ಬೆಂಗಳೂರು, ಜ.31 www.bengaluruwire.com : ರಾಜ್ಯದಲ್ಲಿ 545 ಪಿಎಸ್‌ಐ (PSI) ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ( Karnataka Examination Authority – KEA) ಜ.23 ರಂದು ಮರುಪರೀಕ್ಷೆ ನಡೆಸಿದ್ದು, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಾತ್ಕಾಲಿಕ ಕೀ ಉತ್ತರಗಳಿಗೆ ಫೆ.5ರ ತನಕ ಆಕ್ಷೇಪಣೆ ಸಲ್ಲಿಸಬಹುದು.
ಈ ಬಾರಿ ಯಾವುದೇ ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಕೆಇಎ ಪ್ರಾಧಿಕಾರ ಯಶಸ್ವಿಯಾಗಿ ಪರೀಕ್ಷೆ ಕೈಗೊಂಡಿತ್ತು.
ಅಭ್ಯರ್ಥಿಗಳು ದಿನಾಂಕ ಫೆ.5 ನೇ ತಾರೀಖಿನ ಸಂಜೆ 5 ಗಂಟೆಯೊಳಗೆ ಪ್ರಾಧಿಕಾರದ ವೆಬ್ಸೈಟ್ನಲ್ಲಿ ನೀಡಲಾಗಿರುವ ಲಿಂಕ್ ಬಳಸಿ ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ.
https://cetonline.karnataka.gov.in/keawebentry456/PSI2023/PSI%20-%20PROVISIONAL%20ANSWER%20KEYkannada.pdf ಮೂಲಕ ಚೆಕ್ ಮಾಡಬಹುದು.
ಅಭ್ಯರ್ಥಿಗಳು ತಮ್ಮ ಬುಕ್ಲೆಟ್ ಪ್ರಕಾರ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು. ಆಕ್ಷೇಪಣೆ ಸಲ್ಲಿಸುವಾಗ ಅಗತ್ಯ ಪೂರಕ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಲಗತ್ತಿಸುವುದು ಕಡ್ಡಾಯವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. ಬಳಿಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕಳೆದ ಡಿಸೆಂಬರ್ 23ಕ್ಕೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿತ್ತು. ಆದರೆ ಹಲವು ಅಭ್ಯರ್ಥಿಗಳು ಮತ್ತು ಪ್ರತಿಪಕ್ಷ ಬಿಜೆಪಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿದ್ದವು. ಈ ಹಿನ್ನೆಲೆಯಲ್ಲಿ ಪಿಎಸ್ ಐ ನೇಮಕಾತಿ ಮರು ಪರೀಕ್ಷೆಯನ್ನು ಡಿ.23ರ ಬದಲು ಜ. 23ಕ್ಕೆ ನಡೆಸಲು ತೀರ್ಮಾನಿಸಲಾಗಿತ್ತು.
ಇದೀಗ ಪಿಎಸ್ ಐ ಮರು ಪರೀಕ್ಷೆಯ ಕೀ ಉತ್ತರ ಪ್ರಕಟವಾಗಿದ್ದು, ಅಭ್ಯರ್ಥಿಗಳು ಚೆಕ್ ಮಾಡಿಕೊಳ್ಳಬಹುದಾಗಿದೆ. ಹಾಗೆಯೇ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಪತ್ರ, ಇ-ಮೇಲ್ ಮೂಲಕ ಕಳಿಸುವ ಆಕ್ಷೇಪಣೆಗಳನ್ನು ಪುರಸ್ಕರಿಸುವುದಿಲ್ಲ ಎಂದು ಕೆಇಎ ತಿಳಿಸಿದೆ.