Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Forest Land Encroachment | ರಾಜ್ಯದಲ್ಲಿ 2 ಲಕ್ಷ ಎಕರೆ ಅರಣ್ಯ ಒತ್ತುವರಿ : ಶಿವಮೊಗ್ಗ, ಉತ್ತರ ಕನ್ನಡದಲ್ಲೇ ಹೆಚ್ಚು

ಕಳೆದ 5 ವರ್ಷಗಳ ಒತ್ತುವರಿ : ವಲಯವಾರು ವಿವರ ಕೇಳಿದ ಅರಣ್ಯ ಸಚಿವ ಈಶ್ವರ ಖಂಡ್ರೆ | ವನ್ಯಮೃಗ ಅಂಗಾಂಗದ ವಸ್ತು ಹಿಂತಿರುಗಿಸಲು 3 ತಿಂಗಳ ಗಡುವು

by Bengaluru Wire Desk
January 2, 2024
in News Wire, Public interest
Reading Time: 1 min read
0

ಬೆಂಗಳೂರು, ಜ.2 www.bengaluruwire.com : ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ದೊಡ್ಡ ಪ್ರಮಾಣದ ಒತ್ತುವರಿಯನ್ನು ಮೊದಲಿಗೆ ತೆರವುಗೊಳಿಸುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಮಂಗಳವಾರ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕಾಯಿದೆ ರಚಿಸಿದ್ದಾಗ್ಯೂ, ಸುಮಾರು 2 ಲಕ್ಷ ಎಕರೆ ಅರಣ್ಯಭೂಮಿ ಒತ್ತುವರಿ ಆಗಿರುವುದು ಆಘಾತಕಾರಿ ವಿಷಯ ಎಂದರು.

ಉತ್ತರಕನ್ನಡ ಜಿಲ್ಲೆಯಲ್ಲಿ ವಿವಿಧ ಕಾಲಘಟ್ಟದಲ್ಲಿ ಅರಣ್ಯ ಪ್ರದೇಶ ಕುಂಠಿತವಾಗುತ್ತಿರುವ ಸ್ಯಾಟಲೈಟ್ ಚಿತ್ರ.

ದೊಡ್ಡ ಒತ್ತುವರಿ ತೆರವಿಗೆ ಸೂಚನೆ:

ಯಾರೇ ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಅದು ಅಪರಾಧ. ಬೆಂಗಳೂರು ನಗರದ ಸುತ್ತಮುತ್ತ ಮತ್ತು ಪಟ್ಟಣ, ನಗರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ  ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವಿಗೆ ಮೊದಲ ಆದ್ಯತೆ ನೀಡುವುದು ಅಗತ್ಯವಿದೆ ಎಂದು ಹೇಳಿದರು.

ಈಗಾಗಲೇ ಕೊತ್ತನೂರಿನಲ್ಲಿ 400ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯನ್ನು ರಕ್ಷಿಸಲಾಗಿದ್ದು, ಇದನ್ನು ಕಂದಾಯ ಭೂಮಿ ಎಂದು ಪರಿವರ್ತಿಸಿದ್ದ ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದೂ ತಿಳಿಸಿದರು.

ಅರಣ್ಯ ಒತ್ತುವರಿ ಹಿನ್ನಲೆ ಮಾನವ -ವನ್ಯಜೀವಿ ಸಂಘರ್ಷ: 

ಅರಣ್ಯದಲ್ಲಿ ವನ್ಯ ಮೃಗಗಳ ಸಂಖ್ಯೆ ಹೆಚ್ಚಳವಾಗುತ್ತಿದೆ, ಆದರೆ ಅದಕ್ಕೆ ಅನುಗುಣವಾಗಿ ವನ ಪ್ರದೇಶ ಹೆಚ್ಚಾಗುತ್ತಿಲ್ಲ. ಹೀಗಾಗಿ ಮಾನವ ಮತ್ತು ವನ್ಯ ಜೀವಿ  ಸಂಘರ್ಷ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯ ಒತ್ತುವರಿ ತೆರವು ಅತ್ಯಗತ್ಯ ಕ್ರಮವಾಗಿದೆ, ತಾವು ಸಚಿವರಾದ ಬಳಿಕ 2 ಸಾವಿರ ಎಕರೆಗೂ ಹೆಚ್ಚು ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ ಎಂದು ತಿಳಿಸಿದರು. 

