ಬೆಂಗಳೂರು, ಫೆ.20 www.bengaluruwire.com : ರಾಜ್ಯದಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ (Second PUC) ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ನಡೆಯಲಿದೆ.
ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.
ಎಸ್ಎಸ್ಎಲ್ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಪರೀಕ್ಷೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ದಿನಾಂಕ ಈ ಕೆಳಕಂಡಿದೆ :
* 25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ
-ಕನ್ನಡ,ತೆಲುಗು ,ಹಿಂದಿ,ಮರಾಠಿ, ತಮಿಳು,ಉರ್ದು,ಇಂಗ್ಲಿಷ್, +ಇಂಗ್ಲಿಷ್NCERT)
* 27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ
* 30-03-2024 ರಂದು,ವಿಜ್ಞಾನ ,ರಾಜ್ಯಶಾಸ್ತ್ರ ಪರೀಕ್ಷೆ
* 02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ
* 03-04-2024 ಅರ್ಥಶಾಸ್ತ್ರ ಪರೀಕ್ಷೆ
ದ್ವೀತಿಯ ಪಿಯುಸಿ ಪರೀಕ್ಷೆಯು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ. ಪರೀಕ್ಷಾ ವೇಳಾಪಟ್ಟಿ ಮಾಹಿತಿ ಈ ಕೆಳಕಂಡಂತಿದೆ :
*01-03-2024 ರಂದು ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
*04-03-2024 ರಂದು ಗಣಿತ ಪರೀಕ್ಷೆ
*05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
*06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ
*07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
*09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
*11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
*13-03-2024 ರಂದು ಇಂಗ್ಲಿಷ್ ಪರೀಕ್ಷೆ
*15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
*16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
*18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
*20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
*22-03-2024 ರಂದು ಹಿಂದಿ ಪರೀಕ್ಷೆ