Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnatka Journalists Co-Operative Society |  ಸಾವಿರಾರು ಪತ್ರಕರ್ತರ ಬದುಕಿಗೆ ಆಸರೆ :    ಕರ್ನಾಟಕ ಪತ್ರಕರ್ತರ ಸಹಕಾರ ಸಂಘಕ್ಕೆ ಅಮೃತ ಸಂಭ್ರಮ

"2022-23ನೇ ಸಾಲಿಗೆ ಪತ್ರಕರ್ತರಿಗೆ 2.32 ಕೋಟಿ ರೂ. ಸಾಲ ವಿತರಿಸಿದೆ. ಆ ಮೂಲಕ ಇಡೀ ಭಾರತದಲ್ಲಿನ ಪತ್ರಕರ್ತರ ಏಕೈಕ ಅತ್ಯಂತ ಹಳೆಯ ಹಣಕಾಸು ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ."

by Bengaluru Wire Desk
December 5, 2023
in Bengaluru Focus, News Wire
Reading Time: 2 mins read
0

ಬೆಂಗಳೂರು, ಡಿ.05 www.bengaluruwire.com : ಹಳೇ ಬೇರು – ಹೊಸ ಚಿಗುರು ಕೂಡಿರಲು ಮರ ಸೊಗಸು ಎನ್ನುವಂತೆ ಹಿರಿಯರ ಆಶಯ, ಪರಿಶ್ರಮ, ದೂರದೃಷ್ಟಿಯಿಂದ ಆರಂಭವಾಗಿದ್ದ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ನಿಯಮಿತಕ್ಕೆ ಇದೀಗ 75ರ ಹರೆಯದ ಅಮೃತ ಸಂಭ್ರಮ.

75ನೇ ವರ್ಷದ ಸಂಭ್ರಮದಲ್ಲಿರುವ ಪತ್ರಕರ್ತರ ಸಹಕಾರ ಸಂಘದ ಕಟ್ಟಡ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ಒoದು ಕಾಲದಲ್ಲಿ ಪತ್ರಕರ್ತರಿಗೆ ಸರಿಯಾದ ಸಂಬಳವೂ ಇರಲಿಲ್ಲ! ಆ ಹೊತ್ತಿನಲ್ಲಿ ಪತ್ರಕರ್ತರನ್ನು ಒಂದೆಡೆ ಸೇರಿಸುವುದೇ ದೊಡ್ಡ ಸವಾಲು. ಅಂಥಹ ಕಾಲ ಘಟ್ಟದಲ್ಲಿ ಕರ್ನಾಟಕದ ಅನೇಕ ಹಿರಿಯ ಪತ್ರಕರ್ತರು ಸೇರಿಸಿ ಕರ್ತವ್ಯನಿರತ ಪತ್ರಕರ್ತರಿಗೆ ಆರ್ಥಿಕ ಬಲ ನೀಡಬೇಕು ಎಂದು ನಿರ್ಧರಿಸಿದರು. ಸಮಾಜಕ್ಕಾಗಿ ದುಡಿಯುವ ಪತ್ರಕರ್ತರು ತಮ್ಮ ಕುಟುಂಬವನ್ನೇ ಮರೆತು ಸಮಾಜಕ್ಕಾಗಿ, ಸಮಾಜದ ಶ್ರೇಯಸ್ಸಿಗಾಗಿ ಕೆಲಸ ಮಾಡುವಾಗ ಅವರ ಶ್ರೇಯೋಭಿವೃದ್ಧಿಗಾಗಿ 1949ರ ಡಿಸೆಂಬರ್ 5ರಂದು ಹಿರಿಯರಾದ ಎನ್.ಎಸ್. ವೆಂಕೋಬರಾವ್ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಪತ್ರಕರ್ತರ ಸಹಕಾರ ಸಂಘ ನಿಯಮಿತ ಹುಟ್ಟಿಕೊಂಡಿತು. ಅದು 1995ರಲ್ಲಿ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ನಿಯಮಿತ ಆಗಿ ಬದಲಾಯಿತು. 

ಹಿರಿಯರಾದ ಟಿ.ನಾಗರಾಜು ಅವರ ಅಧ್ಯಕ್ಷರಾಗಿದ್ದ ಕಾಲದಲ್ಲಿ ಅಂದರೆ 2003ರಲ್ಲಿ ಅದಕ್ಕೊಂದು ಸ್ವಂತ ಕಟ್ಟಡವೂ ಕ್ವೀನ್ಸ್ ರಸ್ತೆಯಲ್ಲಿ ಸಿದ್ಧವಾಯಿತು. ಇಲ್ಲಿಯವರೆಗೆ ಸುಮಾರು 31 ಪತ್ರಕರ್ತರು ಈ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. 24 ಪತ್ರಕರ್ತರು ಗೌರವ ಕಾರ್ಯದರ್ಶಿಗಳಾಗಿದ್ದಾರೆ. ಅನೇಕರು ಉಪಾಧ್ಯಕ್ಷರಾಗಿದ್ದಾರೆ, ಖಜಾಂಚಿಗಳಾಗಿದ್ದಾರೆ. ನೂರಾರು ಪತ್ರಕರ್ತರು ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ, ಸಂಸ್ಥೆಯ ಏಳಿಗೆಗೆ ಟೊಂಕ ಕಟ್ಟಿ ದುಡಿದಿದ್ದಾರೆ.

