ಬೆಂಗಳೂರು, ಜ.17 www.bengaluruwire.com: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಬರುವ ಕೆರೆಗಳು ಮತ್ತು ಉದ್ಯಾನವನಗಳ ಸಮರ್ಪಕ ನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನೆಡೆಸಲು ಆಸಕ್ತಿವುಳ್ಳ ಬೆಂಗಳೂರಿನ ನಾಗರೀಕರು “ಕೆರೆ ಮಿತ್ರ” ಹಾಗೂ “ಹಸಿರು ಮಿತ್ರ” ರಾಗಿ ಪಾಲಿಕೆಯ ವೆಬ್ಸೈಟ್ನಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ.
ಬೆಂಗಳೂರಿನ ನಿವಾಸಿಗಳು ಅವರು ವಾಸವಿರುವ ವಾರ್ಡ್ ಅಥವಾ ಸಮೀಪದಲ್ಲಿರುವ ಕೆರೆ ಅಥವಾ ಉದ್ಯಾನವನವನ್ನು ಆಸಕ್ತಿ ಇದ್ದಲ್ಲಿ ಅವುಗಳ ನಿರ್ವಹಣೆ ಬಗ್ಗೆ ಪ್ರತಿನಿತ್ಯ ಪರಿಶೀಲಿಸಿ, ಅಂತರ್ಜಾಲದಲ್ಲಿ ವಿವರಗಳನ್ನು ದಾಖಲಿಸುವ ಮೂಲಕ ಸಾರ್ವಜನಿಕರ ಅವಶ್ಯಕತೆ ಹಾಗೂ ಕೆರೆ ಮತ್ತು ಉದ್ಯಾನವನಗಳ ಆಗು-ಹೋಗುಗಳನ್ನು ಇನ್ನು ಉತ್ತಮವಾಗಿ ನಿಗಾವಹಿಸಲು ಅನುವು ಮಾಡಿಕೊಳ್ಳುವ ಉದ್ದೇಶದಿಂದ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಪಾಲಿಕೆ ನಿರೀಕ್ಷಿಸಿದೆ.
ಮುಂದುವರಿದು, https://keremithra.bbmpgov.in/registration ಲಿಂಕ್ ಗೆ ಭೇಟಿ ನೀಡಿ ಕೆರೆ ಮಿತ್ರ ಹಾಗೂ https://hasirumithra.bbmpgov.in/registration ಲಿಂಕ್ ಗೆ ಭೇಟಿಕೊಟ್ಟು ಹಸಿರು ಮಿತ್ರ ಆಗಿ ನೊಂದಾಯಿಸಿಕೊಳ್ಳಬಹುದಾಗಿದೆ. ಜನವರಿ 31 ರ ಸಂಜೆ 5 ಗಂಟೆ ಒಳಗಡೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.