Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Tech Summit 2023 | ಸಾರಿಗೆಯಲ್ಲಿ ಒಬ್ಬ ಪ್ರಯಾಣಿಕ- ಒಂದು ಕಾರ್ಡ್ ವ್ಯವಸ್ಥೆ ಶೀಘ್ರ ಜಾರಿ : “ಭವಿಷ್ಯದ ಭಾರತದಲ್ಲಿ ವಿಮಾನ ಟ್ಯಾಕ್ಸಿ ಸೇವೆ ಹೆಚ್ಚಳ”

by Bengaluru Wire Desk
November 30, 2023
in Bengaluru Focus, Public interest
Reading Time: 1 min read
0
ಏರ್ ಟ್ಯಾಕ್ಸಿ ಇಂಡಿಯಾ ಸಾಂದರ್ಭಿಕ ಚಿತ್ರ.

ಏರ್ ಟ್ಯಾಕ್ಸಿ ಇಂಡಿಯಾ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.30 www.bengaluruwire.com : ಮೆಟ್ರೋ ರೈಲು, ಕ್ಯಾಬ್, ಬಸ್ ಗಳು ಸೇರಿದಂತೆ ವಿವಿಧ ಮಾದರಿಯ ಸಂಚಾರ ವ್ಯವಸ್ಥೆಗಳಿಗೆ ದೇಶಾದ್ಯಂತ ಒಬ್ಬ ಪ್ರಯಾಣಿಕರಿಗೆ ಒಂದು ಸ್ಮಾರ್ಟ್ ಕಾರ್ಡ್ ಸೌಲಭ್ಯವು ಕೇಂದ್ರದಿಂದ ಶೀಘ್ರವೇ ಜಾರಿಯಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಗುರುವಾರ ಹೇಳಿದರು.

ʼಬೆಂಗಳೂರು ತಂತ್ರಜ್ಞಾನ ಶೃಂಗಸಭೆʼ (Bangalore Tech Summit) ನ ಎರಡನೇ ದಿನ ʼಭವಿಷ್ಯದ ಸಂಚಾರಕ್ಕಾಗಿ ಸಮನ್ವಯದ, ಸ್ವಾಯತ್ತ, ಹಂಚಿಕೆ ಮತ್ತು ಎಲೆಕ್ಟ್ರಿಕ್ ವ್ಯವಸ್ಥೆʼ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಇನ್ನು 6 ತಿಂಗಳಲ್ಲಿ ವಿವಿಧ ಮಹಾನಗರಗಳಲ್ಲಿ ಜಾರಿಗೊಳ್ಳಲಿದೆ. ಪರಿಸರಸ್ನೇಹಿ ಸಂಚಾರ ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ಮೆಟ್ರೊ ರೈಲು ನಿಲ್ದಾಣಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ “ಬೆಂಗಳೂರು ತಂತ್ರಜ್ಞಾನ ಶೃಂಗಸಭೆ”ಯಲ್ಲಿ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮತ್ತಿತರರು ʼಭವಿಷ್ಯದ ಸಂಚಾರಕ್ಕಾಗಿ ಸಮನ್ವಯ, ಸ್ವಾಯತ್ತ ಹಂಚಿಕೆ ಮತ್ತು ಎಲೆಕ್ಟ್ರಿಕ್ ವ್ಯವಸ್ಥೆʼ ಗೋಷ್ಠಿಯಲ್ಲಿ ಮಾತನಾಡಿದರು.

ʼಊಬರ್ ಇಂಡಿಯಾʼ ಸಂಸ್ಥೆಯ ನಿರ್ದೇಶಕ ಸಂಜಯ್ ಛಡ್ಡಾ, ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಯಾಣವು ಕ್ಯಾಬ್ ನಿಂದ ಬಸ್ ಗಳಿಗೆ ಬದಲಾಗಬೇಕು. ಈ ನಿಟ್ಟಿನಲ್ಲಿ ಊಬರ್ ಸಂಸ್ಥೆಯಿಂದ ಈಗಾಗಲೇ ದೆಹಲಿ ಮತ್ತು ಮುಂಬೈ ನಗರಗಳಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ವ್ಯವಸ್ಥೆ ಆರಂಭಿಸಲಾಗಿದೆ. ಬೆಂಗಳೂರಿನಲ್ಲೂ ಶೀಘ್ರವೇ ಈ ಸೌಲಭ್ಯ ದೊರಕಿಸಲಾಗುವುದು. 2030ರ ವೇಳೆಗೆ ಊಬರ್ ಬುಕಿಂಗ್ ವ್ಯವಸ್ಥೆಯಲ್ಲಿ ಶೇಕಡ 100ರಷ್ಟು ಎಲೆಕ್ಟ್ರಿಕ್ ವಾಹನಗಳನ್ನೇ ಅಳವಡಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

