ಬೆಂಗಳೂರು, ಜ.26 www.bengaluruwire.com : ಕಾಂಗ್ರೆಸ್ ನೇತೃತ್ವದ ಸರ್ಕಾರ ಕಳೆದ ವರ್ಷ ರಾಜ್ಯದಲ್ಲಿ ಬಹುಮತ ಪಡೆದು ಅಧಿಕಾರ ಹಿಡಿದ ನಂತರದಲ್ಲಿ ಮುಂದಿನ ಲೋಕಸಭಾ ಚುನಾವಣೆ ಗಮದಲ್ಲಿಟ್ಟುಕೊಂಡು ತನ್ನ ಶಾಸಕರನ್ನು ಸಮಾಧಾನಪಡಿಸಲು ಗಣರಾಜ್ಯೋತ್ಸವದ ದಿನವಾದ ಇಂದು ರಾಜ್ಯದ 34 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನಡವಳಿಯ ಮೇಲೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಜ.26ರಂದು ಅಧಿಸೂಚನೆ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಸಿದೆ. ಈ ಎಲ್ಲಾ ಹುದ್ದೆಗಳು ಸಂಪುಟದರ್ಜೆ ಸ್ಥಾನಮಾನವನ್ನು ಹೊಂದಿದ್ದು ಇಂದಿನಿಂದ ಮುಂದಿನ ಎರಡು ವರ್ಷದವರೆಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಆದೇಶಿಸಿದೆ.
ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹೊರ ಬಿದ್ದಂತಾಗಿದೆ. ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಎನ್.ಎ.ಹ್ಯಾರೀಸ್ ಹೊರತುಪಡಿಸಿ ಇನ್ಯಾವ ರಾಜಧಾನಿಯ ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಒಲಿದುಬಂದಿಲ್ಲ. ಎನ್.ಎ.ಹ್ಯಾರೀಸ್ ಗೆ ಬಿಡಿಎ ಅಧ್ಯಕ್ಷ ಸ್ಥಾನವನ್ನು ಹಂಚಿಕೆ ಮಾಡಲಾಗಿದೆ.
ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಹಾಗೂ ಅಸಮಾಧಾನಿತ ಶಾಸಕರು, ಜಾತಿ ಲೆಕ್ಕಾಚಾರ ಮೊದಲಾದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಈ ನೇಮಕ ಇಮಾಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಕೆಳಕಂಡವರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ :