ದೂರಿ ಅಚರಣೆ | ‌ಪ್ರಜಾಪ್ರಭುತ್ವದ ಜನರ ಆಳ್ವಿಕೆಗೆ ಮೈಸೂರು ಸಂಸ್ಥಾನ ಸಹಕಾರ ನೀಡಿತ್ತು - ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ಗತಕಾಲ ವೈಭವದ ಮೆಲುಕು

by Bengaluru Wire Desk
November 26, 2023
in Bengaluru Focus, Public interest
Reading Time: 1 min read
0

ಕಠ್ಮಂಡು, ನ.26 www.bengaluruwire.com : ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ನೇಪಾಳದ ಪಶುಪತಿನಾಥ ದೇವಾಲಯ ಸನ್ನಿಧಿಯಲ್ಲಿರುವ ಆನಂದ ಪಶುಪತಿ ದೇವಾಲಯ ಅವರಣದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರಿನ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ನೆರವೇರಿಸಿದರು. ನಂತರ ಮಾತನಾಡಿದ ಅವರು, ಕರ್ನಾಟಕ ಏಕೀಕರಣದ ರೂವಾರಿ ಕನ್ನಡ ಕುಲಪುರೋಹಿತ ಅಲೂರು ವೆಂಕಟರಾಯರು ಅವರು ಕರ್ನಾಟಕದ ವೈಭವ ನಾಡಿನ ಇತಿಹಾಸ ದಾಖಲು ಮಾಡಿದ್ದಾರೆ. ನಾಡಿನ ಕನ್ನಡ ಭಾಷೆ, ಸಂಸ್ಕೃತಿ ಉಳಿಸಲು 1915ರಲ್ಲಿ ನಾಲ್ವಡಿ ಕೃಷ್ಣರಾಜ್ ಒಡೆಯರ್ ಮತ್ತು ದಿವಾನರಾದ ಹೆಚ್.ವಿ.ನಂಜುಡಯ್ಯರವರು ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿದರು.

ಪಶುಪತಿನಾಥ ದೇವಾಲಯದ ವಿಹಂಗಮ ನೋಟ.

ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಾದ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಸೌತ್ ಕೆನರಾ, ನಾರ್ತ್ ಕೆನರಾ, ಕೊಡಗು ಪ್ರದೇಶವನ್ನು ಸೇರಿಸಲು ಬ್ರಿಟಿಷರು ಒಪ್ಪಲಿಲ್ಲ. ಸ್ವಾತಂತ್ರ್ಯದ ನಂತರ ಮಹಾರಾಜರ ಆಳ್ವಿಕೆ ಕೊನೆಗೊಂಡಿತು. ಜನರ ಆಳ್ವಿಕೆ ಮಾಡಲು ಸಿದ್ದರಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಜನರ ಆಳ್ವಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮೈಸೂರು ಸಂಸ್ಥಾನದ ಮಹಾರಾಜರು ತಿಳಿಸಿದರು ಎಂದು ಯದುವೀರ್ ಅವರು ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಬೆಳೆದು ಬಂದ ಬಗೆಯನ್ನು ಸ್ಮರಿಸಿದರು.

ಕಠ್ಮಂಡುವಿನಲ್ಲಿ ನಡೆದ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ

ಶಂಕರಚಾರ್ಯರು, ರಾಮಾನುಜಚಾರ್ಯ, ವೇದಾಂತ ದೇಶಿಕಚಾರ್ಯ, ಕ್ರಾಂತಿಯೋಗಿ ಶ್ರೀ ಬಸವೇಶ್ವರರು ನಾಡಿನ ಹಲವಾರು ವಿದ್ವಾಂಸರು ಕನ್ನಡ ಭಾಷೆಯಲ್ಲಿ ಭೋಧನೆ, ಪರಂಪರೆಯನ್ನು ಕನ್ನಡ ನಾಡಿನ ಮಣ್ಣಿನಲ್ಲಿ ಮುಂದುವರೆಸುತ್ತಾರೆ. ಕರ್ನಾಟಕ ಎಂಬ ನಾಮಕರಣವಾಗಿ 50 ವರ್ಷವಾಗಿದೆ. ಭಾರತೀಯ ಎಂದರೆ ಕನ್ನಡಿಗ ಭಾರತೀಯ ಪರಂಪರೆ ಮತ್ತು ಕನ್ನಡ ಭಾಷೆ ಉಳಿಸಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ಹೇಳಿದರು.