ಈ ಪರಿಶ್ರಮದ ಸಂಸ್ಥೆ ಈಗ 75ರ ಹೊಸ್ತಿಲಲ್ಲಿ ನಿಂತಿದೆ. ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ನಿಯಮಿತ ಸಾವಿರಾರು ಪತ್ರಕರ್ತರ ಬದುಕಿಗೆ ಆಸರೆಯಾಗಿದೆ. ನೆಲೆ ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಅನೇಕರಿಗೆ ಬದುಕು ಕೂಡ ಕಟ್ಟಿಕೊಟ್ಟಿದೆ! ಇಂತಹ ಸಂಸ್ಥೆಗೆ ಈಗ ಅಮೃತ ಸಂಭ್ರಮ. ಪತ್ರಕರ್ತರಿಂದ ಕೇವಲ 353 ರೂ. ಠೇವಣಿ ಸಂಗ್ರಹಿಸಿ ಆರಂಭವಾದ ಸಂಸ್ಥೆ ಈಗ 3 ಲಕ್ಷ ರೂ. ಸಾಲ, 30 ಲಕ್ಷ ರೂ. ಭದ್ರತಾ ಸಾಲ ನೀಡುವ ಹಂತಕ್ಕೆ ಬಂದು ನಿಂತಿದೆ!

ಪ್ರಸ್ತುತ ಸಂಘದ ಅಧ್ಯಕ್ಷ ರಮೇಶ್ ಪಾಳ್ಯ.

“2636 ಸದಸ್ಯರನ್ನು ಹೊಂದಿರುವ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಈಗ ಒಟ್ಟು 14 ಕೋಟಿ ರೂ. ವಹಿವಾಟು ನಡೆಸಿದೆ. 9.26ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದೆ. ಸರಿಸುಮಾರು 50 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. 2022-23ನೇ ಸಾಲಿಗೆ ಪತ್ರಕರ್ತರಿಗೇ 2.32 ಕೋಟಿ ರೂ. ಸಾಲ ವಿತರಿಸಿದೆ. ಆ ಮೂಲಕ ಇಡೀ ಭಾರತದಲ್ಲಿನ ಪತ್ರಕರ್ತರ ಏಕೈಕ ಅತ್ಯಂತ ಹಳೆಯ ಹಣಕಾಸು ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ” ಎಂದು ಹೇಳುತ್ತಾರೆ ಸಂಸ್ಥೆಯ ಅಧ್ಯಕ್ಷ ರಮೇಶ್ ಪಾಳ್ಯ ಅವರು.

ಒಟ್ಟಿನಲ್ಲಿ ಇಂತಹ ಇತಿಹಾಸ ಹೊಂದಿರುವ ಪತ್ರಕರ್ತರ ಸಹಕಾರ ಸಂಘ ಪತ್ರಕರ್ತರ ಏಳ್ಗೆಗೆ ಸಹಾಯ ಮಾಡುತ್ತಾ ಈಗ ಅಮೃತ ಸಂಭ್ರಮದಲ್ಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.

ಸಂಘದ ಏಳು ಹುದ್ದೆಗಳಿಗೆ ಇತ್ತಿಚೆಗೆ ನಡೆದ ಚುನಾವಣೆಯಲ್ಲಿ ಗೆದ್ದ ಪದಾಧಿಕಾರಿಗಳು ಸಂಭ್ರಮಪಟ್ಟ ಪರಿ.

ಸಂಘದ ಪದಾಧಿಕಾರಿಗಳ ಸ್ಥಾನಗಳಿಗೆ ಇತ್ತೀಚೆಗಷ್ಟೇ ಚುನಾವಣೆ ನಡೆದಿತ್ತು. 2023-2028ನೇ ಸಾಲಿನ ವರೆಗೆ ಚುನಾಯಿತ ಸಮಿತಿ ಅಸ್ತಿತ್ವದಲ್ಲಿರುತ್ತದೆ. ಸಂಘದಲ್ಲಿ ಒಟ್ಟು 13 ನಿರ್ದೇಶಕರ ಸ್ಥಾನಗಳಿದ್ದು, ಈ ಪೈಕಿ 7 ಮಂದಿ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಉಳಿದವರು ಅವಿರೋಧವಾಗಿ ಆಯ್ಕೆಗೊಂಡಿದ್ದರು.

ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರಿಂದ ಚಾಲನೆ :

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75 ನೇ ಸಂಸ್ಥಾಪನಾ ದಿನಾಚರಣೆಗೆ ಮಂಗಳವಾರ ರಾಜ್ಯಪಾಲರು ಚಾಲನೆ ನೀಡಿದರು.

ಸಂಘದ 75 ನೇ ವರ್ಷದ ಅಮೃತ ಸಂಭ್ರಮದ ಲಾಂಚನವನ್ನು ರಾಜಭವನದಲ್ಲಿ ಬಿಡುಗಡೆ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು, ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಿ ಎಂದು ಹಾರೈಸಿದರು.