ಕಾಡಿನಂಚಿನಲ್ಲಿರುವ ಹಲವು ದಶಕಗಳ ಬೆಲೆಬಾಳುವ ವೃಕ್ಷಗಳನ್ನು ಕಡಿದು ಪಟ್ಟಾಭೂಮಿ ವಿಸ್ತರಣೆ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧ ಈ ಬಗ್ಗೆ ಅರಣ್ಯದಂಚಿನ ಜನರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ವಿಕಾಸಸೌಧದಲ್ಲಿ ಮಂಗಳವಾರ ಅರಣ್ಯ ಇಲಾಖೆ ಹಿರಿಯ ಅಧಿಕಾರಗಳೊಂದಿಗೆ ಅರಣ್ಯ ಮತ್ತು ಪರಿಸರ ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸಭೆ ನಡೆಸಿದರು.

ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಅರಣ್ಯ ಭೂಮಿ ಒತ್ತುವರಿ ಮಾಡಿ ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಬೇಕಿದೆ. ಸುಮಾರು 13,155 ಪ್ರಕರಣಗಳ 31,864 ಎಕರೆ ಭೂಮಿ ಇದ್ದು, ಈ ಪೈಕಿ ಸುಮಾರು 7 ಸಾವಿರ ಪ್ರಕರಣಗಳಲ್ಲಿ ಪಟ್ಟಾ ಕೊಡಲು ಕ್ರಮವಹಿಸಬಹುದಾಗಿದೆ.  ಈ ಸಂಬಂಧ ಬಾಕಿ ಇರುವ ಪ್ರಕರಣಗಳನ್ನು ಆದಷ್ಟು ಶೀಘ್ರ ವಿಲೇವಾರಿ ಮಾಡುವಂತೆ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

1980ಕ್ಕೆ ಮುನ್ನ 3 ಎಕರೆಗಿಂತ ಕಡಿಮೆ ಭೂಮಿ ಒತ್ತುವರಿ ಮಾಡಿ ಮನೆ ಕಟ್ಟಿರುವ ಮತ್ತು ಉಳಿಮೆ ಮಾಡುತ್ತಿರುವ ಬಡ ರೈತರಿಗೆ ಕಿರುಕುಳ ನೀಡದೆ, ದೊಡ್ಡ ಒತ್ತುವರಿಗಳನ್ನು ಮೊದಲು ತೆರವು ಮಾಡಿಸಲು ಕ್ರಮ ವಹಿಸುವಂತೆಯೂ ಆದೇಶಿಸಿರುವುದಾಗಿ ಹೇಳಿದರು. ಅರಣ್ಯ ಒತ್ತುವರಿ ಕುರಿತಂತೆ ವಲಯವಾರು, ವಿಭಾಗವಾರು, ವೃತ್ತವಾರು ಮಾಹಿತಿ ಕೈಸೇರಿದ ಬಳಿಕ ಕ್ರಮ ವಹಿಸುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.

ವನ್ಯಮೃಗ ಅಂಗಾಂಗದ ವಸ್ತು ಹಿಂತಿರುಗಿಸಲು ಗಡುವು:

ಹುಲಿ ಉಗುರು, ಆನೆ ಬಾಲದ ಆಭರಣ, ವಿವಿಧ ಕಾಡುಮೃಗಗಳ ಕೊಂಬು, ಮುಖದ ಟ್ರೋಫಿಗಳು ಇತ್ಯಾದಿಯನ್ನು ನೋಂದಣಿ ಮಾಡಿಸಿ ಇಟ್ಟುಕೊಳ್ಳಲು ನೀಡಲಾಗಿದ್ದ ಗಡುವು ಹಲವು ದಶಕಗಳ ಹಿಂದೆಯೇ ಮುಗಿದಿದ್ದು, ಈಗ ಅಂತಹ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು ಮಾತ್ರ ಅವಕಾಶ ನೀಡಬಹುದಾಗಿದೆ ಎಂಬ ಅಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಕಾನೂನು ಇಲಾಖೆಯೊಂದಿಗೆ ಸಮಾಲೋಚನೆ ನಡೆದಿದ್ದು, ಈ ತಿಂಗಳಲ್ಲೇ ಸಚಿವ ಸಂಪುಟದಲ್ಲಿ ಮಂಡಿಸಿ ಒಂದು ಬಾರಿ ಮಾತ್ರ 3 ತಿಂಗಳುಗಳ ಕಾಲಾವಕಾಶ ನೀಡಲಾಗುವುದು ಎಂದರು.

