Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW SPECIAL | SMILE Sub Scheme | ಮೈಸೂರನ್ನು “ಭಿಕ್ಷುಕ ವೃತ್ತಿ ಮುಕ್ತ” ನಗರವಾಗಿಸಲು ಸಮಾಜ ಕಲ್ಯಾಣ ಇಲಾಖೆ ಹೊಸ ಯೋಜನೆ ಸದ್ಯದಲ್ಲೇ ಜಾರಿ!!

ಕೇಂದ್ರ ಸರ್ಕಾರದ ಸ್ಮೈಲ್ ಯೋಜನೆಯಡಿಯ ಸ್ಮೈಲ್ ಬೆಗ್ಗರಿ ಸ್ಕೀಮ್ ಯೋಜನೆಯಡಿ ಪ್ರಾರಂಭದಲ್ಲಿ ದೇಶದಲ್ಲಿನ 30 ನಗರಗಳನ್ನು ಆಯ್ಕೆ ಮಾಡಿದ್ದು, ಐತಿಹಾಸಿಕ ನಗರ ವರ್ಗದಡಿ ಮೈಸೂರು ನಗರವನ್ನು ಯೋಜನೆಗಾಗಿ ಆಯ್ಕೆ ಮಾಡಲಾಗಿದೆ.

by Bengaluru Wire Desk
December 7, 2023
in BW Special, News Wire, Public interest
Reading Time: 1 min read
0
ಬೀದಿಯಲ್ಲಿ ಭಿಕ್ಷೆ ಬೇಡುತ್ತಿರುವ ವೃದ್ಧೆ. (ಸಾಂದರ್ಭಿಕ ಚಿತ್ರ)

ಬೀದಿಯಲ್ಲಿ ಭಿಕ್ಷೆ ಬೇಡುತ್ತಿರುವ ವೃದ್ಧೆ. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಡಿ.07 www.bengaluruwire.com : ಭಿಕ್ಷಾಟನೆಯಲ್ಲಿ ತೊಡಗಿರುವವರ ಕಲ್ಯಾಣ ಕಾರ್ಯಕ್ರಮ ಹಾಗೂ ಪುನರ್ವಸತಿ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಮೈಸೂರು ನಗರವನ್ನು ಭಿಕ್ಷಾಟನೆ ವೃತ್ತಿ ಮುಕ್ತ ನಗರವನ್ನಾಗಿಸಲು ರಾಜ್ಯ ಸರ್ಕಾರ ಸದ್ಯದಲ್ಲೇ ‘ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿ’ (SMILE- Beggary Scheme) ಎಂಬ ಸ್ಮೈಲ್ ಭಿಕ್ಷುಕ ಯೋಜನೆಯನ್ನು ಜಾರಿಗೆ ತರಲು ಪೂರ್ವಸಿದ್ಧತೆ ಕೈಗೊಂಡಿದೆ.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ “ಸ್ಮೈಲ್ ಉಪಯೋಜನೆಯಡಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿ ಉಪಯೋಜನೆಯನ್ನು ಜಾರಿಗೆ ತಂದಿದೆ. ಇದಕ್ಕಾಗಿ ದೇಶಾದ್ಯಂತ 30 ನಗರಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಮೈಸೂರು ನಗರವನ್ನು ಆಯ್ಕೆ ಮಾಡಲಾಗಿದೆ. 30 ನಗರಗಳ ಪೈಕಿ 10 ದೇವಸ್ಥಾನಗಳು ಹೆಚ್ಚಾಗಿರುವ ನಗರಗಳು, 10 ಪ್ರವಾಸೋದ್ಯಮ ಹೆಚ್ಚಾಗಿರುವ ನಗರಗಳು ಮತ್ತು 10 ಐತಿಹಾಸಿಕ ನಗರಗಳನ್ನು ವಿಭಾಗ ಮಾಡಿದೆ. ಅಂತಹ ನಗರಗಳಲ್ಲಿ ಪ್ರಾರಂಭವಾಗಿ ಈ ಯೋಜನೆಯನ್ನು ಜಾರಿಗೆ ತಂದು ನಂತರ ದೇಶಾದ್ಯಂತ ಈ ಸ್ಮೈಲ್ ಯೋಜನೆಯನ್ನು ಹಂತ ಹಂತವಾಗಿ ವಿಸ್ತರಿಸಿ ಭಾರತವನ್ನು “ಭಿಕ್ಷಾ ವೃತ್ತಿ ಮುಕ್ತ”ವನ್ನಾಗಿಸುವ ಗುರಿಯನ್ನು ಹೊಂದಿದೆ.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಸಮಾಜದ “ಅಂಚಿನಲ್ಲಿರುವ ವ್ಯಕ್ತಿಗಳಿಗೆ ಜೀವನೋಪಾಯ ಹಾಗೂ ಉದ್ಯಮ ಸ್ನೇಹಿ ಬೆಂಬಲ” (Support for Marginalized Individuals for Livelihood and Enterprise- SMILE) ಯೋಜನೆಯನ್ನು ರಚಿಸಿದ್ದು, ಅದರ ಅಡಿಯಲ್ಲಿ ‘ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿ’ ಉಪಯೋಜನೆಯನ್ನು ರೂಪಿಸಿದ್ದು, ಆ ಮೂಲಕ ಭಿಕ್ಷುಕ ವೃತ್ತಿಯಲ್ಲಿ ತೊಡಗಿರುವವರ ರಕ್ಷಣೆ ಮತ್ತು ಪುನರ್ವಸತಿಯಲ್ಲಿ ಪ್ರಮುಖ ಗಮನವನ್ನು ಹೊಂದಿದೆ. ಇದರಿಂದಾಗಿ ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶ ಹೊಂದಿದೆ.

