ಬೆಂಗಳೂರು, ನ.28 www.bengaluruwire.com : ಹಲವು ತಿಂಗಳಿನಿಂದ ಖಾಲಿಯಿದ್ದ ರಾಜ್ಯದ ಮಾನಹಕ್ಕು ಆಯೋಗಕ್ಕೆ ರಾಜ್ಯ ಸರ್ಕಾರ ಅಧ್ಯಕ್ಷ ಮತ್ತು ಇಬ್ಬರು ಸದಸ್ಯರನ್ನು ಶನಿವಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
2021ರ ಆಗಸ್ಟ್ ನಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್ ಹಿಮಾಚಲಪ್ರದೇಶ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಾಗಿ ನಿವೃತ್ತಿಯಾಗಿದ್ದ ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ಎಲ್.ನಾರಾಯಣ ಸ್ವಾಮಿ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆಗೆ ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದ ಮೊದಲ ಅವಧಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC)ದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಅಧ್ಯಕ್ಷ ಟಿ. ಶ್ಯಾಂ ಭಟ್ ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಕೆ. ವಂಟಿಗೋಡಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ.
ನೇಮಕಾತಿ ಬಳಿಕ ಈ ಮೂವರ ಅಧಿಕಾರವಧಿಯು ಐದು ವರ್ಷ ಅಥವಾ ಅಧ್ಯಕ್ಷರು ಹಾಗೂ ಸದಸ್ಯರಿಗೆ 70 ವರ್ಷ ವಯಸ್ಸಾಗು- ವವರೆಗೆ ಈ ಎರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.