ಹಲವು ಮುಗ್ದ ಜನರಿಗೆ ಕಾನೂನಿನ ಅರಿವಿಲ್ಲ, ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕದಂತೆ ಈ ಪರಿಹಾರೋಪಾಯ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಹಾಸನ ಮರ ಕಡಿತ ಪ್ರಕರಣ ಕಾನೂನು ಕ್ರಮ: 

ಹಾಸನ ಜಿಲ್ಲೆ ಬೇಲೂರು ತಾಲೂಕು ನಂದಗೊಂಡನ ಹಳ್ಳಿಯಲ್ಲಿ 126 ಬೃಹತ್ ಮರಗಳನ್ನು ಕಡಿದಿರುವುದನ್ನು ನೋಡಿ ನಾಡಿನ ಜನರೇ ಸಂಕಟಪಟ್ಟಿದ್ದಾರೆ. ಇಲ್ಲಿ ಯಾರ ಮೇಲೋ ಆರೋಪ ಮಾಡುವ ಯಾವುದೇ ಪ್ರಶ್ನೆ ಉದ್ಭವಿಸುವುದಿಲ್ಲ. ಮರ ಅಕ್ರಮ ಕಡಿತಲೆ ಆಗಿರುವ ಜಮೀನಿನಲ್ಲಿ ಶುಂಠಿ ಬೆಳೆಯಲು ಕರಾರು ಮಾಡಿಕೊಂಡಿರುವ ವ್ಯಕ್ತಿಯನ್ನು ವಶಕ್ತೆ ಪಡೆಯಲಾಗಿತ್ತು ಎಂದರು. ಬೃಹತ್ ಮರ ಇರುವ ಕಡೆ ಶುಂಠಿ ಬೆಳೆಯಲು ಸಾಧ್ಯವೇ? ಈ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#100YearsOfMTR | 100 ವರ್ಷ ತಲುಪಿದ ಬೆಂಗಳೂರಿನ ಮಾವಳ್ಳಿ ಟಿಫನ್ ರೂಮ್ ಹೋಟೆಲ್ – MTR!!!

Next Post

BBMP News | ಮಹದೇವಪುರ ವಲಯದಲ್ಲಿ “ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ : ನಾಗರೀಕರಿಂದ ಅಹವಾಲು ಸ್ವೀಕರಿಸಿದ ಡಿಸಿಎಂ

Next Post

BBMP News | ಮಹದೇವಪುರ ವಲಯದಲ್ಲಿ "ಬಾಗಿಲಿಗೆ ಬಂತು ಸರ್ಕಾರ - ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮ : ನಾಗರೀಕರಿಂದ ಅಹವಾಲು ಸ್ವೀಕರಿಸಿದ ಡಿಸಿಎಂ

ಕಾವೇರಿ 5ನೇ ಹಂತದ ಯೋಜನೆ ಜಲ ಶುದ್ಧೀಕರಣ ಘಟಕದ ಸಾಂದರ್ಭಿಕ ಚಿತ್ರ.

BW SPECIAL | BWSSB | ಕಾವೇರಿ 5ನೇ ಹಂತ ಯೋಜನೆ : ಬೆಂಗಳೂರಿನ 110 ಹಳ್ಳಿಗಳಿಗೆ ಏಪ್ರಿಲ್ ನಿಂದ ನೀರು ಪೂರೈಕೆ

Please login to join discussion

Like Us on Facebook

Follow Us on Twitter

Recent News

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d