ಬೆಂಗಳೂರು, ಫೆ.25 www.bengaluruwire.com : ರಾಜಧಾನಿ ಬೆಂಗಳೂರಲ್ಲಿ ಬೇಸಿಗೆ ಕಾಲ ಬರುವ ಮುನ್ನವೇ ನೀರಿಗಾಗಿ ಹಾಹಾಕಾರ ಕಂಡುಬಂದಿದೆ. ಸಾವಿರಾರು ಬೋಋ ವೆಲ್ ಗಳಲ್ಲಿ ನೀರು ಬತ್ತಿ ಹೋಗಿದೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಒಳ ಚರಂಡಿ ಮಂಡಳಿ (BWSSB)ಯು ಸುಗಮ ನೀರು ಪೂರೈಕೆಗಾಗಿ ತುರ್ತು ನಿರ್ವಹಣೆ ಕಾರ್ಯ ಕೈಗೊಳ್ಳುವ ಹಿನ್ನಲೆಯಲ್ಲಿ ನಗರದ ಬಹುತೇಕ ಪ್ರದೇಶದಲ್ಲಿ ಫೆಬ್ರವರಿ 27 ಬೆಳಿಗ್ಗೆ 6 ಗಂಟೆಯಿಂದ 28 ಬೆಳಿಗ್ಗೆ 6ರ ತನಕ ನೀರಿನ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.
ಹೀಗಾಗಿ ಸಾರ್ವಜನಿಕರು ಈ ದಿನಕ್ಕೆ ಮುನ್ನ ಕುಡಿಯುವ ನೀರನ್ನು ಅಗತ್ಯ ಪ್ರಮಾಣದಲ್ಲಿ ಸಂಗ್ರಹಿಸಿಕೊಂಡರೆ ಉತ್ತಮ.
ಜಲಮಂಡಳಿಯು ನೀರಿನ ಬಲ್ಕ್ ಫ್ಲೋ ಮೀಟರ್‌ಗಳನ್ನು ಅಳವಡಿಸುವ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಳ್ಳಳಿದೆ. ಹೀಗಾಗಿ ಬಿಡಬ್ಲ್ಯುಎಸ್ ಎಸ್ ಬಿ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಿರಲಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಈ ದಿನಗಳಂದು ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವೆಲ್ಲಾ ಪ್ರದೇಶಗಳಲ್ಲಿ ನೀರಿನ ಪೂರೈಕೆ ವ್ಯತ್ಯಯವಿರಲಿದೆ? :
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.