‘ಭಿಕ್ಷಾ ವೃತ್ತಿ ಮುಕ್ತ’ಗೊಳಿಸುವ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು, ಜಿಲ್ಲಾಡಳಿತಗಳು, ದೇವಾಲಯ ಟ್ರಸ್ಟ್‌ಗಳು, ನಗರ ಸ್ಥಳೀಯ ಸಂಸ್ಥೆ, ಮುನ್ಸಿಪಲ್ ಕಾರ್ಪೊರೇಶನ್‌ಗಳಂತಹ ವಿವಿಧ ಭಾಗಿದಾರರೊಂದಿಗೆ ಸಂಘಟಿತ ಕ್ರಮ ಮತ್ತು ಒಮ್ಮುಖದ ಪ್ರಯತ್ನದ ಮೂಲಕ ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಪುನರ್ವಸತಿ ಒದಗಿಸಿ ಭಿಕ್ಷಾಟನೆಯಲ್ಲಿ ತೊಡಗಿರುವವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಕೆಲಸಕ್ಕೆ ಕೈಹಾಕಿದೆ. ಸ್ಮೈಲ್ ಯೋಜನೆಗೆ ಇನ್ನು ಕೆಲಸವೇ ದಿನಗಳಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ವಿವಿಧ ಇಲಾಖೆ- ಸಂಘ ಸಂಸ್ಥೆಗಳು, ಯೋಜನೆಗಳ ಸಮ್ಮಿಲನ :

ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ದೃಷ್ಟಿಯಿಂದ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಇದೇ ರೀತಿಯ ಯೋಜನೆಗಳಾದ ನಗರ ಆಶ್ರಯ ಮನೆಗಳ ಯೋಜನೆ (DAY-NULM), ವಿವಿಧ ತರಬೇತಿ ಸಂಸ್ಥೆಗಳ ಮೂಲಕ ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳನ್ನು, ಏಜನ್ಸಿಗಳನ್ನು ಈ ಯೋಜನೆಯಡಿ ಭಾಗಿಯಾಗುವಂತೆ ಕ್ರಮ ಕೈಗೊಳ್ಳಲಿದೆ. ಈ ಯೋಜನೆ ಅನುಷ್ಠಾನ ಮಾಡುವ ಮೊದಲಿಗೆ ಮೈಸೂರು ನಗರದಲ್ಲಿ ವೈಜ್ಞಾನಿಕವಾಗಿ ಭಿಕ್ಷುಕರ ಸಂಖ್ಯೆ, ಅವರ ಪರಿಸ್ಥಿತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳಬೇಕಿದೆ. ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ (ISEC) ಯೊಂದಿಗೆ ಸಮಾಜ ಕಲ್ಯಾಣ ಇಲಾಖೆ ಒಡಂಬಡಿಕೆ ಮಾಡಿಕೊಳ್ಳಲಿದೆ. ನಂತರ ಸರ್ಕಾರದ ಒಪ್ಪಿಗೆ ಬಳಿಕ ಐತಿಹಾಸಿಕ ನಗರಿ ಮೈಸೂರಿನಲ್ಲಿ ಐಸೆಕ್ ಸಂಸ್ಥೆ ಭಿಕ್ಷುಕರ ಬಗ್ಗೆ ಸಮೀಕ್ಷೆ ಕೈಗೊಂಡು ಅದರ ವರದಿ ಆಧಾರದ ಮೇಲೆ ಸರ್ಕಾರ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿ ಬಳಕ ಆ ಯೋಜನೆಯನ್ನು ಜಾರಿ ಮಾಡಲಿದೆ.

