ಬೆಂಗಳೂರು, ಫೆ.25 www.bengaluruwire.com : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕರಿಸಿದರು.
ಭಾನುವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಮಾಜಿ ಕೇಂದ್ರ ಸಚಿವರಾದ ಡಾ.ಎಂ. ವೀರಪ್ಪ ಮೊಯಿಲಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






















