ಬೆಂಗಳೂರು, ಮೇ.7 www.bengaluruwire.com : ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಪೂರ್ವ ಗಾಳಿ ಮಳೆಗೆ ಹಲವು ವಿದ್ಯುತ್ ಕಂಬಗಳು ಮುರಿದು, ವಿದ್ಯುತ್ ಮೂಲ ಸೌಕರ್ಯಗಳು ಹಾನಿಗೊಳಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ಸಾಕಷ್ಟು ದೂರುಗಳು ಹರಿದು ಬಂದಿದೆ.
ಈ ಹಿನ್ನಲೆಯಲ್ಲಿ ಸಹಾಯವಾಣಿ ಮೇಲಿನ ಒತ್ತಡ ನಿವಾರಿಸಿ, ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು 8 ಜಿಲ್ಲೆಗಳಲ್ಲಿ ಪಯಾರ್ಯ ವಾಟ್ಸಪ್ ಸಂಖ್ಯೆಗಳನ್ನು ವ್ಯವಸ್ಥೆ ಮಾಡಲಾಗಿದೆ.
ಈ ವಾಟ್ಸಪ್ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ.
ಇನ್ನೂರು ಓದಿ : Crime News | ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ – ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಜಿಲ್ಲಾವಾರು ವಾಟ್ಸ್ ಆಪ್ ಸಂಖ್ಯೆಗಳು ಹೀಗಿದೆ :
ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021.
ವಿದ್ಯುತ್ ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ ಪ್ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸಪ್ ಸಂಖ್ಯೆ- 9449844640.
ಇದರ ಜೊತೆಗೆ ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ ಎಸ್ ಎಂಎಸ್ ಗಳನ್ನು ಮಾತ್ರ ಕಳುಹಿಸಲು, ಈ ಕೆಳಗಿನ 12 ಮೊಬೈಲ್ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ : 9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.