ಸ್ಮೈಲ್ ಯೋಜನೆಯು ನಿರಂತರ ಪ್ರಕ್ರಿಯೆಯಾಗಿದ್ದು, ಈ ಯೋಜನೆಯಡಿ ಭಿಕ್ಷೆ ಬೇಡುತ್ತಿರುವವರನ್ನು ಗುರ್ತಿಸಿ ಅವರಿಗೆ ಪುರ್ವಸತಿ, ವೈದ್ಯಕೀಯ ನೆರವು, ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ ಅವರನ್ನು ಸಶಕ್ತಗೊಳಿಸಿ ಭಿಕ್ಷಾ ವೃತ್ತಿಯಿಂದ ಹೊರಗೆತಂದು ಸಮಾಜದ ಮುಖ್ಯವಾಹಿಸಿಯಲ್ಲಿ ಸ್ವಾವಲಂಬಿಯಾಗಿ ಜೀವನ ನಡೆಸಲು ಸಜ್ಜುಗೊಳಿಸುವ ಉದ್ದೇಶವನ್ನು ಸ್ಮೈಲ್ ಯೋಜನೆ ಹೊಂದಿದೆ.

ಸ್ಮೈಲ್ ಯೋಜನೆ ಜಾರಿ ಹೇಗೆ? :

ಇದರ ಜೊತೆಗೆ ಪರಿಣಾಮಕಾರಿಯಾಗಿ ಜನರದಲ್ಲಿ ಮಾಹಿತಿ, ಶಿಕ್ಷಣ ಹಾಗೂ ಸಂಪರ್ಕ ವಿಧಾನ ಐಇಸಿ ಚಟುವಟಿಕೆಗಳ ಮೂಲಕ ಅರಿವು ಮೂಡಿಸುವುದು, ಮಾಧ್ಯಮ ಪ್ರಚಾರ ಕಾರ್ಯವನ್ನು ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯಲ್ಲಿನ ಕೇಂದ್ರ ಪರಿಹಾರ ಸಮಿತಿ (Central Relief Committee) ಚಿಂತನೆ ನಡೆಸಿದೆ. ಯೋಜನಾ ವೆಚ್ಚದ ಶೇ.30ರಷ್ಟು ಅನುದಾನವನ್ನು ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಈ ಯೋಜನೆಗೆ ಬಿಡುಗಡೆ ಮಾಡಲಿದೆ. ವಿಶ್ವವಿಖ್ಯಾತ ದಸರಾದಿಂದ ಜಾಗತಿಕ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ಮೈಸೂರು ರಾಜ್ಯದಲ್ಲೇ ಮೊದಲ ಬಾರಿಗೆ ಭಿಕ್ಷುಕರ ಮುಕ್ತ ನಗರವಾಗಿ ಬದಲಾಗಲು ಸ್ಥಳೀಯ ನಾಗರೀಕರು, ಸಂಘ ಸಂಸ್ಥೆಗಳ ಸಹಾಯ, ಸಹಕಾರವು ಅಗತ್ಯವಿದೆ.

ಭಿಕ್ಷುಕರಿಗೆ ಪುನರ್ವಸತಿ ಜೊತೆಗೆ ಹೈಟೆಕ್ ಟ್ರೈನಿಂಗ್ :