ಐ.ಪಿ.ಎಸ್. ಅಧಿಕಾರಿ ರೂಪಾ ಡಿ. ಮೌದ್ಗೀಲ್ ರವರು, ಕನ್ನಡ ಭಾಷೆಗೆ 2000 ವರ್ಷದ ಇತಿಹಾಸವಿದೆ. ದೂರದ ಕನ್ನಡ ನಾಡಿನಿಂದ ನೇಪಾಳದಲ್ಲಿ ಅಂತರರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಮಾಡುತ್ತಿರುವುದು ಸಾಹಸದ ಕೆಲಸ. ಕನ್ನಡ ಭಾಷೆ ಉಳಿಸಿ, ಬೆಳಸಬೇಕಾದರೆ ಪ್ರತಿನಿತ್ಯ ಕನ್ನಡ ಬಳಸುವ ಅಂದೋಲನವಾಗಬೇಕು ಎಂದು ಕರೆ ನೀಡಿದರು.

ಬಿಬಿಎಂಪಿ ಆಡಳಿತ ವ್ಯವಹಾರ ಸಂಪೂರ್ಣ ಕನ್ನಡ ಭಾಷೆಯಲ್ಲಿ :

ಉಪ ಆಯುಕ್ತರಾದ ಡಾ.ಮಂಜುನಾಥ್ ಸ್ವಾಮಿ ಅವರು ಮಾತನಾಡಿ, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಆಡಳಿತ ವ್ಯವಹಾರ ಸಂಪೂರ್ಣ ಕನ್ನಡ ಭಾಷೆಯಲ್ಲಿ ನಡೆಯುತ್ತಿದೆ. ಕನ್ನಡ ಭಾಷೆ ಸರಳ, ಸುಂದರ. ಇದು  ಉಳಿಯಬೇಕು ಎಂದರೆ ಪ್ರತಿಯೊಬ್ಬರು ಕನ್ನಡ ಬಳಸಬೇಕು ಎಂದು ಹೇಳಿದರು.

ಆನಂದ ಪಶುಪತಿ ದೇವಾಲಯದ ಆವರಣ ಪಾಲಿಕೆ ಸಂಘದ ಸದಸ್ಯರು ಹಾಗೂ ಕನ್ನಡಿಗರಿಂದ ತುಂಬಿಹೋಗಿತ್ತು.

ಕನ್ನಡಿಗರು ವಿಶಾಲ ಹೃದಯವುಳ್ಳವರು :

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ರಾಜ್ಯದ ಹೊರಗೆ ಕಾಶಿಯಲ್ಲಿ ರಾಜ್ಯೋತ್ಸವ ಆಚರಣೆ ನಡೆಸಿದೆ. ಇದೀಗ ಹೊರರಾಷ್ಟ್ರವಾದ ನೇಪಾಳದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದೆ. ಕನ್ನಡ ಭಾಷೆ ಹೃದಯ ಶ್ರೀಮಂತ ಭಾಷೆ. ಕನ್ನಡಿಗರು ವಿಶಾಲ ಹೃದಯವುಳ್ಳವರು ಕನ್ನಡಿಗರು ಪ್ರಪಂಚದ ಎಲ್ಲ ದೇಶದಲ್ಲಿ ವಾಸವಿದ್ದಾರೆ. ಕನ್ನಡಿಗರು ಎಲ್ಲೇ ಇದ್ದರು ಎಲ್ಲರ ಮನಸ್ಸು ಗೆಲ್ಲುತ್ತಾರೆ. ಕನ್ನಡಿಗರು ವಿಶ್ವಮಾನ್ಯತೆ ಪಡೆದಿದ್ದಾರೆ. ಕನ್ನಡ ಭಾಷೆ ಉಳಿಸಿ, ಬೆಳಸಲು ನಮ್ಮ ಸಂಘವು ಕಟಿಬದ್ದವಾಗಿದೆ ಎಂದು ಹೇಳಿದರು.   

ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಬಿಬಿಎಂಪಿ ಅಧಿಕಾರಿ ಮತ್ತು ನೌಕರರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಹಿನ್ನಲೆ ಗಾಯಕಿ ಅನುರಾಧ ಭಟ್ ರವರಿಂದ ಸಂಗೀತ ಸಂಜೆ ಏರ್ಪಡಿಸಲಾಗಿತ್ತು. ಹಾಗೂ ಬಿಬಿಎಂಪಿ ಉಪ ಆರೋಗ್ಯಧಿಕಾರಿ ಡಾ.ಎ.ಎಲ್.ಕಲಾವತಿರವರಿಗೆ ಮೈಸೂರು ಮಹಾರಾಜರಿಂದ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮೈಸೂರು ಮಹಾರಾಜರ ಧರ್ಮಪತ್ನಿ ಶ್ರೀಮತಿ ತ್ರಿಶಿಖಾಕುಮಾರಿ ಒಡೆಯರ್ ಉಪಸ್ಥಿತರಿದ್ದರು. ಜಂಟಿ ಆಯುಕ್ತೆ ಶ್ರೀಮತಿ ಲಕ್ಷ್ಮಿದೇವಿ, ಹಿರಿಯ ವಕೀಲರಾದ ವಿ.ಶ್ರೀನಿವಾಸ್, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಸಾಯಿಶಂಕರ್, ಎ.ಜಿ.ಬಾಬಣ್ಣ, ಉಪಾಧ್ಯಕ್ಷರಾದ ಡಾ.ಶೋಭಾ, ಡಿ.ರಾಮಚಂದ್ರ , ಪ್ರಧಾನ ಕಾರ್ಯದರ್ಶಿ ಕೆ.ಜಿ.ರವಿ, ಕಾರ್ಯಾಧ್ಯಕ್ಷರಾದ ಬಿ.ರುದ್ರೇಶ್, ಖಜಾಂಚಿ ಸೋಮಶೇಖರ್, ಜಂಟಿ ಕಾರ್ಯದರ್ಶಿ ಕೆ.ನರಸಿಂಹ, ಹೆಚ್.ಕೆ.ತಿಪ್ಪೇಶ್, ಸಂಘಟನಾ ಕಾರ್ಯದರ್ಶಿಗಳಾದ ಕೆ.ಮಂಜೇಗೌಡ, ಎಸ್.ಜಿ.ಸುರೇಶ್, ಸಂಚಾಲಕಿ ಆರ್.ರೇಣುಕಾಂಬ ಹಾಗೂ ನಿರ್ದೇಶಕರುಗಳಾದ ಮಂಜುನಾಥ್ ಎನ್, ಉಮೇಶ್ ವಿ, ಸಂತೋಷ್ ಕುಮಾರ್ ನಾಯ್ಕ್, ಶ್ರೀಧರ್, ಸಂತೋಷ್ ಕುಮಾರ್ ಎಂ, ಹೆಚ್.ಜಿ.ಹರೀಶ್ ಮತ್ತು ಕನ್ನಡಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

India Top 7 Special Forces | ದೇಶದ ಭದ್ರತಾ ಪಡೆಗಳಲ್ಲಿ ಈ 7ಖತರ್ ನಾಕ್ ವಿಶೇಷ ಪಡೆಗಳ ಕಾರ್ಯಾಚರಣೆ ಹೇಗಿರುತ್ತೆ? ಇಲ್ಲಿದೆ ಕುತೂಹಕಾರಿ ಸುದ್ದಿ

Next Post

Health News | 1.5 Tesla MRI Machine | ವೈದ್ಯಕೀಯ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ; ಈ ಸ್ವದೇಶಿ ಎಂಆರ್ ಐ ಯಂತ್ರ ಬಂದಲ್ಲಿ ಪರೀಕ್ಷಾ ವೆಚ್ಚದಲ್ಲಿ ಭಾರೀ ಇಳಿಕೆ ಸಾಧ್ಯತೆ : ಬಡವರ ಚಿಕಿತ್ಸೆಗೆ ಅನುಕೂಲ

Next Post

Health News | 1.5 Tesla MRI Machine | ವೈದ್ಯಕೀಯ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ; ಈ ಸ್ವದೇಶಿ ಎಂಆರ್ ಐ ಯಂತ್ರ ಬಂದಲ್ಲಿ ಪರೀಕ್ಷಾ ವೆಚ್ಚದಲ್ಲಿ ಭಾರೀ ಇಳಿಕೆ ಸಾಧ್ಯತೆ : ಬಡವರ ಚಿಕಿತ್ಸೆಗೆ ಅನುಕೂಲ

Karnataka Human Rights Commission | ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ‌ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ನೇಮಕ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d