ಸಂಘದ 75ನೇ ವರ್ಷದ ಲಾಂಛನ ಬಿಡುಗಡೆ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಜೊತೆಯಲ್ಲಿ ಸಂಘದ ಪದಾಧಿಕಾರಿಗಳು.

ಪತ್ರಕರ್ತರು ಸಂವಿಧಾನದ 4ನೇ ಅಂಗ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಪತ್ರಕರ್ತರ ಪಾತ್ರ ಶ್ಲಾಘನೀಯ. ಪತ್ರಕರ್ತರ ಆರ್ಥಿಕ ಅಭಿವೃದ್ಧಿಗೆ  ದೇಶದಲ್ಲೇ ಈ ರೀತಿಯ ಸಂಸ್ಥೆ ಇರುವುದನ್ನು ಶ್ಲಾಘಿಸಿದ ರಾಜ್ಯಪಾಲರಾದ ಗೆಲ್ಹೋಟ್ ಅವರು ಪತ್ರಕರ್ತ ನೋವು ನಲಿವುಗಳಿಗೆ ಸ್ಪಂದಿಸುವ ಸಂಸ್ಥೆಗಳು ಹೆಚ್ಚಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಖ್ಯಾತ ವ್ಯಂಗ್ಯಚಿತ್ರ ಕಲಾವಿದರಾದ ಗುಜ್ಜಾರಪ್ಪ ಅವರು ರಚಿಸಿದ ಕಲಾಕೃತಿಯನ್ನು ಹಾಗೂ ಹಿರಿಯ ಛಾಯಾಗ್ರಾಹಕರಾದ ವಿಶ್ವನಾಥ್ ಸುವರ್ಣ ಅವರ ‘ಕನ್ನಡ ನಾಡಿನ ಬಣ್ಣದ ಬಾನಾಡಿಗಳು’ ಚಿತ್ರಕೃತಿಯನ್ನು ಸ್ಮರಣಿಕೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮ್ಮಯ್ಯ, ಖಜಾಂಚಿ ಮೋಹನ್ ಕುಮಾರ್, ನಿರ್ದೇಶಕರಾದ ಎಂ.ಎಸ್. ರಾಜೇಂದ್ರಕುಮಾರ್, ವಿನೋದ್ ಕುಮಾರ್ ಬಿ. ನಾಯ್ಕ್, ರಮೇಶ್ ಹಿರೇಜಂಬೂರು, ಧ್ಯಾನ್ ಪೂಣಚ್ಚ, ನಯನಾ ಎಸ್., ವನಿತಾ ಎನ್., ಕೃಷ್ಣಕುಮಾರ್ ಪಿ.ಎಸ್. ಹಾಗೂ ಕಾರ್ಯದರ್ಶಿ ಕೆಂಪರಾಜು, ಸಂಘದ ಸಿಬ್ಬಂದಿ ಹೇಮಂತ್ ಕುಮಾರ್, ಅನಿತಾ ಜೋಯಿಸ್, ಆನಂದ್ ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | Flower Sale | ಕಟ್ಟಿದ ಹೂಗಳನ್ನು ಮೊಳ- ಮಾರು ಲೆಕ್ಕದಲ್ಲಿ ಮಾರುವಂತಿಲ್ಲ : ಕಾನೂನು ಮಾಪನಶಾಸ್ತ್ರ ಇಲಾಖೆ ನೂತನ ಆದೇಶ : ಜಾಗೃತಿ ಮೂಡಿಸದಿದ್ದಲ್ಲಿ ಗೊಂದಲ ಸಾಧ್ಯತೆ!!

Next Post

BBMP News | ಬಿಬಿಎಂಪಿ ಕಸದ ಕರ್ಮಕಾಂಡ : ” ಕಪ್ಪು ಪಟ್ಟಿಗೆ ಸೇರಿಸಬೇಕಾದ ಸಂಸ್ಥೆಗಳಿಗೆ ಘನತ್ಯಾಜ್ಯ ಪರಿವೀಕ್ಷಕರ ಸೇವೆ ಗುತ್ತಿಗೆ” : ಮುಖ್ಯಮಂತ್ರಿಗಳಿಗೆ ದೂರು

Next Post

BBMP News | ಬಿಬಿಎಂಪಿ ಕಸದ ಕರ್ಮಕಾಂಡ : " ಕಪ್ಪು ಪಟ್ಟಿಗೆ ಸೇರಿಸಬೇಕಾದ ಸಂಸ್ಥೆಗಳಿಗೆ ಘನತ್ಯಾಜ್ಯ ಪರಿವೀಕ್ಷಕರ ಸೇವೆ ಗುತ್ತಿಗೆ" : ಮುಖ್ಯಮಂತ್ರಿಗಳಿಗೆ ದೂರು

Belagavi Session | ನಾಡಪ್ರಭು ಕೆಂಪೇಗೌಡ ಬಡಾವಣೆ : "ಸದನವನ್ನು‌ ತಪ್ಪು ದಾರಿಗೆ ಎಳೆದ ಬಿಡಿಎ"

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d