ಮೈಸೂರಿನಲ್ಲಿ ಅಂದಾಜು 500 ಭಿಕ್ಷುಕರಿರಬಹುದು. ಈ‌ ಪ್ರವಾಸೋದ್ಯಮ ನಗರವನ್ನು “ಭಿಕ್ಷುಕ ವೃತ್ತಿ ಮುಕ್ತ ನಗರ” ವಾಗಿ ಮಾಡಲು ಕೇಂದ್ರ ಪರಿಹಾರ ಸಮಿತಿ ಕ್ರಮ ಕೈಗೊಳ್ಳಲಿದೆ. ಮೈಸೂರಿನ‌ ಬೀದಿ ಬೀದಿಗಳಲ್ಲಿ ಕಂಡುಬರುವ ಭಿಕ್ಷುಕರು ಹಾಗೂ ನಿರ್ಗತಿಕರನ್ನು ಕರೆತಂದು ಅಲ್ಲಿನ ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಮೆಕಾನಿಕ್, ದ್ರೋಣ್ ತರಬೇತಿ, ಫೊಟೊಗ್ರಫಿ, ಕಂಪ್ಯೂಟರ್ ಕಲಿಕೆ ಸೇರಿದಂತೆ ಆಧುನಿಕ ತಂತ್ರಜ್ಞಾನವನ್ನು ಹೊಂದಿದ ಕೌಶಲ್ಯಗಳ ತರಬೇತಿಗಾಗಿ ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆರು‌ ತಿಂಗಳಲ್ಲಿ ತರಬೇತಿ ಒದಗಿಸಲು ಸಮಾಜ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಆ ಮೂಲಕ ಭಿಕ್ಷೆ ಬೇಡುವ ವ್ಯಕ್ತಿಯು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕ ಸಬಲವಾಗಿಸುವ ಉದ್ದೇಶ ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದೇ ಆದಲ್ಲಿ ನಿರಾಶ್ರಿತ ಪರಿಹಾರ ಕೇಂದ್ರದ ಉದ್ದೇಶ ಸಫಲವಾದಂತೆ.

ಕೇಂದ್ರ ಸರ್ಕಾರದ ಸ್ಮೈಲ್ ಯೋಜನೆ ಅನುಷ್ಠಾನಕ್ಕೆ 5 ಕೋಟಿ ರೂ. ಹಣವನ್ನು ಹೆಚ್ಚುವರಿ ತರಬೇತಿ, ಮಾಹಿತಿ, ಶಿಕ್ಷಣ ಹಾಗೂ ಸಂಪರ್ಕಕ್ಕಾಗಿ ಬಳಸಿಕೊಳ್ಳಲು, ಯೋಜನೆ ಕುರಿತಂತೆ ಜನಜಾಗೃತಿ ಮೂಡಿಸಲು, ಭಿಕ್ಷುಕರನ್ನು ಕರೆತರಲು ಹೆಚ್ಚುವರಿ ವಾಹನಗಳ ಬಳಕೆ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅಧಿಕಾರಿಗಳಿಗೆ ಇತ್ತೀಚೆಗೆ ಕೇಂದ್ರ ಪರಿಹಾರ ಸಮಿತಿ ಸಭೆಯೊಂದರಲ್ಲಿ ಸೂಚನೆ ನೀಡಿದ್ದರು ಎಂದು ಉನ್ನತ ಮೂಲಗಳು ತಿಳಿಸಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸಾಹಿತ್ಯ- ಸಾಂಸ್ಕೃತಿಕ ಹೊನಲಿನಲ್ಲಿ ಮಿಂದೆದ್ದ ಕರಾವಳಿ ಜನ

Next Post

UPI News | ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆಗಳಿಗೆ ಯುಪಿಐ ಪಾವತಿ ಮಾಡುವ ಮಿತಿ ಒಂದು ಲಕ್ಷದಿಂದ ಐದು ಲಕ್ಷ ರೂ.ಗಳಿಗೆ ಏರಿಕೆ : ಆರ್ ಬಿಐ

Next Post
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI News | ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆಗಳಿಗೆ ಯುಪಿಐ ಪಾವತಿ ಮಾಡುವ ಮಿತಿ ಒಂದು ಲಕ್ಷದಿಂದ ಐದು ಲಕ್ಷ ರೂ.ಗಳಿಗೆ ಏರಿಕೆ : ಆರ್ ಬಿಐ

ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ಬ್ಲಾಕ್ ವೊಂದರ ಸಾಂದರ್ಭಿಕ ಚಿತ್ರ.

BW SPECIAL | BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆ : ಜೆಸಿಸಿ ಸಮಿತಿ ಅವಧಿ ವಿಸ್ತರಣೆಗೆ ರೈತರಿಂದ ಸುಪ್ರೀಂಗೆ ಪತ್ರ – ಬಿಡಿಎನಿಂದ 28,830 ಸೈಟ್ ನಿರ್ಮಾಣ ಪೂರ್ಣ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d