 ʼಪರ್ಪಲ್ ಮೊಬೈಲಿಟಿʼ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಪಟವರ್ಧನ್, ಕಳೆದ ಕೆಲವು ವರ್ಷಗಳಲ್ಲಿ ಪ್ರಯಾಣ ಮತ್ತು ಸಂಚಾರ ವ್ಯವಸ್ಥೆ ಪರಿಸರ ಸ್ನೇಹಿಯಾಗುವತ್ತ ಬದಲಾಗುತ್ತಿರುವುದು ಉತ್ತಮ ಬೆಳವಣಿಗೆ. ಗ್ರಾಹಕರ ಕ್ಯಾಬ್ ಬುಕಿಂಗ್ ವಿಧಾನ, ಸಂಚಾರ ಆಡಳಿತ, ಕಾರ್ಯಾಚರಣೆ, ಸಿಗ್ನಲಿಂಗ್ ವ್ಯವಸ್ಥೆ ಇವೆಲ್ಲವೂ ತಂತ್ರಜ್ಞಾನದ ಬಲದೊಂದಿಗೆ ಸ್ಮಾರ್ಟ್ ಆಗುತ್ತಿವೆ ಎಂದರು.

ʼಬೀಟಾ ಟೆಕ್ನಾಲಜೀಸ್ʼ ಸಂಸ್ಥೆಯ ನಿರ್ದೇಶಕ ಬ್ಲೇಕ್ ಒಪ್ಸಾಹಿ, ಎಲೆಕ್ಟ್ರಿಕ್ ವಿಮಾನಗಳ ಸಂಚಾರಕ್ಕೆ ಭಾರತದಲ್ಲಿ ಹೆಚ್ಚಿನ ಅವಕಾಶವಿದೆ. ಸುಮಾರು 200 ವಿಮಾನ ನಿಲ್ದಾಣಗಳನ್ನು ಹೊಂದಿರುವ ಭಾರತ ಅತ್ಯುತ್ತಮ ವೈಮಾನಿಕ ಮೂಲಸೌಕರ್ಯ ಹೊಂದಿದ್ದು, ಭವಿಷ್ಯದಲ್ಲಿ ಖಾಸಗಿ ವಿಮಾನಗಳು ಹಾಗೂ ವಿಮಾನ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಲಿವೆ ಎಂದು ತಿಳಿಸಿದರು.

ಐಒಟಿ, ಎಐ ತಂತ್ರಜ್ಞಾನ ಬಳಕೆಯಿಂದ ಕೃಷಿ ಇಳುವರಿ ಹೆಚ್ಚಳ :

ಕೃಷಿಯಲ್ಲೂ ಆಧುನಿಕತೆ ಮೈಗೂಡಿಸಿಕೊಂಡು, ಐಒಟಿ, ಎಐ ಬಳಸಿದರೆ ನಿಖರ ಗೊಬ್ಬರ ಬಳಕೆ, ನೀರಿನ ಪ್ರಶಸ್ತ ಬಳಕೆ ಹಾಗೂ ಅತಿಹೆಚ್ಚಿನ ಗುಣಮಟ್ಟದ ಇಳುವರಿ ಪಡೆಯಲು ಸಾಧ್ಯ ಎಂದು ಫಾರ್ಮ್ ಆಂಡ್ ಫೀಲ್ಡ್, ಕ್ರಾಪ್ ಆಂಡ್ ಡಿಜಿಟಲ್ ಸಲ್ಯುಷನ್ಸ್‌ ಮುಖ್ಯಸ್ಥ ಸಾಗರ್ ಎನ್. ಗುರುವಾರ ಪ್ರತಿಪಾದಿಸಿದರು.

