ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಅವರ ಧರ್ಮಪತ್ನಿ ಚನ್ನಮ್ಮ ನವರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಇಂದು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.






















