ಬೆಂಗಳೂರು, ಫೆ.23 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಸರ್ಕಾರದ ಆದೇಶದಂತೆ ಒಂದು ಬಾರಿ ಪರಿಹಾರ ‘One Time Settlement’(OTS) ಅನ್ನು ಆನ್‌ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಒಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 31 ರ ಒಳಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಈ ಯೋಜನೆ ಜಾರಿಯಲ್ಲಿರುತ್ತದೆ ಎಂದು ಬಿಬಿಎಂಪಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯ ಸರ್ಕಾರವು ಫೆಬ್ರವರಿ 22 ರಂದು ಗುರುವಾರ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್ – OTS) ಯೋಜನೆಯ ಕುರಿತು ಅಧಿಸೂಚನೆ ಹೊರಡಿಸಿದೆ. ಅದರಂತೆ ಪಾಲಿಕೆಯ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸುವ ಸಾಪ್ಟ್ ವೇರ್ ನಲ್ಲಿ ಒಟಿಎಸ್ ಅನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ನಾಗರೀಕರು ಈಗ ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಪಡೆದು ಆನ್‌ಲೈನ್‌ನಲ್ಲಿ ಆಸ್ತಿ ತೆರಿಗೆ ಪಾವತಿಸಬಹುದಾಗಿದೆ.
ಬಿಬಿಎಂಪಿಯ ಆನ್‌ಲೈನ್ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ ಒಟಿಎಸ್ ಆದೇಶವನ್ನು ಜಾರಿಗೆ ತಂದಿದ್ದು, ನಾಗರೀಕರು ಸಂಪೂರ್ಣ ಬಡ್ಡಿ ಮನ್ನಾ, ವಂಚನೆ ಪ್ರಕರಣಗಳಲ್ಲಿ ಶೇ .50 ರಷ್ಟು ದಂಡ ಕಡಿತ ಹಾಗೂ ವಸತಿ ಮತ್ತು ಮಿಶ್ರ ಬಳಕೆಗೆ ಪ್ರಕರಣಗಳಲ್ಲಿ ಮಾತ್ರ ಗರಿಷ್ಟ 5 ವರ್ಷಗಳ ಮಿತಿಯ ಪ್ರಯೋಜನವನ್ನು ತಕ್ಷಣವೇ ಪಡೆಯಬಹುದಾಗಿದೆ.
ಪಾಲಿಕೆಯ ಅಧಿಕೃತ ವೆಬ್ ಸೈಟ್ https://bbmptax.karnataka.gov.inಗೆ ಭೇಟಿ ನೀಡಿ, ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಆನ್‌ಲೈನ್‌ನಲ್ಲಿ ಪಡೆದು ಪಾವತಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಈ ಕೆಳಕಂಡ ಸರ್ಕಾರದ ಅಧಿಸೂಚನೆ ಗಮನಿಸಿ :