ಇಲ್ಲಿನ ಅರಮನೆ ಆವರಣದಲ್ಲಿ ನಡೆಯುತ್ತಿರುವ “ಬೆಂಗಳೂರು ಟೆಕ್ ಮೇಳ- 2023″ದಲ್ಲಿ “ಸುಸ್ಥಿರ ಭವಿಷ್ಯಕ್ಕಾಗಿ ಟೆಕ್ ಬೆಂಬಲ” ಕುರಿತ ಸಂವಾದದಲ್ಲಿ ಅವರು ಮಾತನಾಡಿದ ಅವರು, ಕೃಷಿಯಲ್ಲಿ ತಂತ್ರಜ್ಞಾನ ಬಳಕೆ ಎಂದಾಕ್ಷಣ ಕಾರ್ಪೊರೇಟ್ ಕಪಿಮುಷ್ಟಿಯೊಳಗೆ ರೈತರು ಸಿಲುಕಿದಂತಾಗುವುದಿಲ್ಲ. ಸಣ್ಣ ರೈತರಿಗೂ ಇದರ ಅಳವಡಿಕೆ ಸಾಧ್ಯ. ತಂತ್ರಜ್ಞಾನ ಎಲ್ಲರನ್ನೂ ಸಬಲೀಕರಣಗೊಳಿಸುತ್ತದೆ. ಬೀಜ ಬಿತ್ತನೆಗೆ ಮುನ್ನ ಅದರ ಗುಣಮಟ್ಟ ನಿರ್ಣಯಿಸಬೇಕು. ಬೀಜ ಹಾಗೂ ಮಣ್ಣಿನ ಹೊಂದಾಣಿಕೆಯ ಪರೀಕ್ಷೆಯಾಗಬೇಕು. ಬೆಳೆಗೆ ಅಗತ್ಯವಾಗಿರುವ ನಿಖರ ಪೋಷಕಾಂಶ ಹಾಗೂ ನೀರಿನ ಪ್ರಮಾಣದ ಲೆಕ್ಕಾಚಾರ ನಡೆಯಬೇಕು. ಕೊನೆಗೆ ಇಳುವರಿಯ ಗುಣಮಟ್ಟವನ್ನೂ ಅಳೆಯುವಂತಾಗಬೇಕು. ಇವೆಲ್ಲವೂ ಭಾರತದಲ್ಲಿ ಸಾಧ್ಯವಾಗಿ ಕೃಷಿಯ ಗುಣಮಟ್ಟ ಹೆಚ್ಚುವ ದಿನ ದೂರವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

WhatsApp Join our WhatsApp Channel
Previous Post

BW IMPACT | BBMP DEPUTATION RULES | ನಿಯೋಜನಾ ಅವಧಿ ಪೂರ್ಣಗೊಂಡ ಅಧಿಕಾರಿ- ನೌಕರರು ಮಾತೃ ಇಲಾಖೆಗೆ ವಾಪಸ್ : ಲೆಕ್ಕಾಧೀಕ್ಷಕಿ ಸೌಮ್ಯರಿಗೂ ಗೇಟ್ ಪಾಸ್ : ಇದು ಬೆಂಗಳೂರು ವೈರ್ ವರದಿ ಪರಿಣಾಮ

Next Post

Bengaluru Tech Summit 2023 | ICMR Mobilab | ಗಂಭೀರ ರೋಗ ಪರೀಕ್ಷೆಯಲ್ಲಿ ಈ ಪುಟ್ಟ ಯಂತ್ರದ ಪಾತ್ರ ಬಹುಮುಖ್ಯ : ಗಂಟೆಗಟ್ಟಲೆ ಕಾಯಬೇಕಿಲ್ಲ 5 ನಿಮಿಷದಲ್ಲಿ ರಕ್ತ ಪರೀಕ್ಷೆ ರಿಸಲ್ಟ್ ನೀಡುತ್ತೆ!!

Next Post
ಪ್ರೈಮರಿ ಹೆಲ್ತ್ ಟೆಕ್ ಸಂಸ್ಥೆಯು ಉತ್ಪಾದಿಸುತ್ತಿರುವ ಮೊಬೈಲ್ ಆಧಾರಿತ ಪೋರ್ಟಬಲ್ ಲ್ಯಾಬ್ ಅರ್ಥಾತ್ ಮೊಬಿಲ್ಯಾಬ್ ಸಾಂದರ್ಭಿಕ ಚಿತ್ರ.

Bengaluru Tech Summit 2023 | ICMR Mobilab | ಗಂಭೀರ ರೋಗ ಪರೀಕ್ಷೆಯಲ್ಲಿ ಈ ಪುಟ್ಟ ಯಂತ್ರದ ಪಾತ್ರ ಬಹುಮುಖ್ಯ : ಗಂಟೆಗಟ್ಟಲೆ ಕಾಯಬೇಕಿಲ್ಲ 5 ನಿಮಿಷದಲ್ಲಿ ರಕ್ತ ಪರೀಕ್ಷೆ ರಿಸಲ್ಟ್ ನೀಡುತ್ತೆ!!

ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

Cancellation Of Trains | ರೈಲ್ವೆ ಪ್ರಯಾಣಿಕರೇ ಗಮನಿಸಿ!! ; ಡಿಸೆಂಬರ್ ನಿಂದ 3 ತಿಂಗಳು ಈ 18 ರೈಲುಗಳ ಸಂಚಾರ ರದ್ದು - 30 ರೈಲುಗಳ ಮಾರ್ಗ ಬದಲಾವಣೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group