ನವದೆಹಲಿ, ಫೆ.3 www.bengaluruwire.com : ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ (L K Advani)ಯವರಿಗೆ ಕೇಂದ್ರ ಸರ್ಕಾರ ದೇಶದ ಸರ್ವನ್ನೋತ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಅಧಿಕೃತ ಎಕ್ಸ್ ಖಾತೆಯಲ್ಲಿ ತಿಳಿಸಿರುವ ಅವರು, “ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುತ್ತದೆ ಎಂಬ ವಿಷಯ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ, ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ.” ಎಂದು ಹೇಳಿದ್ದಾರೆ.
“ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಿಂದ ಹಿಡಿದು ನಮ್ಮ ದೇಶದ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದ್ದಾಗಿದೆ. ಅವರು ನಮ್ಮ ಗೃಹ ಮಂತ್ರಿ ಮತ್ತು ವಾರ್ತಾ ಮತ್ತು ಪ್ರಸಾರ ಖಾತೆ (I&B) ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಎಲ್ಲರಿಗೂ ಆದರ್ಶಪ್ರಾಯ ಹಾಗೂ ಶ್ರೀಮಂತ ಒಳನೋಟಗಳಿಂದ ತುಂಬಿವೆ” ಎಂದು ಮೋದಿ ಕೊಂಡಾಡಿದ್ದಾರೆ.
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.